Andolana originals

ಯಾರಿಗೆ ಒಲಿಯಲಿದೆ ದಸರಾ ಉದ್ಘಾಟನೆ ಭಾಗ್ಯ?

ಕೆ.ಬಿ.ರಮೇಶನಾಯಕ

ಮೈಸೂರು: ಜನರನ್ನು ಸೂಜಿಗಲ್ಲಿನಂತೆ ಆಕರ್ಷಿಸುವ ನಾಡಹಬ್ಬ ದಸರಾ ಮಹೋತ್ಸವದ ಸಿದ್ಧತೆಗಳು ನಡೆಯುತ್ತಿದ್ದು, ಈ ಬಾರಿ ನಾಡಹಬ್ಬಕ್ಕೆ ವಿಧ್ಯುಕ್ತವಾಗಿ ಚಾಲನೆ ಕೊಡುವ ಉದ್ಘಾಟಕರ ಭಾಗ್ಯ ಯಾರಿಗೆ ಒಲಿಯಲಿದೆ ಎನ್ನುವ ಕುತೂಹಲ ಗರಿಗೆದರಿದೆ.

2013ರಿಂದ2018ರವರೆಗೆ ಐದು ವರ್ಷಗಳ ಕಾಲ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಹಿತ್ಯ ವಲಯದ ಗಣ್ಯರಿಗೆ ಅವಕಾಶ ಮಾಡಿಕೊಟ್ಟಿದ್ದರು. ಕಳೆದ ವರ್ಷ ಚಲನಚಿತ್ರ ಸಂಗೀತ ನಿರ್ದೇಶಕ ಹಂಸಲೇಖ ಅವರನ್ನು ಆಯ್ಕೆ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಾರಿ ಯಾರಿಗೆ ಮಣೆ ಹಾಕುತ್ತಾರೆ ಎನ್ನುವುದನ್ನು ಕಾದು ನೋಡಬೇ ಕಾಗಿದೆ ಸದ್ಯಕ್ಕೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇ ಶನ ಅಕ್ರಮ ಹಂಚಿಕೆ ಪ್ರಕರಣ ದಲ್ಲಿ ತಲೆಬಿಸಿಯ ನಡುವೆಯೂ ಸಿದ್ದರಾಮಯ್ಯ ಅವರು ಹಳೇ ಮೈಸೂರು ಪ್ರಾಂತ್ಯಕ್ಕೆ ಸೇರಿದ ಸಾಹಿತ್ಯ ದಿಗ್ಗಜರಲ್ಲಿ ಹಿರಿಯ ವಿದ್ವಾಂಸರೊಬ್ಬರನ್ನು ಆಯ್ಕೆ ಮಾಡುವುದಕ್ಕೆ ಚಿಂತನೆ ನಡೆಸಿದ್ದಾರೆ ಎಂದು
ಮೂಲಗಳು ಹೇಳಿವೆ.

2023ರ ದಸರಾ ಉದ್ಘಾಟನೆಗೆ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರನ್ನು ಆಹ್ವಾನಿಸುವಂತೆ ಕೃಷ್ಣರಾಜ ಕ್ಷೇತ್ರದ ಶಾಸಕ ಟಿ.ಎಸ್. ಶ್ರೀವತ್ಸ ಪ್ರಸ್ತಾಪ ಮಾಡಿದ್ದರು. ಆದರೆ, ಸಿಎಂ ಅವರು ನಾದಬ್ರಹ್ಮ ಹಂಸಲೇಖ ಅವರನ್ನು ಆಯ್ಕೆ ಮಾಡುವ ಮೂಲಕ ಅಚ್ಚರಿ ಮೂಡಿಸಿದ್ದರು. ಅದೇ ರೀತಿ ಈ ಬಾರಿಯೂ ದಸರಾ ಉನ್ನತಾಧಿಕಾರ ಸಭೆಯಲ್ಲಿ ಮತ್ತೊಮ್ಮೆ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರನ್ನು ಆಹ್ವಾನಿಸುವಂತೆ ಪ್ರಸ್ತಾಪ ಮಾಡಿದ್ದರೂ ಆಯ್ಕೆಯ ಹೊಣೆಯನ್ನು ಸಮಿತಿಯು ಸಿಎಂ ವಿವೇಚನೆಗೆ ಬಿಟ್ಟಿದೆ.

ಹೀಗಾಗಿ, 2024ರ ದಸರಾ ಉದ್ಘಾಟಕರು ಯಾರಾಗ ಬಹುದೆಂಬ ಕುತೂಹಲ ಲಕ್ಷಾಂತರ ಜನರ ಮನಸ್ಸಿನಲ್ಲಿ ಮನೆ ಮಾಡಿದೆ. ಅಕ್ಟೋಬರ್ 3ರಂದು ನಾಡ ಅಧಿದೇವತೆ ಚಾಮುಂಡೇಶ್ವರಿಯ ಸನ್ನಿಧಿಯಲ್ಲಿ ಬೆಳಿಗ್ಗೆ 9.15ರಿಂದ 9.45ರ ಒಳಗೆ ಉದ್ಘಾಟಕರು ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ನವರಾತ್ರಿಯ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ.

29ರ ನಂತರ ಆಯ್ಕೆ ಪ್ರಕ್ರಿಯೆ: ದಸರಾ ಉಪ ಸಮಿತಿಗಳಿಗೆ ಈಗಾಗಲೇ ಉಪ ವಿಶೇಷಾಧಿಕಾರಿಗಳು,ಕಾ ರ್ಯಾಧ್ಯಕ್ಷರು, ಕಾರ್ಯದರ್ಶಿಗಳನ್ನು ನೇಮಿಸಿದ್ದು, ಅಧಿಕಾರೇತರ ಸಮಿತಿ ರಚನೆ ಮಾಡಲಾಗಿದೆ. ಸದ್ಯದ ಮಟ್ಟಿಗೆ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಆ.29ರ ಹೈಕೋರ್ಟ್ ತೀರ್ಪು ಮತ್ತು ನಂತರದ ಬೆಳವಣಿಗೆಗಳ ಬಗ್ಗೆ ತಲೆಬಿಸಿ ಮಾಡಿಕೊಂಡಿರುವ ಸಿಎಂ ಅವರು ಬೇರೆ ವಿಚಾರಕ್ಕೆ ಗಮನಹರಿಸಿಲ್ಲ. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ದಸರಾ ಮಹೋತ್ಸ ವದ ಜಿಲ್ಲಾ ಕಾರ್ಯಕಾರಿ ಸಮಿತಿ ಅಧ್ಯಕ್ಷರಾಗಿರುವ ಕಾರಣ ಅಧಿಕಾರೇತರ ಸಮಿತಿಗೆ ಆಯ್ಕೆ ಮಾಡುವ ಪಟ್ಟಿಯೇ ಅಂತಿಮವಾದರೂ ಮುಖ್ಯಮಂತ್ರಿ ಸಿದ್ದ ರಾಮಯ್ಯ ಅವರೊಂದಿಗೆ ಸಮಾಲೋಚಿಸಿದ ಬಳಿಕ ಆಯ್ಕೆ ನಡೆಯಲಿದೆ. ಮೈಸೂರು ನಗರ ಮತ್ತು ಗ್ರಾಮಾಂತರ ಪ್ರದೇಶದ ಮುಖಂಡರಿಗೆ ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನಗಳನ್ನು ಕೊಡಬೇಕಿರುವ ಕಾರಣ ಸಚಿವ ಕೆ.ವೆಂಕಟೇಶ್, ಶಾಸಕರಾದ ತರ್‌ಸೇ‌, ಕೆ. ಹರೀಶ್‌ ಗೌಡ,ಅನಿಲ್ ಚಿಕ್ಕಮಾದು, ದರ್ಶನ್ ಧ್ರುವನಾರಾಯಣ, ಡಿ.ರವಿಶಂಕರ್, ಸಂಸದ ಸುನಿಲ್ ಬೋಸ್ ನೀಡುವ ಹೆಸರುಗಳನ್ನು ಪರಿಗಣಿಸಿ ಅಂತಿಮ ಗೊಳಿಸಿದ ಮೇಲೆ ಜಿಲ್ಲಾಧಿಕಾರಿಗಳಿಗೆ ಕಳುಹಿಸಿ ಕೊಡಲಾ ಗುತ್ತದೆ ಎಂದು ಹೇಳಲಾಗಿದೆ.

ಉಪ ಸಮಿತಿಗಳಿಗೆ ಅಧ್ಯಕ್ಷರು-ಉಪಾಧ್ಯಕ್ಷರನ್ನು ಆಯ್ಕೆ ಮಾಡಿದರೂ ದಸರಾ ಸಮೀಪಿಸುವಾಗ ಬಿಡುಗಡೆ ಮಾಡಲಿದ್ದು, ಒಂದೊಂದು ಸಮಿತಿಗೂ 40 ಮಂದಿ ಸದಸ್ಯರನ್ನು ಆಯ್ಕೆ ಮಾಡಲಾಗುತ್ತದೆ ಶಾಸಕರೊಬ್ಬರು ಹೇಳಿದರು.
ಎಂದು ಹೇಳಲಾಗಿದೆ.

ಸಿಎಂ ವಿವೇಚನೆಗೆ ಬಿಡಲಾಗಿದೆ
ದಸರಾ ಸಿದ್ಧತೆಗಳು ನಡೆಯುತ್ತಿವೆ. ದಸರಾ ಉದ್ಘಾಟಕರನ್ನು ಆಯ್ಕೆ ಮಾಡುವ ಹೊಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತೀರ್ಮಾನಕ್ಕೆ ಬಿಡಲಾಗಿದೆ. ಯಾರನ್ನು ಆಯ್ಕೆ ಮಾಡುತ್ತಾರೋ ಅವರಿಗೆ ಸರ್ಕಾರದ ಪರವಾಗಿ ಆಮಂತ್ರಣ ನೀಡಲಾಗುವುದು. ನಾಡಹಬ್ಬ ದಸರಾ ಜನರ ದಸರಾವಾಗಿದೆ. ಪ್ರಜಾಪ್ರಭುತ್ವ, ಪಂಚ ಗ್ಯಾರಂಟಿ, ಸಂವಿಧಾನದ ಮೌಲ್ಯಗಳನ್ನು ಬಿಂಬಿಸುವಂತಹ ಕಾರ್ಯಕ್ರಮಗಳು ನಡೆಯಲಿವೆ.

ಡಾ.ಎಚ್.ಸಿ.ಮಹದೇವಪ್ಪ,
ಜಿಲ್ಲಾ ಉಸ್ತುವಾರಿ ಸಚಿವರು.

• ದಸರಾ ಉದ್ಘಾಟಕರ ಆಯ್ಕೆ ಸಿದ್ದರಾಮಯ್ಯ ಅವರದ್ದೇ ಅಂತಿಮ ತೀರ್ಮಾನ
• ಆ.29ರ ನಂತರ ಉಪ ಸಮಿತಿಗಳ ಅಧಿಕಾರೇತರ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ
• ಲಕ್ಷಾಂತರ ಜನರ ಮನದಾಳದಲ್ಲಿ ಪುಟಿಯುತ್ತಿರುವ ಕುತೂಹಲ

ಕೆ.ಬಿ. ರಮೇಶ ನಾಯಕ

ಪ್ರಸ್ತುತ ಆಂದೋಲನ ದಿನಪತ್ರಿಕೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿರುವ ನಾನು ಮೂಲತಃ ಚಾಮರಾಜನಗರ ತಾಲ್ಲೂಕು ಮತ್ತು ಜಿಲ್ಲೆಯ ಕಣ್ಣೇಗಾಲ ಗ್ರಾಮದವನು. ಚಾಮರಾಜನಗರ ತಾಲ್ಲೂಕಿನ ಆಲೂರು ಗ್ರಾಮದಲ್ಲಿ ಪ್ರಾಥಮಿಕ,ಪ್ರೌಢಶಿಕ್ಷಣ, ಚಾಮರಾಜನಗರದಲ್ಲಿ ಪಿಯುಸಿ ವ್ಯಾಸಂಗ ಮಾಡಿದ ನಾನು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದೇನೆ. 1992ರಿಂದ 2002ರವರೆಗೆ ಮೈಸೂರು ಮಿತ್ರ ಪತ್ರಿಕೆಯಲ್ಲಿ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಸೇವೆ ಸಲ್ಲಿಸಿದ ಬಳಿಕ 2002ರಿಂದ 2012ರವರೆಗೆ ಸಂಯುಕ್ತ ಕರ್ನಾಟಕ ಮೈಸೂರು ಪ್ರಾದೇಶಿಕ ಕಚೇರಿಯಲ್ಲಿ ವರದಿಗಾರನಾಗಿ, 2013ರಿಂದ 2015ರವರೆಗೆ ಹಾಸನ ಮತ್ತು ಮೈಸೂರಿನಲ್ಲಿ ವಿಜಯ ಕರ್ನಾಟಕ ಹಿರಿಯ ವರದಿಗಾರನಾಗಿ, 2015ರಿಂದ 2017ರವರೆಗೆ ಸಂಯುಕ್ತ ಕರ್ನಾಟಕ ಮುಖ್ಯ ವರದಿಗಾರನಾಗಿ, 2017ರಿಂದ 2020 ಜೂನ್‌ವರಗೆ ವಿಶ್ವವಾಣಿ ಮೈಸೂರು ಬ್ಯೂರೋ ಮುಖ್ಯಸ್ಥರಾಗಿ ಕೆಲಸ ನಿರ್ವಹಿಸಿದ್ದೇನೆ.

Recent Posts

ವಾಹನ ಸಂಚಾರಕ್ಕೆ ಸಂಚಕಾರ ತರುತ್ತಿರುವ ಅವರೆಕಾಯಿ ವ್ಯಾಪಾರ

ದಾ.ರಾ. ಮಹೇಶ್‌ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…

42 mins ago

ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

ಮಂಡ್ಯ: ಇಂದಿನಿಂದ ( ಡಿಸೆಂಬರ್‌ 20 ) ಮೂರು ದಿನಗಳ ಕಾಲ ನಡೆಯಲಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ…

2 hours ago

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…

10 hours ago

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

11 hours ago

ನಾನು ಅಶ್ಲೀಲ ಪದ ಬಳಸಿಲ್ಲ : ಪೊಲೀಸರ ಬಳಿ ಸಿ.ಟಿ ರವಿ ಹೇಳಿಕೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…

11 hours ago

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

11 hours ago