Andolana originals

ಅಪ್ಪನ ನಾಯಕತ್ವದ ನೊಗ ಡಾ.ಯತೀಂದ್ರ ಹೆಗಲಿಗೆ?

ಕೆ.ಬಿ.ರಮೇಶನಾಯಕ

ಮೈಸೂರು: ಡಿ.ದೇವರಾಜ ಅರಸು ನಂತರ ಹಿಂದುಳಿದ ವರ್ಗಗಳ ಪಾಲಿಗೆ ಅಗ್ರನಾಯಕ ಅನಿಸಿಕೊಂಡಿರುವ ಸಿದ್ದರಾಮಯ್ಯ ಅವರು ಸುದೀರ್ಘ ಎಂಟು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿ ಅಧಿಕಾರದ ಗದ್ದಿಗೆಯಿಂದ ಹೊರನಡೆದಿದ್ದು, ಇದೀಗ ಅವರ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಅಪ್ಪನ ನಾಯಕತ್ವದ ನೊಗ ಹೊರಲು ಸಜ್ಜಾಗಿದ್ದಾರೆ.

ಹಳೆ ಮೈಸೂರು ಪ್ರಾಂತ್ಯದಲ್ಲಿ ಹಿಂದುಳಿದ ವರ್ಗಗಳು ಹಾಗೂ ತಮ್ಮನ್ನು ನಂಬಿಕೊಂಡು ರಾಜಕಾರಣ ಮಾಡುವ ಅಸಂಖ್ಯಾತ ಬೆಂಬಲಿಗರ ಹಿತ ಕಾಯುವ ಅನಿವಾರ್ಯತೆ ಇರುವ ಕಾರಣದಿಂದಾಗಿ ಸಿದ್ದರಾಮಯ್ಯರ ನಾಯಕತ್ವದ ಜವಾಬ್ದಾರಿ ಯತೀಂದ್ರರ ಹೆಗಲಿಗೇರಿದೆ.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂಪುಟದಲ್ಲಿ ಸಚಿವರಾಗಿರುವ ಡಾ.ಯತೀಂದ್ರ ಅವರಿಗೆ ಮೈಸೂರು ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ಕೊಡಿಸುವ ಮೂಲಕ ಹಲವು ವರ್ಷಗಳಿಂದ ಜಿಲ್ಲೆಯ ರಾಜಕಾರಣದ ಮೇಲೆ ತಮಗಿರುವ ಹಿಡಿತ ಕೈತಪ್ಪದಂತೆ ನೋಡಿಕೊಳ್ಳಲು ಸಿದ್ದರಾಮಯ್ಯ ಪ್ರಯತ್ನ ಮಾಡಿದ್ದಾರೆ ಎನ್ನಲಾಗಿದೆ.

೨೦೧೩ರಲ್ಲಿ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಅವರು ತಾವು ಪ್ರತಿನಿಧಿಸಿದ್ದ ವರುಣ ಕ್ಷೇತ್ರದ ಹೊಣೆಯನ್ನು ತಮ್ಮ ಹಿರಿಯ ಪುತ್ರ ರಾಕೇಶ್ಗೆ ವಹಿಸಿದ್ದರು. ಆದರೆ, ೨೦೧೬ರ ಜುಲೈ ೩೦ರಂದು ವಿದೇಶಕ್ಕೆ ತೆರಳಿದ್ದ ರಾಕೇಶ್ ಅಕಾಲಿಕ ಮರಣಕ್ಕೀಡಾಗಿದ್ದರು. ಹೀಗಾಗಿ, ವೈದ್ಯ ವೃತಿ ಮಾಡಿಕೊಂಡು ರಾಜಕೀಯದಿಂದ ದೂರ ಉಳಿದಿದ್ದ ಡಾ.ಯತೀಂದ್ರ ಅವರು ರಾಜಕೀಯ ಪ್ರವೇಶ ಮಾಡಿ ವರುಣ ಕ್ಷೇತ್ರದ ಜವಾಬ್ದಾರಿಹೊತ್ತರು. ತಂದೆ ಇಡೀ ರಾಜ್ಯದ ಕೆಲಸಗಳನ್ನು ಮಾಡುತ್ತಿದ್ದರೆ, ವರುಣ ಸೇರಿದಂತೆ ಮೈಸೂರು ಜಿಲ್ಲೆಯ ಆಗು-ಹೋಗುಗಳನ್ನು ನೋಡಿಕೊಳ್ಳಲು ಆರಂಭಿಸಿದರು.

ಅಧಿಕೃತವಾಗಿ ಅಧಿಕಾರಿಗಳ ಸಭೆ ನಡೆಸಲು ಸಂವಿಧಾನಬದ್ಧ ಅಧಿಕಾರ ಅವಶ್ಯವಿರುವುದರಿಂದ ಸಿದ್ದರಾಮಯ್ಯ ಅವರು, ಯತೀಂದ್ರರನ್ನು ವರುಣ ಕ್ಷೇತ್ರದ ಆಶ್ರಯ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸುವ ಮೂಲಕ ತಮ್ಮ ಉತ್ತರಾಧಿಕಾರಿ ಎನ್ನುವಂತೆ ಮುನ್ನೆಲೆಗೆ ತಂದರು. ಹಾಗಾಗಿಯೇ, ೨೦೧೮ರ ಚುನಾವಣೆಯಲ್ಲಿ ವರುಣ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ಯತೀಂದ್ರ ಮೊದಲ ಬಾರಿಗೆ ಗೆಲುವು ಸಾಧಿಸಿ, ತಂದೆ ಸಿದ್ದರಾಮಯ್ಯರೊಂದಿಗೆ ವಿಧಾನಸಭೆಯನ್ನು ಪ್ರವೇಶ ಮಾಡಿದ್ದರು. ತಂದೆಗಾಗಿ ಕ್ಷೇತ್ರ ತ್ಯಾಗ: ೨೦೨೩ರ ಚುನಾವಣೆಯಲ್ಲಿ ಯತೀಂದ್ರ ಅವರು ತಂದೆಗಾಗಿ ವರುಣ ಕ್ಷೇತ್ರವನ್ನು ತ್ಯಾಗ ಮಾಡಿದ್ದರಲ್ಲದೆ, ಅವರ ಗೆಲುವಿಗಾಗಿ ಶ್ರಮಿಸಿದ್ದರು.

ಬಳಿಕ ಯತೀಂದ್ರ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ನೇಮಕ ಮಾಡುವ ಮೂಲಕ ಅಽಕಾರಯುತ ಸ್ಥಾನವನ್ನು ಒದಗಿಸಲಾಗಿತ್ತು. ಈಗ ಸಿದ್ದರಾಮಯ್ಯ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಸಲ್ಲಿಸಿ, ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ನೂತನ ಸಚಿವ ಸಂಪುಟದಲ್ಲಿ ಡಾ.ಯತೀಂದ್ರ ಅವರಿಗೆ ಮಂತ್ರಿ ಸ್ಥಾನ ನೀಡುವ ಮೂಲಕ ಸಿದ್ದರಾಮಯ್ಯ ಅವರನ್ನು ಸಮಾಧಾನಪಡಿಸುವ ಕೆಲಸ ಮಾಡಲಾಗಿದೆ.

ಸಿದ್ದರಾಮಯ್ಯ ಕುಟುಂಬಕ್ಕೆ ಅದೃಷ್ಟದ ಕ್ಷೇತ್ರ ವರುಣ: ೨೦೦೮ರಲ್ಲಿ ಹೊಸದಾಗಿ ರಚನೆಯಾದ ವರುಣ ಕ್ಷೇತ್ರ ಸಿದ್ದರಾಮಯ್ಯ ಅವರ ಕುಟುಂಬಕ್ಕೆ ಅದೃಷ್ಟದ ಕ್ಷೇತ್ರವಾಗಿದೆ. ೨೦೦೮ರಲ್ಲಿ ಚಾಮುಂಡೇಶ್ವರಿ ಕ್ಷೇತ್ರವನ್ನು ಬಿಟ್ಟು ವರುಣ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ ಸಿದ್ದರಾಮಯ್ಯಅವರು ೨೦೦೯ರಲ್ಲಿ ವಿರೋಧ ಪಕ್ಷದ ನಾಯಕರಾದರೆ, ೨೦೧೩ರಲ್ಲಿ ಮುಖ್ಯಮಂತ್ರಿಯಾದರು. ೨೦೧೮ರಲ್ಲಿ ಸಿದ್ದರಾಮಯ್ಯರು ಬಾದಾಮಿ ಕ್ಷೇತ್ರದಲ್ಲಿ ಗೆಲುವು ಸಾಧಿಸಿದರೆ, ವರುಣದಲ್ಲಿ ಪುತ್ರ ಡಾ.ಯತೀಂದ್ರ ಗೆಲುವು ಸಾಧಿಸಿದ್ದರು. ೨೦೨೩ರಲ್ಲಿ ಸಿದ್ದರಾಮಯ್ಯ ಅವರು ಸೂಕ್ತ ಕ್ಷೇತ್ರಕ್ಕಾಗಿ ಹುಡುಕಾಡುತ್ತಿದ್ದಾಗ ಡಾ.ಯತೀಂದ್ರ ತಂದೆಗೆ ವರುಣ ಕ್ಷೇತ್ರ ಬಿಟ್ಟುಕೊಟ್ಟರು. ಹೀಗಾಗಿ ಮರಳಿ ವರುಣದಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ ಬಳಿಕ ಡಿ.ದೇವರಾಜ ಅರಸು ಬಳಿಕ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಸುದೀರ್ಘ ಅವಧಿಯ ಸಿಎಂ ಎಂಬ ದಾಖಲೆ ಬರೆದರು. ಈಗ ವರುಣ ಕ್ಷೇತ್ರದಿಂದಲೇ ರಾಜಕೀಯ ಪ್ರವೇಶ ಮಾಡಿದ್ದ ಯತೀಂದ್ರ ಅವರಿಗೂ ಸಚಿವ ಸ್ಥಾನ ಒಲಿದಿದೆ.

ಜಿಲ್ಲೆಯ ರಾಜಕಾರಣದ ಮೇಲೆ ಹಿಡಿತ: 

ಮೈಸೂರು ಜಿಲ್ಲೆಯ ರಾಜಕಾರಣ ಸಿದ್ದರಾಮಯ್ಯ ಅವರ ಹಿಡಿತದಲ್ಲಿರುತ್ತದೆ. ಸಿದ್ದರಾಮಯ್ಯ ಅವರ ಬದಲಾವಣೆಯಿಂದ ಕೊಂಚ ವಿಚಲಿತರಾಗಿದ್ದ ಅಧಿಕಾರಿ ವರ್ಗ, ಬೆಂಬಲಿಗರು ಈಗ ನಿರುಮ್ಮಳರಾಗಿದ್ದಾರೆ. ಸಿದ್ದರಾಮಯ್ಯ ಅವರು ಮಾಜಿಯಾದರೂ ಪುತ್ರ ಯತೀಂದ್ರ ಅವರು ಸಚಿವರಾಗುವ ಮೂಲಕ ಭರವಸೆ ಮೂಡಿಸಿದ್ದಾರೆ. ಹೀಗಾಗಿ, ಜಿಲ್ಲೆಯ ರಾಜಕಾರಣ ಮತ್ತು ಅಭಿವೃದ್ಧಿ ಸ್ವಲ್ಪವೂ ವ್ಯತ್ಯಾಸವಾಗದಂತೆ ನೋಡಿಕೊಳ್ಳುವುದಕ್ಕೆ ಮಾರ್ಗದರ್ಶನ ಮಾಡಲಿದ್ದಾರೆ.

 

 

ಆಂದೋಲನ ಡೆಸ್ಕ್

Recent Posts

ಯುದ್ಧಕ್ಕೆ ದಿನಾಂಕ ಫಿಕ್ಸ್: ‘ವಿಜಯದಶಮಿ’ಗೆ ಸಮರ ಸಾರಿದ ಕೇಂದ್ರ ಸಚಿವ ಎಚ್‌ಡಿಕೆ

ಹಾಸನ: ಇಡೀ ದೇಶವೇ ಅಲ್ಲೋಲ, ಕಲ್ಲೋಲ ಆಗುವ ಸುದ್ದಿ ಕೊಡುತ್ತೇನೆ ಎಂಬ ಮಾತನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪುನರುಚ್ಛರಿಸಿದ್ದಾರೆ. ಈ…

12 hours ago

ಉಗ್ರ ಮಸೂದ್‌ ಅಜರ್‌ ಸುಳಿವು ಕೊಟ್ಟವರಿಗೆ 24 ಲಕ್ಷ ರೂ ಬಹುಮಾನ ಘೋಷಿಸಿದ ಪಾಕ್‌

ಇಸ್ಲಾಮಾಬಾದ್:‌ ಉಗ್ರ ಮಸೂದ್‌ ಅಜರ್‌ ಸುಳಿವು ಕೊಟ್ಟವರಿಗೆ 24 ಲಕ್ಷ ರೂ ಬಹುಮಾನ ನೀಡುವುದಾಗಿ ಪಾಕಿಸ್ತಾನ ಘೋಷಣೆ ಮಾಡಿದೆ. ದೇಶದ…

12 hours ago

ಸೆಪ್ಟೆಂಬರ್ ತಿಂಗಳಲ್ಲೇ ಕರ್ನಾಟಕದಲ್ಲಿ ಬಿರು ಬೇಸಿಗೆಯ ವಾತಾವರಣ

ಬೆಂಗಳೂರು: ಮುಂಗಾರು ಮಳೆಯ ಅಬ್ಬರ ಕಾಣಬೇಕಿದ್ದ ಸೆಪ್ಟೆಂಬರ್ ತಿಂಗಳಲ್ಲೇ ಕರ್ನಾಟಕದಲ್ಲಿ ಬಿರು ಬೇಸಿಗೆಯ ವಾತಾವರಣ ನಿರ್ಮಾಣವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ…

13 hours ago

ಅದ್ದೂರಿ ಶ್ರೀರಂಗಪಟ್ಟಣ ದಸರಾ ಬದಲು ಸಾಂಪ್ರದಾಯಿಕ ಆಚರಣೆ: ಸಚಿವ ಎನ್. ಚಲುವರಾಯಸ್ವಾಮಿ

ಮಂಡ್ಯ: ಮೈಸೂರು ದಸರಾಗಿಂತಲೂ ಪುರಾತನವಾದ ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ ಬರಗಾಲದ ಹಿನ್ನೆಲೆಯಲ್ಲಿ ಅದ್ದೂರಿತನದ ಬದಲು ಸಾಂಪ್ರದಾಯಿಕವಾಗಿ ಆಚರಿಸಲು ತೀರ್ಮಾನಿಸಲಾಗಿದೆ…

13 hours ago

ಹನೂರು: ಬಿಸಿಯೂಟಕ್ಕೂ ನೀರಿಲ್ಲ – ಖಾಲಿ ಬಿಂದಿಗೆ ಹಿಡಿದು ವಿದ್ಯಾರ್ಥಿಗಳ ಪ್ರತಿಭಟನೆ

ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂದನಪಾಳ್ಯ ಗ್ರಾಮದ ಸೆಂಟ್ ಆಂಥೋನಿ ಶಾಲೆಯಲ್ಲಿ ಕಳೆದ ಆರು ತಿಂಗಳಿನಿಂದ ಕುಡಿಯುವ…

14 hours ago

ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ: ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವು

ಮಂಡ್ಯ: ಬೈಕ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ…

17 hours ago