Andolana originals

ಕಾಡಾನೆ ದಾಳಿ; ಶಾಲೆಯ ಗೇಟ್, ನೀರಿನ ಪೈಪ್ ನಾಶ

ಹನೂರು ತಾಲ್ಲೂಕಿನ ಪಚ್ಚೆದೊಡ್ಡಿ ಶಾಲೆಗೆ ಪದೇಪದೇ ಕಾಡಾನೆ ಲಗ್ಗೆ; ಪೋಷಕರು, ಗ್ರಾಮಸ್ಥರಲ್ಲಿ ಭೀತಿ

ಹನೂರು: ಕಾಡಾನೆ ದಾಳಿಯಿಂದ ಪದೇಪದೇ ಶಾಲಾ ಸುತ್ತುಗೋಡೆ ಹಾಗೂ ಗೇಟ್, ಕುಡಿಯುವ ನೀರಿನ ಪೈಪ್‌ಗಳು ಹಾಳಾಗುತ್ತಿದ್ದು, ಶಾಶ್ವತ ಪರಿಹಾರ ಕಂಡುಕೊಳ್ಳುವಲ್ಲಿ ಅರಣ್ಯ ಇಲಾಖೆಯ ಅಽಕಾರಿಗಳು ವಿಫಲರಾಗಿದ್ದಾರೆ ಎಂದು ಪಚ್ಚೆದೊಡ್ಡಿ ಗ್ರಾಮಸ್ಥರು ಆರೋಪಿಸಿದ್ದಾರೆ.

ತಾಲ್ಲೂಕಿನ ಕಾಡಂಚಿನ ಗ್ರಾಮವಾದ ಪಚ್ಚೆದೊಡ್ಡಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ಕಾಡಾನೆ ದಾಳಿ ಮಾಡಿ ಶಾಲಾ ಗೇಟು ಹಾಗೂ ಕುಡಿಯುವ ನೀರಿನ ಪೈಪ್‌ಅನ್ನು ಮುರಿದು ಹಾಕಿದೆ.

ಶಾಲಾ ಗೇಟು ಹಾಗೂ ಪೈಪ್ ಮುರಿತ: ಕಾಡಾನೆ ದಾಳಿ ನಡೆಸಿ ಶಾಲಾ ಮುಂಭಾಗ ಅಳವಡಿಸಿರುವ ಗೇಟು ಹಾಗೂ ಕುಡಿಯುವ ನೀರಿನ ಸಂಪೂರ್ಣ ಪೈಪ್‌ಗಳನ್ನು ಮುರಿದು ಚೆಲ್ಲಾಪಿಲ್ಲಿ ಮಾಡಿದೆ. ಇದರಿಂದ ಸಾಕಷ್ಟು ನಷ್ಟ ಉಂಟಾಗಿದೆ ಎಂದು ಅಲ್ಲಿನ ಶಿಕ್ಷಕರು ಹೇಳಿದ್ದಾರೆ. ಕಾಡಾನೆ ಪದೇಪದೇ ಶಾಲೆಯ ಮೇಲೆ ದಾಳಿ ನಡೆಸುತ್ತಿದೆ. ಇದರಿಂದ ರಿಪೇರಿ ಮಾಡಲು ತೊಂದರೆಯಾಗುತ್ತಿದೆ ಎನ್ನುತ್ತಾರೆ ಅಲ್ಲಿನ ಶಿಕ್ಷಕರು. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿ ದ್ದಾರೆ.

ಶಾಶ್ವತ ಕ್ರಮ ಕೈಗೊಳ್ಳಿ: ಕಾಡಾನೆ ಆಗಿಂದಾಗ್ಗೆ ಶಾಲೆಯ ಆಸ್ತಿಗೆ ನಷ್ಟ ಉಂಟು ಮಾಡುತ್ತಿರುವ ಹಿನ್ನೆಲೆಯಲ್ಲಿ ಕಾಡಾನೆ ಗ್ರಾಮದೊಳಗೆ ಹಾಗೂ ಶಾಲೆಯ ಸಮೀಪ ಬಾರದಂತೆ ತಡೆಗಟ್ಟಲು ರೈಲ್ವೆ ಗೇಟ್ ಅಥವಾ ಆನೆ ಕಂದಕವನ್ನು ನಿರ್ಮಾಣ ಮಾಡುವುದರ ಮೂಲಕ ಶಾಶ್ವತ ಪರಿಹಾರವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಕ್ರಮಕೈಗೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ಅನಾಹುತಗಳಿಗೆ ಜವಾಬ್ದಾರಿಯನ್ನು ಹೊರಬೇಕಾಗುತ್ತದೆ ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

ಸರ್ಕಾರಿ ಶಾಲೆಗೆ ಕಾಡಾನೆ ದಾಳಿ ಮಾಡುತ್ತಿರುವ ವಿಷಯ ಗೊತ್ತಿದ್ದರೂ ಆನೆಗಳು ಶಾಲೆ ಸಮೀಪ ಬಾರದಂತೆ ತಡೆಗಟ್ಟುವಲ್ಲಿ ಕ್ರಮಕೈಗೊಳ್ಳದೆಮ ನಿರ್ಲಕ್ಷ್ಯ ವಹಿಸಿದ್ದಾರೆ. ಇನ್ನಾದರೂ ಸೂಕ್ತ ಕ್ರಮ ವಹಿಸದಿದ್ದರೆ ಉಗ್ರ ಪ್ರತಿಭಟನೆ ನಡೆಸ ಬೇಕಾಗುತ್ತದೆ ಎಂದು ಪಚ್ಚೆದೊಡ್ಡಿ ಗ್ರಾಮಸ್ಥರು ಎಚ್ಚರಿಸಿದ್ದಾರೆ.

” ಪಚ್ಚೆದೊಡ್ಡಿ ಸರ್ಕಾರಿ ಶಾಲೆ ಮೇಲೆ ಕಾಡಾನೆ ದಾಳಿ ನಡೆಸಿರುವುದು ಇದೇ ಮೊದಲಲ್ಲ. ಕನಿಷ್ಠ ೫ ಬಾರಿಯಾದರೂ ದಾಳಿ ನಡೆಸಿದೆ. ಈಗ ಕುಡಿಯುವ ನೀರಿನ ಪೈಪ್‌ನ್ನು ಸಹ ಹಾನಿಗೊಳಿಸಿದೆ. ನಾಳೆಯಿಂದ ಮಕ್ಕಳಿಗೆ ಕುಡಿಯುವ ನೀರಿನ ತೊಂದರೆಯಾಗಲಿದೆ. ಹಾಗಾಗಿ ಅರಣ್ಯ ಇಲಾಖೆಯ ಅದಿಕಾರಿಗಳು ಕ್ರಮ ವಹಿಸಬೇಕು.

-ಗೋವಿಂದ, ಅಧ್ಯಕ್ಷರು, ಎಸ್‌ಡಿಎಂಸಿ ಸಮಿತಿ, ಪಚ್ಚೆದೊಡ್ಡಿ ಶಾಲೆ

ಆಂದೋಲನ ಡೆಸ್ಕ್

Recent Posts

ಹನೂರಿನಲ್ಲಿ ಮೇವು-ನೀರಿಲ್ಲದೆ ಜಾನುವಾರುಗಳ ಪರದಾಟ: ಕಸ, ಪೇಪರ್ ತಿಂದು ಜೀವ ಉಳಿಸಿಕೊಳ್ಳುತ್ತಿರುವ ಮೂಕ ಪ್ರಾಣಿಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…

7 hours ago

ಬಂಡೀಪುರ ಸಫಾರಿ ವಾಹನಗಳಿಗೆ ಜಿಪಿಎಸ್ ಡ್ಯಾಶ್ ಕ್ಯಾಮರಾ ಅಳವಡಿಕೆ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್‌ಗಳನ್ನು ಅಳವಡಿಸಲಾಗಿದೆ ಎಂದು…

7 hours ago

ಮೈಸೂರಿನಲ್ಲಿ ಯತೀಂದ್ರ ಮಹಾರಾಜನ ಏಕಚಕ್ರಾಧಿಪತ್ಯವಿದೆ: ಎಚ್.ವಿಶ್ವನಾಥ್ ವಾಗ್ದಾಳಿ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…

8 hours ago

ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…

8 hours ago

ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ CWRC ಶಿಫಾರಸು

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್‌ ಕಾವೇರಿ…

9 hours ago

ಓದುಗರ ಪತ್ರ: ಮನವಿಗೆ ಸ್ಪಂದಿಸಿದಕ್ಕಾಗಿ ಅಭಿನಂದನೆಗಳು

ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್‌ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…

17 hours ago