ಎಚ್.ಡಿ.ಮಣಿಕಂಠ ನಾಯಕ್
ಸಮರ್ಪಕ ಆಸನಗಳಿಲ್ಲ, ಶೌಚಾಲಯ ಅವ್ಯವಸ್ಥೆ; ಪ್ರಯಾಣಿಕರಿಗೆ ಕಿರಿಕಿರಿ
ಯಳಂದೂರು: ಪಟ್ಟಣದ ಬಸ್ ನಿಲ್ದಾಣದಲ್ಲಿ ಮೂಲಸೌಕರ್ಯಗಳ ಕೊರತೆಯಿಂದ ಪ್ರಯಾಣಿಕರು ತೊಂದರೆ ಅನುಭವಿಸುವಂತಾಗಿದೆ. ಪ್ರಯಾಣಿಕರಿಗೆ ಕುಳಿತುಕೊಳ್ಳಲು ಆಸನಗಳ ಕೊರತೆ, ಶುದ್ಧ ಕುಡಿಯುವ ನೀರಿನ ಸಮರ್ಪಕ ವ್ಯವಸ್ಥೆ ಇಲ್ಲದಿರುವುದು, ಶೌಚಾಲಯದ ಅವ್ಯವಸ್ಥೆ ಹಾಗೂ ಶಿಥಿಲಗೊಂಡ ಹಳೆಯ ಕಟ್ಟಡದಿಂದ ಪ್ರಯಾಣಿಕರು ಸಮಸ್ಯೆ ಎದುರಿಸುವಂತಾಗಿದೆ.
ಮಳೆ-ಬಿಸಿಲಿನಿಂದ ರಕ್ಷಣೆ ಪಡೆಯಲು ಅಂಗಡಿ ಮಳಿಗೆಗಳನ್ನು ಆಶ್ರಯಿಸಬೇಕಾದ ಪರಿ ಸ್ಥಿತಿಯೂ ಇದೆ. ಬಸ್ ನಿಲ್ದಾಣದಲ್ಲಿರುವ ಹಳೆಯ ಶೌಚಾಲಯದ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದು, ಅದನ್ನು ತೆರವುಗೊಳಿಸಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಹೊಸ ವ್ಯವಸ್ಥೆ ಕಲ್ಪಿಸಬೇಕೆಂಬ ಒತ್ತಾಯ ಕೇಳಿ ಬಂದಿದೆ. ಶೌಚಾಲಯದ ಸಮರ್ಪಕ ನಿರ್ವಹಣೆ ಇಲ್ಲದಿರುವುದರಿಂದ ದುರ್ವಾಸನೆ ಹರಡುತ್ತಿದೆ ಎಂಬ ದೂರುಗಳಿವೆ. ಪ್ರತಿದಿನ ನೂರಾರು ಪ್ರಯಾಣಿಕರು, ವಿದ್ಯಾರ್ಥಿಗಳು ಹಾಗೂ ಮಹಿಳೆಯರು ಬಳಸುವ ನಿಲ್ದಾಣದಲ್ಲಿ ಸ್ವಚ್ಛತೆ ಮತ್ತು ಮೂಲ ಸೌಕರ್ಯಗಳಿಗೆ ಆದ್ಯತೆ ನೀಡಬೇಕಿದೆ.
ಬಸ್ ಹಾಗೂ ಇತರ ವಾಹನಗಳನ್ನು ಅಡ್ಡಾದಿಡ್ಡಿಯಾಗಿ ನಿಲ್ಲಿಸುವುದರಿಂದ ಪ್ರಯಾಣಿಕರ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಬಸ್ ನಿಲ್ದಾಣದ ಪೊಲೀಸ್ ಚೌಕಿಯಲ್ಲಿ ಸಿಬ್ಬಂದಿ ಇಲ್ಲದಿರುವುದು ಆತಂಕಕ್ಕೆ ಕಾರಣವಾಗಿದೆ. ಶಾಲಾ-ಕಾಲೇಜುಗಳು ಬಿಡುವ ಸಮಯದಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಕನಿಷ್ಠ ಒಬ್ಬ ಪೊಲೀಸ್ ಸಿಬ್ಬಂದಿಯನ್ನಾದರೂ ನಿಯೋಜಿಸಬೇಕು ಎಂದು ಸ್ಥಳೀಯರಾದ ಕಿರಣ್ ಆಗ್ರಹಿಸಿದ್ದಾರೆ. ಬಸ್ ನಿಲ್ದಾಣದ ಸುತ್ತಮುತ್ತ ಬೀದಿಬದಿ ವ್ಯಾಪಾರಿಗಳು ಮತ್ತೆ ಒತ್ತುವರಿ ಮಾಡಿಕೊಂಡಿರುವುದರಿಂದ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.
” ಬಸ್ ನಿಲ್ದಾಣದ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಪ್ರಯಾಣಿಕರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು. ಶೌಚಾಲಯದ ಸ್ವಚ್ಛತೆ, ಶಿಥಿಲ ಕಟ್ಟಡದ ತೆರವು ಹಾಗೂ ಪೊಲೀಸ್ ಸಿಬ್ಬಂದಿ ನಿಯೋಜನೆಗೆ ಆದ್ಯತೆ ನೀಡಬೇಕು.”
-ಬಳೆಪೇಟೆ ವರದರಾಜು, ತಾಲ್ಲೂಕು ಅಧ್ಯಕ್ಷ,
” ಕರ್ನಾಟಕ ಕಾವಲು ಪಡೆ ಬಸ್ ನಿಲ್ದಾಣದಲ್ಲಿ ಸಿಸಿ ಕ್ಯಾಮೆರಾಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿವೆ. ಪ್ರಯಾಣಿಕರ ಅನುಕೂಲಕ್ಕಾಗಿ ಆಸನಗಳ ವ್ಯವಸ್ಥೆ ಕಲ್ಪಿಸಬೇಕಿದೆ. ಪಕ್ಷಿಗಳು ಗಲೀಜು ಮಾಡುವುದರಿಂದ ಸ್ವಚ್ಛತೆ ಕಾಪಾಡುವುದು ಸವಾಲಾಗಿದೆ. ಬೀದಿಬದಿ ವ್ಯಾಪಾರಿಗಳನ್ನು ಈಗಾಗಲೇ ನಾಲ್ಕು ಬಾರಿ ತೆರವುಗೊಳಿಸಿದರೂ ಮತ್ತೆ ಅದೇ ಸ್ಥಳದಲ್ಲಿ ವ್ಯಾಪಾರ ನಡೆಸುತ್ತಿದ್ದಾರೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಮುಂದಿನ ದಿನಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು.”
-ಎಂ.ಪಿ.ಮಹೇಶ್ ಕುಮಾರ್, ಮುಖ್ಯಾಧಿಕಾರಿ, ಪಟ್ಟಣ ಪಂಚಾಯಿತಿ
ನವದೆಹಲಿ: ಇರಾನ್ ಸಂಸತ್ ಸ್ಪೀಕರ್ ಮೊಹಮ್ಮದ್ ಬಾಘೇರ್ ಘಾಲಿಬಾಫ್ ಅವರು ಭಾರತಕ್ಕೆ ಭೇಟಿ ನೀಡಲಿದ್ದಾರೆ. ಅಕ್ಟೋಬರ್ 26 ಮತ್ತು 27ರಂದು…
ಬೆಂಗಳೂರು: ರಾಜ್ಯದಲ್ಲಿ ಅಂತರ್ಜಲದ ಬಳಕೆ ಶೇಕಡಾ 70ರಷ್ಟಾಗಿದ್ದು, ಅಂತರ್ಜಲ ಮಟ್ಟ ಮತ್ತಷ್ಟು ಕುಸಿಯುವ ಆತಂಕ ಎದುರಾಗಿದೆ. ಕುಡಿಯುವ ನೀರು, ಕೃಷಿ…
ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಮಳೆ ಚುರುಕುಗೊಂಡಿದ್ದು, ಕೃಷಿ ಚಟುವಟಿಕೆಗಳಿಗೆ ಮಳೆ ಮತ್ತೊಮ್ಮೆ ಮಹತ್ವ ಪಡೆದುಕೊಂಡಿದೆ. ಹಿಂಗಾರು ಬೆಳೆಗಳ ಬಿತ್ತನೆಗೆ ಸಿದ್ಧತೆ ನಡೆಸುತ್ತಿರುವ…
ಲಾಸಾ: ನೇಪಾಳ–ಟಿಬೆಟ್ ಗಡಿಯಲ್ಲಿ ಸಂಭವಿಸಿದ್ದ ಭೀಕರ ಪ್ರವಾಹದ ನೆನಪು ಮಾಸುವ ಮುನ್ನವೇ ಟಿಬೆಟ್‌ನಲ್ಲಿ ಮತ್ತೊಂದು ನೈಸರ್ಗಿಕ ವಿಕೋಪ ಸಂಭವಿಸಿದೆ. ಅಕ್ಟೋಬರ್…
ನವದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರನ್ನು ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಯ…
ಸ್ವಾತಂತ್ರ್ಯ ಹೋರಾಟಗಾರರು ಹಾಗೂ ತಗಡೂರು ಗಾಂಧಿ ಎಂದೇ ಕರೆಯಲ್ಪಟ್ಟ ಹಿರಿಯರಾದ ತಗಡೂರು ರಾಮಚಂದ್ರರಾಯರ ಗೌರವಾರ್ಥ ಮೈಸೂರು ನಗರದಲ್ಲಿ ಶ್ರೀಯುತರು ವಾಸವಾಗಿದ್ದ ಚಾಮುಂಡಿಪುರಂ…