ನಾಡಹಬ್ಬ ದಸರಾ ಪ್ರಯುಕ್ತ ಮೈಸೂರಿನ ಅನೇಕ ಸ್ಥಳಗಳಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿದ್ದು, ಮಹಿಳೆಯರು ಎಚ್ಚರಿಕೆಯಿಂದ ಇರಬೇಕಾಗಿದೆ. ದಸರಾ ಕಾರ್ಯಕ್ರಮಗಳಲ್ಲಿ ಸಾವಿರಾರು ಜನರು ಸೇರುತ್ತಾರೆ. ಹೆಚ್ಚು ಜನಸೇರುವ ಪ್ರದೇಶಗಳಲ್ಲಿ ಹೆಣ್ಣು ಮಕ್ಕಳು ಮತ್ತು ಮಹಿಳೆಯರೊಂದಿಗೆ ಅನುಚಿತವಾಗಿ ವರ್ತಿಸುವ ಘಟನೆಗಳು ನಡೆಯುತ್ತವೆ.
ಇಂತಹ ಸ್ಥಳಗಳಲ್ಲಿ ಮಹಿಳೆಯರು ತಮ್ಮ ಆಭರಣಗಳು, ಮೊಬೈಲ್ ಫೋನ್, ಹಣ, ಇತ್ಯಾದಿ ವಸ್ತುಗಳ ಬಗ್ಗೆ ಎಚ್ಚರ ವಹಿಸಬೇಕಾಗುತ್ತದೆ. ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ ಪೊಲೀಸ್ ಇಲಾಖೆ ಸಹಾಯವಾಣಿ ಕೇಂದ್ರಗಳನ್ನು ತೆರೆದು ಸಾರ್ವಜನಿಕರಿಗೆ ಧ್ವನಿ ವರ್ಧಕಗಳ ಮೂಲಕ ತಮ್ಮ ವಸ್ತುಗಳ ಬಗ್ಗೆ ನಿಗಾ ವಹಿಸುವಂತೆ ಅರಿವು ಮೂಡಿಸುವುದು ಹಾಗೂ ಭದ್ರತೆ ಒದಗಿಸುವುದುಅಗತ್ಯ.
– ನಾಗೇಶ್, ಮಾನಸಗಂಗೋತ್ರಿ, ಮೈಸೂರು





