Andolana originals

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ

ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ ಓವರ್ (ಮೇಲ್ಸೇತುವೆ)ಗಳ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದ್ದು, ಇದರಿಂದ ವಾಹನಗಳ ಸಂಚಾರಕ್ಕೆ ತೀವ್ರ ಅಡಚಣೆಯಾಗುತ್ತಿದೆ. ಈ ಎರಡೂ ಫ್ಲೈಓವರ್ಗಳ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಮೈಸೂರು-ಬೆಂಗಳೂರು ರಸ್ತೆಯ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ , ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾಣವಾಗುತ್ತಿರುವ ಫ್ಲೈ ಓವರ್ ಕಾಮಗಾರಿ ನಡೆಯುತ್ತಿ ರುವುದು ಸರಿಯಷ್ಟೇ. ಆದರೆ ಕಾಮಗಾರಿಯನ್ನು ವಿಳಂಬ ಮಾಡದೇ ಬೇಗ ಮುಗಿಸಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಎಂಬುದು ಜನರ ಆಶಯವಾಗಿದೆ. ಜನವರಿ ತಿಂಗಳಿನಿಂದ ಮಣಿಪಾಲ್ ಜಂಕ್ಷನ್ ೧.೬ ಕಿ.ಮೀ. ಗ್ರೇಡ್ ಸೆಪರೇಟರ್ (ಫ್ಲೈ ಓವರ್) ಕಾಮಗಾರಿಯು ೬೮ ಕೋಟಿ ರೂ.ವೆಚ್ಚದಲ್ಲಿ ಆರಂಭವಾಗಿದ್ದು, ೨೦೨೭ರ ಮೇ ಅಂತ್ಯದಲ್ಲಿ ಪೂರ್ಣಗೊಳ್ಳಲಿದೆ ಎನ್ನಲಾಗಿದೆ. ಅಲ್ಲದೇ, ಎಪಿಎಂಸಿ ಗೇಟ-೧ ರಿಂದ ರಿಂಗ್ ರಸ್ತೆ ಜಂಕ್ಷನ್ ದಾಟಿ ಎಪಿಎಂಸಿ ೨ನೇ ಗೇಟ್‌ವರೆಗೆ ೫೦ ಕೋಟಿ ರೂ. ವೆಚ್ಚದಲ್ಲಿ ಹೊಸ ಫ್ಲೈ ಓವರ್ ಕಾಮಗಾರಿ ಭರದಿಂದ ಸಾಗಿದ್ದು, ೨೦೨೭ರ ಏಪ್ರಿಲ್ನಲ್ಲಿ ಪೂರ್ಣಗೊಳ್ಳಲಿದೆ ಎಂದು ರಾಷ್ಟ್ರೀಯ ರಸ್ತೆ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಮೈಸೂರು- ಬೆಂಗಳೂರು ಫ್ಲೈ ಓವರ್ಕಾ ಮಗಾರಿಯಿಂದ ವಾಹನ ದಟ್ಟಣೆ , ಸಂಚಾರ ಸಮಸ್ಯೆಯನ್ನು ಜಿಲ್ಲಾಧಿಕಾರಿ ಜಿ. ಲಕ್ಷ್ಮಿಕಾಂತರೆಡ್ಡಿ, ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ರಾಷ್ಟ್ರೀಯ ಅಭಿವೃದ್ದಿ ಪ್ರಾಧಿಕಾರದ ಅಧಿಕಾರಿಗಳು , ಇತ್ತೀಚೆಗೆ ಪರಿಶೀಲಿಸಿದ್ದಾರೆ. ದಸರಾ ವೇಳೆಯಲ್ಲಿ ವಾಹನ ಸಂಚಾರ ದಟ್ಟಣೆಯಾಗಲಿದ್ದು, ವಾಹನ ನಿಯಂತ್ರಣ ಹಾಗೂ ಪರ್ಯಾಯ ಮಾರ್ಗಗಳ ಬಗ್ಗೆ ಚರ್ಚಿಸಿದ್ದಾರೆ.

” ಫ್ಲೈ ಓವರ್‌ ಕಾಮಗಾರಿ ಶುರುವಾಗಿ ಐದಾರು ತಿಂಗಳು ಆಗಿದೆ. ಕಾಮಗಾರಿ ನಡುವೆ ಈ ರಸ್ತೆ ಸಂಪರ್ಕಿಸುವ ರಸ್ತೆಯಲ್ಲಿ ವೈಟ್ ಟ್ಯಾಪಿಂಗ್ ಹಾಕುತ್ತಿರುವುದು ಆಟೋ ಚಾಲಕರು ಸೇರಿದಂತೆ ವಾಹನ ಸವಾರರು ಬಳಸಿಕೊಂಡು ಬೇರೆ ಬೇರೆ ಕಡೆಗೆ ಹೋಗುವಂತಾಗಿದೆ. ಅಲ್ಲದೆ, ಬಸ್‌ಗಾಗಿ ಕಾಯುವ ಪ್ರಯಾಣಿ ಕರೂ ದೂಳಿನಲ್ಲಿ ನಿಲ್ಲುವಂತಾಗಿದೆ. ಫ್ಲೈ ಓವರ್ ಕಾಮಗಾರಿ ಬೇಗ ಪೂರ್ಣಗೊಳಿಸಲಿ.”

-ಸಲ್ಮಾನ್, ಆಟೋ ಚಾಲಕ

” ಮೈಸೂರು-ಬೆಂಗಳೂರು ರಸ್ತೆಯ ಜಂಕ್ಷನ್‌ನಲ್ಲಿ ಫ್ಲೈ ಓವರ್ ನಿರ್ಮಾಣ ಮಾಡುವುದು ಒಳ್ಳೆ ಯದೇ, ಏಕೆಂದರೆ ದಿನದಿನಕ್ಕೆ ಪ್ರವಾಸಿಗರ ಸಂಖ್ಯೆ ಹೆಚ್ಚಳವಾಗುತ್ತಿದ್ದಂತೆ ವಾಹನಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಇದರಿಂದ ಸಂಚಾರ ನಿಯಂತ್ರಣಕ್ಕೆ ಪರದಾಡುವಂತಾಗಿದೆ. ಕಾಮಗಾರಿ ಹಿನ್ನೆಲೆಯಲ್ಲಿ ವಾಹನ ಸವಾರರು ಪರದಾಡುತ್ತಿದ್ದಾರೆ. ಇಲ್ಲಿನ ಆಟೋ ಚಾಲಕರು, ಸ್ಥಳೀಯ ವಾಹನ ಸವಾರರು ಪರದಾಡುತ್ತಿದ್ದಾರೆ.”

-ಅಲೀಂ ಪಾಷ, ಆಟೋ ಚಾಲಕ

” ಮೈಸೂರು-ಬೆಂಗಳೂರು ರಸ್ತೆಯಲ್ಲಿ ವಾಹನಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಇದರಿಂದ ಅಪಘಾತಗಳು ಕೂಡ ಹೆಚ್ಚಳವಾಗುತ್ತಿವೆ. ವಾಹನ ಸುಗಮ ಸಂಚಾರಕ್ಕೆ ಫ್ಲೈ ಓವರ್ ಅಗತ್ಯವಾಗಿದೆ. ಕಾಮಗಾರಿ ಆರಂಭಿಸುವ ಮುನ್ನ, ಈ ಮಾರ್ಗಕ್ಕೆ , ಬದಲಿ ಮಾರ್ಗದ ಮೂಲಕ ಮೈಸೂರು ನಗರಕ್ಕೆ ಪ್ರವೇಶ ಮಾಡುವಂತೆ ಮಾಡಬೇಕು. ಫ್ಲೈ ಓವರ್ ಕಾಮಗಾರಿಯನ್ನು ಬೇಗ ಮುಗಿಸಿ, ಸಂಚಾರಕ್ಕೆ ಅನುಕೂಲ ಕಲ್ಪಿಸಲಿ.”

-ಜಬೀವುಲ್ಲ, ಆಟೋ ಚಾಲಕ

” ವೇಗವಾಗಿ ಬೆಳೆಯುತ್ತಿರುವ ಮೈಸೂರಿಗೆ, ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಕಡೆಗಳಿಂದ, ಬೇರೆ ಬೇರೆ ರಾಜ್ಯಗಳಿಂದ ನಿತ್ಯ ಲಕ್ಷಾಂತರ ವಾಹನಗಳು ಸಂಚಾರ ಮಾಡುತ್ತಿವೆ. ವಾಹನ ಸುಗಮ ಸಂಚಾರಕ್ಕೆ ಫ್ಲೈ ಓವರ್ ನಿರ್ಮಾಣ ಅನುಕೂಲವಾಗಲಿದೆ. ಅಭಿವೃದ್ಧಿ ಎಂದ ಮೇಲೆ ಅಡಚಣೆಗಳು ಎದುರಾಗುವುದು ಸಹಜ.”

-ಸುಂದರಪ್ಪ, ಸ್ಥಳೀಯರು

” ಮೈಸೂರಿಗೆ ಬರುತ್ತಿರುವ ವಾಹನಗಳ ಸಂಖ್ಯೆಯನ್ನು ಗಮನಿಸಿದರೆ, – ಓವರ್ ನಿರ್ಮಾಣ ಅಗತ್ಯವಿದೆ. ಫ್ಲೈ ಓವರ್ ಕಾಮಗಾರಿ ಆರಂಭವಾದಾಗಿನಿಂದಲೂ ಜಂಕ್ಷನ್‌ನಲ್ಲಿ ವಾಹನ ದಟ್ಟಣೆ ಹೆಚ್ಚಾಗಿದೆ, ಇದಕ್ಕೆ ಪರಿಹಾರ ಮಾರ್ಗ ಹುಡುಕಿ, ವಾಹನ ದಟ್ಟಣೆಯಾಗದಂತೆ ಮಾಡಬೇಕು.”

 -ಮಹಮ್ಮದ್ ಅನ್ಸಾರ್, ಸ್ಥಳೀಯರು

” ಮೈಸೂರು ಕೂಡ ವೇಗವಾಗಿ ಬೆಳೆಯುತ್ತಿರುವುದರಿಂದ, ಮೈಸೂರು-ಬೆಂಗಳೂರು ಜಂಕ್ಷನ್ ಬಳಿ ವಾಹನ ಸಂಖ್ಯೆ ಕೂಡ ಹೆಚ್ಚಳವಾಗುತ್ತಿದೆ. ವಾಹನ ದಟ್ಟಣೆ ನಿಯಂತ್ರಣಕ್ಕೆ ಹಾಗೂ ಸುಗಮ ಸಂಚಾರಕ್ಕೆ ಫ್ಲೈ ಓವರ್ಅ ಗತ್ಯವಿದೆ. ಕಾಮಗಾರಿ ಆರಂಭವಾದಾಗ ಜನರಿಗೆ, ವಾಹನ ಸವಾರರಿಗೆ ಸಮಸ್ಯೆಗಳು ಎದುರಾಗುವುದು ಸಹಜ.”

-ಎಂ.ವೆಂಕಟೇಶನ್, ಆಟೋ ಚಾಲಕ

” ರಾಷ್ಟ್ರೀಯ ರಸ್ತೆ ಅಭಿವೃದ್ದಿ ಪ್ರಾಧಿಕಾರದ ಅಧಿಕಾರಿಗಳು ಸೆಪ್ಟೆಂಬರ್ ೨೦ರೊಳಗೆ ರಸ್ತೆಯಲ್ಲಿ ಹರಡಿರುವ ಸಾಮಗ್ರಿಗಳನ್ನು ತೆರವುಗೊಳಿಸಿ ಕ್ಲಿಯರೆನ್ಸ್ ಕೊಡುತ್ತಾರೆ. ದಸರಾ ವೇಳೆಯಲ್ಲಿ ಸಣ್ಣಪುಟ್ಟ ವಾಹನಗಳ ಸಂಚಾರಕ್ಕೆ ಅನುಕೂಲ ಕಲ್ಪಿಸಲು ಹಳೆ ಕೆಸರೆ ಕಡೆಯಿಂದ ಸರ್ವೀಸ್ ರಸ್ತೆಯನ್ನು ಗುರುತು ಮಾಡಲಾಗಿದೆ.

-ಕೆ.ಎಸ್.ಸುಂದರ್‌ರಾಜ್, ಡಿಸಿಪಿ, ಅಪರಾಧ ಮತ್ತು ಸಂಚಾರ ವಿಭಾಗ, ಮೈಸೂರು

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

10 mins ago

ಓದುಗರ ಪತ್ರ: ಶೇ. ೭.೫ರಷ್ಟು ಮೀಸಲಾತಿ: ಜನ ಮೆಚ್ಚುವ ನಿರ್ಧಾರ

ರಾಜ್ಯ ಸರ್ಕಾರವು ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಯಲ್ಲಿ ಗ್ರಾಮೀಣ ಸರ್ಕಾರಿ ಶಾಲಾ ಮಕ್ಕಳಿಗೆ ಶೇ. ೭.೫ರಷ್ಟು ಮೀಸಲಾತಿ ನೀಡಿರುವುದು ಜನ ಮೆಚ್ಚುವ…

12 mins ago

ಓದುಗರ ಪತ್ರ: ಸುಪ್ರೀಂಕೋರ್ಟ್ ಪೀಠಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು

ಸುಪ್ರೀಂ ಕೋರ್ಟ್ ಬಾಗಿಲು ಭಾರತದ ಪ್ರತಿಯೊಬ್ಬ ನಾಗರಿಕನಿಗೂ ತೆರೆದಿದೆ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹೇಳಿದ್ದಾರೆ. ಆದರೆ ದೇಶದ ಉತ್ತರದ…

14 mins ago

‘ಬಂದೋಬಸ್ತ್ ’ ಎಂಬ ಬದ್ಧತೆ

ಎಸ್. ಎಲ್. ಚೆನ್ನಬಸವಣ್ಣ ,ಐಪಿಎಸ್, ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಇತಿಹಾಸದಿಂದ ಪ್ರಸ್ತುತ ಪೊಲೀಸ್ ಕರ್ತವ್ಯದವರೆಗೆ  ಸಾರ್... ಎಲ್ಲ…

16 mins ago

ರಾಮ್ ಜೀ ಸಕ್ಪಾಲ್ ಬಡಾವಣೆಯಲ್ಲಿ ಮೂಲಸೌಕರ್ಯ ಮರೀಚಿಕೆ

ಕೃಷ್ಣ ಸಿದ್ದಾಪುರ ನೀರಿಗೂ ಪರದಾಟ, ಕತ್ತಲಲ್ಲೇ ಮಕ್ಕಳ ವಿದ್ಯಾಭ್ಯಾಸ   ಸಿದ್ದಾಪುರ: ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೊನ್ನತ್…

24 mins ago

ಡೆಡ್ ಬಾಡಿ ಬಿಸಾಕಿದ ಜಾಗದಲ್ಲಿ ಹೊಸ ಸುಳಿವು

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಸ್ಕಾರ್ಪಿಯೋ ಹೋಗಿ-ಬರುವುದು, ೩ ಜನರು ನಡೆದು ಬರುವುದು ವಿಡಿಯೋದಲ್ಲಿ ಸೆರೆ ನಾಳೆ ೧೦ ಗಂಟೆಯವರೆಗೆ…

36 mins ago