ಓದುಗರ ಪತ್ರ
ಚಾಮರಾಜನಗರದಲ್ಲಿರುವ ಸುವರ್ಣಾವತಿ ಮತ್ತು ಚಿಕ್ಕಹೊಳೆ ಜಲಾಶಯಗಳಿಗೆ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿರುವುದು ಸೂಕ್ತವಾದ ಕ್ರಮವಲ್ಲ. ಇಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯು ತಮಿಳುನಾಡಿನ ಅನೇಕ ಸ್ಥಳಗಳಿಗೆ ಸಂಪರ್ಕ ಕಲ್ಪಿಸುವುದರಿಂದ ಇಲ್ಲಿ ಸಂಚರಿಸುವ ಪ್ರವಾಸಿಗರು ಜಲಾಶಯಗಳ ಪ್ರಕೃತಿ ಸೌಂದರ್ಯ ಸವಿಯುತ್ತಿದ್ದರು.
ಜಲಾಶಯಗಳಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿರುವ ಹಿನ್ನೆಲೆಯಲ್ಲಿ ಪ್ರವಾಸಿಗರ ಸಂಖ್ಯೆ ಕಡಿಮೆಯಾಗುವುದಲ್ಲದೇ ಅನ್ಯದಾರಿಗಳ ಮೂಲಕ ಒಳಹೋಗಲು ಅವಕಾಶ ಕಲ್ಪಿಸಿದಂತಾಗಿದೆ. ಈ ಜಲಾಶಯಗಳಿಗೆ ಇಪ್ಪತ್ತು ವರ್ಷಗಳ ಹಿಂದೆ ಹೆಚ್ಚು ಪ್ರಮಾಣದಲ್ಲಿ ಪ್ರವಾಸಿಗರು ಬರುತ್ತಿದ್ದರು.
ತದ ನಂತರದಲ್ಲಿ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿದೆ. ಈ ಜಲಾಶಯದಲ್ಲಿರುವ ವಿದ್ಯುತ್ ದೀಪಗಳೂ ಹಾಳಾಗಿರುವುದರಿಂದ ಜಲಾಶಯಗಳಿಗೆ ಸೂಕ್ತ ಭದ್ರತೆಯೊಂದಿಗೆ, ಸೂಕ್ತ ಕ್ರಮಗಳನ್ನು ಕೈಗೊಂಡು ಪ್ರವಾಸಿಗರಿಗೆ ಮತ್ತು ಜಿಲ್ಲೆಯ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅಭಿವೃದ್ಧಿ ಪಡಿಸಲು ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕಾಗಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…