ಇಂದು ವರದಿ ನೀಡಲು ಕ್ಷೆತ್ರ ಶಿಕ್ಷಣಾಧಿಕಾರಿಗೆ ಸೂಚನೆ
ನಂಜನಗೂಡು: ತಾಲ್ಲೂಕಿನ ಶಾಲೆಯೊಂದರಲ್ಲಿ ಹುಳು ಹಿಡಿದ ಅಕ್ಕಿ, ಗೋಧಿಗಳನ್ನು ಬಿಸಿ ಯೂಟಕ್ಕೆ ಉಪಯೋಗಿಸಲಾಗುತ್ತಿರುವ ಕುರಿತು ಭಾನುವಾರದ ‘ಆಂದೋಲನ’ದಿನಪತ್ರಿಕೆಯ ಮುಖಪುಟದಲ್ಲಿ ವರದಿ ಪ್ರಕಟವಾಗಿದ್ದನ್ನು ಗಮನಿಸಿದ ಜಿಪಂ ಸಿಇಒ ಎಸ್.ಯುಕೇಶ್ ಕುಮಾರ್, ಡಿಸಿಪಿಐ ಜವರೇಗೌಡ ಅವರು ಭಾನುವಾರ ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಮಾರ್ಚ್‌ನಲ್ಲಿ ಸರಬರಾಜಾದ ಅಕ್ಕಿ, ಗೋಧಿ ಹುಳು ಹಿಡಿದಿದ್ದರೆ ಅದನ್ನೇಕೆ ಬದ ಲಾಯಿಸಿಲ್ಲ ಎಂದು ಪ್ರಶ್ನಿಸಿದ ಈ ಅಧಿಕಾರಿಗಳು, ತಾಲ್ಲೂಕಿನಲ್ಲಿ ಎಲ್ಲೆಲ್ಲಿ ದಿನಸಿ ಹುಳು ಹಿಡಿದಿವೆಯೋ ಅವುಗಳನ್ನು ವಾಪಸ್ ಮಾಡಿ ಆ ಶಾಲೆಗಳಿಗೆ ಗೋಡೌನ್‌ನಿಂದ ಹೊಸದಾಗಿ ಬಿಸಿಯೂಟದ ಸಾಮಗ್ರಿ ನೀಡಬೇಕು. ಹೊಮ್ಮ ಶಾಲೆಯಲ್ಲಿ ಹುಳು ಹಿಡಿದ ಬಿಸಿಯೂಟದ ಕುರಿತು ಸಮಗ್ರವಾಗಿ ಸೋಮವಾರವೇ ವರದಿ ನೀಡಬೇಕು ಎಂದು ಸೂಚಿಸಿದ್ದಾರೆ.
ಹೊಮ್ಮ ಶಾಲೆಯಲ್ಲಿ ಹೊಸದಾಗಿ ಸರಬರಾಜಾದ ಗೋಧಿ, ಅಕ್ಕಿಯನ್ನು ಬಿಸಿಯೂಟಕ್ಕೆ ಉಪಯೋಗಿಸದೆ, ಹಲವು ತಿಂಗಳುಗಳ ಹಿಂದೆ ಸರಬರಾಜಾದ ಧಾನ್ಯಗಳನ್ನು ಹುಳು ಹಿಡಿದ ಮೇಲೆ ಬಳಸಿದ್ದು ತಪ್ಪು. ಅದಕ್ಕೆ ಅಲ್ಲಿನ ಮುಖ್ಯಶಿಕ್ಷಕರೇ ಹೊಣೆ ಎಂದು ತಾಲ್ಲೂಕಿನ ಅಕ್ಷರ ದಾಸೋಹದ ಅಧಿಕಾರಿ ಸೋಮಶೇಖರ್ ಪತ್ರಿಕೆಗೆ ಪ್ರತಿಕ್ರಿಯಿಸಿದರು.
ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…
ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…
ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…
ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…
ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…
ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…