ಓದುಗರ ಪತ್ರ
ಹೊಸ ಖಾತೆದಾರರು ತಮ್ಮ ಬ್ಯಾಂಕ್‌ನಲ್ಲಿ ಖಾತೆ ತೆರೆಯಲು ರೂ. ೫೦ ಸಾವಿರ ಕನಿಷ್ಠ ಠೇವಣಿ ಇಡಬೇಕು ಎಂದು ಐಸಿಐಸಿಐ ಬ್ಯಾಂಕ್ ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿರುವ ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರ, ಉಳಿತಾಯ ಖಾತೆಯಲ್ಲಿ ಎಷ್ಟು ಮೊತ್ತ ಇರಿಸಬೇಕು ಎನ್ನುವುದು ಆರ್‌ಬಿಐನ ನಿಯಂತ್ರಣ ವ್ಯಾಪ್ತಿಗೆ ಬರುವುದಿಲ್ಲ. ಕನಿಷ್ಠ ಮೊತ್ತ ಅವರ ವಿವೇಚನೆಗೆ ಬಿಟ್ಟ ವಿಷಯ ಎಂದು ಹೇಳಿರುವುದು ಸರಿಯಲ್ಲ.
ಹಾಗಿದ್ದರೆ ಬ್ಯಾಂಕ್‌ಗಳು ಆರ್‌ಬಿಐ ನಿಯಂತ್ರಣದಲ್ಲಿ ಇಲ್ಲವೇ ಎನ್ನುವ ಪ್ರಶ್ನೆ ಉದ್ಭವವಾಗುತ್ತದೆ. ಇತ್ತೀಚೆಗೆ ಕೆನರಾ ಬ್ಯಾಂಕ್ ಉಳಿತಾಯ ಖಾತೆಯಲ್ಲಿ ಕನಿಷ್ಠ ಮೊತ್ತ ಇಲ್ಲದಿದ್ದರೂ ದಂಡ ವಿಧಿಸುವುದಿಲ್ಲ ಎಂದು ಹೇಳಿತ್ತು. ಇದೀಗ ಎಸ್‌ಬಿಐ ಕೂಡ ಉಳಿತಾಯ ಖಾತೆಯಲ್ಲಿ ಕನಿಷ್ಠ ಮೊತ್ತ ಕಾಯ್ದುಕೊಳ್ಳುವ ಅಗತ್ಯ ಇಲ್ಲ ಎಂದು ಹೇಳಿರುವುದಾಗಿ ಪತ್ರಿಕೆಗಳಲ್ಲಿ ವರದಿಯಾಗಿದೆ.
ಇದು ಸ್ವಾಗತಾರ್ಹ ನಿರ್ಧಾರ. ಈ ಬಗ್ಗೆ ಬ್ಯಾಂಕ್ ತನ್ನ ಆದೇಶವನ್ನು ನೋಟಿಸ್ ಬೋರ್ಡ್ ನಲ್ಲಿ ಪ್ರಕಟಿಸಬೇಕು. ಅಂಚೆ ಕಚೇರಿ ಯಲ್ಲಿ ಉಳಿತಾಯ ಖಾತೆಯ ಮೊತ್ತಕ್ಕೆ ಶೇ. ೪ ಬಡ್ಡಿ ನೀಡುತ್ತಾರೆ. ಆದರೆ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಕೇವಲ ಶೇ ೨.೫ರಿಂದ ೩ರಷ್ಟು ಮಾತ್ರ ಬಡ್ಡಿ ನೀಡುತ್ತಾರೆ. ಇದು ಅಂಚೆ ಕಚೇರಿಗಿಂತ ಹೆಚ್ಚಾಗಿರಬೇಕು. ಈ ಬಗ್ಗೆ ಆರ್‌ಬಿಐ ಗಮನ ಹರಿಸಲಿ.
-ಮುಳ್ಳೂರು ಪ್ರಕಾಶ್, ಕನಕದಾಸ ನಗರ, ಮೈಸೂರು
ಬೆಂಗಳೂರು: ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹಸ್ತಕ್ಷೇಪಕ್ಕೆ ಬೇಸತ್ತು ಇಂಧನ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಿದ್ದರು ಎಂಬ…
ಬೆಂಗಳೂರು: ವಿಕಲಚೇತನರಿಗಾಗಿಯೇ ಮುಂದಿನ ಮೂರು ತಿಂಗಳಲ್ಲಿ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುವುದು ಎಂದು ಸಚಿವ ಡಾ.ಶರಣಪ್ರಕಾಶ್…
ಕೊಡಗು: ಜಿಲ್ಲೆಯಲ್ಲಿ ಆನೆ–ಮಾನವ ಸಂಘರ್ಷ ಮತ್ತೆ ಜೀವ ಬಲಿ ಪಡೆದಿದೆ. ಸಿದ್ದಾಪುರ ಸಮೀಪದ ಗೌರಿ ಬೆಟ್ಟ ಬಳಿ ಕಾಡಾನೆ ದಾಳಿಗೆ…
ಮಡಿಕೇರಿ: ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಕತೆ ಕಟ್ಟುತ್ತಿದ್ದಾರೆ ಎಂದು…
ಮಡಿಕೇರಿ: ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಮಾಲ್ದಾರೆ ವ್ಯಾಪ್ತಿಯಲ್ಲಿ ಬೆಳಿಗ್ಗೆ ಶಾಲಾ ಬಸ್ಸನ್ನು ಒಂಟಿ ಸಲಗ ಅಟ್ಟಿಸಿಕೊಂಡು ಬಂದ ಘಟನೆ…
ಚಾಮರಾಜನಗರ: ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣದ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. ಈ ಕುರಿತು…