Andolana originals

ಯುವನಿಧಿ ಯೋಜನೆ; 2,116 ಮಂದಿ ನೋಂದಣಿ

ನವೀನ್ ಡಿಸೋಜ

2079 ಪದವಿ, 37 ಮಂದಿ ಡಿಪ್ಲೊಮಾ ಪದವೀಧರರು, 877 ಯುವಕರು, 1239 ಮಂದಿ ಯುವತಿಯರಿಂದ ನೋಂದಣಿ

ಮಡಿಕೇರಿ: ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಯುವನಿಧಿ ಯೋಜನೆಯು ಜಾರಿಗೊಂಡು ಡಿಸೆಂಬರ್ ತಿಂಗಳಿಗೆ ಎರಡು ವರ್ಷಗಳು ಪೂರ್ಣಗೊಂಡಿದ್ದು, ಕೊಡಗು ಜಿಲ್ಲೆಯಲ್ಲಿ ಜನವರಿ ಅಂತ್ಯಕ್ಕೆ ಒಟ್ಟು ೨,೧೧೬ ಮಂದಿ ಹೆಸರು ನೋಂದಾಯಿಸಿಕೊಂಡಿದ್ದಾರೆ.

ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಜಾರಿಗೊಳಿಸಲಾಗಿರುವ ಯುವನಿಧಿ ಯೋಜನೆ ಯನ್ನು ಯುವಜನತೆಯ ಉಜ್ವಲ ಭವಿಷ್ಯಕ್ಕಾಗಿ ರಾಜ್ಯ ಸರ್ಕಾರ ಜಾರಿಗೊಳಿಸಿದೆ. ಪ್ರತಿ ತಿಂಗಳು ನಿರುದ್ಯೋಗಿ ಪದವೀಧರರಿಗೆ ೩ ಸಾವಿರ ರೂ. ಮತ್ತು ಡಿಪ್ಲೊಮಾ ತೇರ್ಗಡೆಯಾದವರಿಗೆ ೧,೫೦೦ ರೂ.ಗಳನ್ನು ೨ ವರ್ಷಗಳವರೆಗೆ ನೀಡಲಾಗುತ್ತದೆ.

೨೦೨೩ರಲ್ಲಿ ಪದವಿ, ಡಿಪ್ಲೊಮಾ ಉತ್ತೀರ್ಣರಾದ ವಿದ್ಯಾರ್ಥಿಗಳು, ಪದವಿ, ಡಿಪ್ಲೊಮಾ ನಂತರ ಕನಿಷ್ಠ ೬ ತಿಂಗಳವರೆಗೆ ಸರ್ಕಾರಿ, ಖಾಸಗಿ ಉದ್ಯೋಗ ಹೊಂದಿಲ್ಲದವರು, ಸ್ವಯಂ ಉದ್ಯೋಗ ಹೊಂದಿಲ್ಲದವರು, ಉನ್ನತ ವಿದ್ಯಾಭ್ಯಾಸ ಮುಂದುವರಿಸದೆ ಇರುವವರು, ರಾಜ್ಯದಲ್ಲಿ ವಾಸವಿರುವ ಕನಿಷ್ಠ ೬ ವರ್ಷಗಳವರೆಗೆ ಪದವಿ, ಡಿಪ್ಲೊಮಾ ಉತ್ತೀರ್ಣರಾದವರು ಯುವನಿಧಿ ಸೌಲಭ್ಯ ಪಡೆಯಲು ಅರ್ಹರಿದ್ದಾರೆ.

ಸದ್ಯ ಯುವನಿಧಿ ಯೋಜನೆಯಡಿ ಇಲ್ಲಿಯವರೆಗೆ ಜಿಲ್ಲೆಯಲ್ಲಿ ೨,೧೧೬ ಮಂದಿ ಹೆಸರು ನೋಂದಾಯಿಸಿಕೊಂಡಿದ್ದಾರೆ. ಇವರಲ್ಲಿ ೨,೦೭೯ ಪದವೀಧರರು ಮತ್ತು ೩೭ ಮಂದಿ ಡಿಪ್ಲೊಮಾ ಪದವೀಧರರು ಒಳಗೊಂಡಿದ್ದಾರೆ. ಹಾಗೆಯೇ ಇವರಲ್ಲಿ ೮೭೭ ಮಂದಿ ಯುವಕರು ಹಾಗೂ ೧,೨೩೯ ಮಂದಿ ಯುವತಿಯರು ಹೆಸರು ನೋಂದಾಯಿಸಿಕೊಂಡಿದ್ದಾರೆ.

ಹೆಸರು ನೋಂದಾಯಿತ ೨,೧೧೬ ಯುವ ಜನರ ಪೈಕಿ ೧,೬೪೯ ಮಂದಿಗೆ ಡಿಬಿಟಿ ಮೂಲಕ ಪ್ರತೀ ತಿಂಗಳು ಹಣ ಪಾವತಿಯಾಗುತ್ತಿದೆ. ತಾಲ್ಲೂಕುವಾರು ಗಮನಿಸಿದಾಗ ಮಡಿಕೇರಿ ತಾಲ್ಲೂಕಿನಲ್ಲಿ ೫೭೫ ಮಂದಿ ಹೆಸರು ನೋಂದಾಯಿಸಿದ್ದಾರೆ. ಕುಶಾಲನಗರ ತಾಲ್ಲೂಕಿನಲ್ಲಿ ೩೩೯, ಪೊನ್ನಂಪೇಟೆ ತಾಲ್ಲೂಕಿನಲ್ಲಿ ೨೩೭, ವಿರಾಜಪೇಟೆ ತಾಲ್ಲೂಕಿನಲ್ಲಿ ೩೫೬ ಮತ್ತು ಸೋಮವಾರಪೇಟೆ ತಾಲ್ಲೂಕಿನಲ್ಲಿ ೬೦೯ ಮಂದಿ ಹೆಸರು ನೋಂದಾಯಿಸಿದ್ದಾರೆ.

ಇವರಲ್ಲಿ ಮಡಿಕೇರಿ ತಾಲ್ಲೂಕಿನ ೪೪೩ ಮಂದಿ, ಕುಶಾಲನಗರ ೨೭೨, ಪೊನ್ನಂಪೇಟೆ ೧೭೨, ಸೋಮವಾರಪೇಟೆ ೪೮೦ ಮತ್ತು ವಿರಾಜಪೇಟೆ ತಾಲ್ಲೂಕಿನಲ್ಲಿ ೨೮೨ ಮಂದಿ ಸೇರಿದಂತೆ ಜಿಲ್ಲೆಯ ಒಟ್ಟು ೧,೬೪೯ ಮಂದಿಗೆ ಯುವ ನಿಧಿ ಯೋಜನೆ ಸೌಲಭ್ಯ ದೊರೆಯುತ್ತಿದೆ.

ಯಾವುದೇ ಪದವಿ, ಡಿಪ್ಲೊಮಾ, ಸ್ನಾತ ಕೋತ್ತರ ಪದವಿ ಉತ್ತೀರ್ಣರಾಗಿ ಸರ್ಕಾರಿ, ಖಾಸಗಿ, ಸ್ವಯಂ ಉದ್ಯೋಗ ಹೊಂದಿಲ್ಲದವರು ಮತ್ತು ಉನ್ನತ ವಿದ್ಯಾಭ್ಯಾಸ ಮುಂದುವರಿಸದೆ ಇರುವ ಅಭ್ಯರ್ಥಿಗಳು ಹೆಸರು ನೋಂದಾಯಿಸಿಕೊಳ್ಳಲು ಸೇವಾ ಸಿಂಧು ಪೋರ್ಟಲ್‌ಗೆ ಭೇಟಿ ನೀಡಿ ಹಾಗೂ ಉಚಿತವಾಗಿ ಕರ್ನಾಟಕ ಒನ್, ಗ್ರಾಮ ಒನ್ ಬೆಂಗಳೂರು ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳ ಮುಖಾಂತರ ಅರ್ಜಿ ಸಲ್ಲಿಸಬಹುದು.

ಸೇವಾ ಸಿಂಧು ಪೋರ್ಟಲ್ ಮುಖಪುಟದಲ್ಲಿರುವ ನ್ಯಾಡ್ ಲಿಂಕ್ ಉಪಯೋಗಿಸಿ ಕೊಂಡು ತಮ್ಮ ದಾಖಲೆಗಳು ಅಪ್‌ಲೋಡ್ ಆಗುವುದನ್ನು ಖಚಿತಪಡಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ: ೧೮೦೦೫೯೯೯೯೧೮ಕ್ಕೆ ಕರೆ ಮಾಡಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಸಿ.ಬಿ.ಮಂಜುನಾಥ್ ತಿಳಿಸಿದ್ದಾರೆ.

” ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ ಅಭಿವೃದ್ಧಿ ನಿಗಮ, ಕರ್ನಾಟಕ ಸರ್ಕಾರದ ಯುವನಿಧಿ ಯೋಜನೆಯಡಿ ನೋಂದಣಿಯಾಗಿರುವ ನಿರುದ್ಯೋಗಿ ಪದವೀಧರರು ಮತ್ತು ಡಿಪ್ಲೊಮಾ ಆದವರಿಗೆ ಆರ್ಥಿಕ ನೆರವಿನ ರೂಪದಲ್ಲಿ ನಿರುದ್ಯೋಗ ಭತ್ಯೆಯನ್ನು ನೀಡಲಾಗುತ್ತಿದೆ. ಅದರಂತೆ ಪದವೀಧರರಿಗೆ ಮಾಸಿಕ ೩ ಸಾವಿರ ರೂ. ಮತ್ತು ಡಿಪ್ಲೊಮಾ ಪಡೆದವರಿಗೆ ಮಾಸಿಕ ೧,೫೦೦ ರೂ. ನೀಡಲಾಗುತ್ತಿದೆ. ಆಸಕ್ತರು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು. ಈವರೆಗೆ ಜಿಲ್ಲೆಯಲ್ಲಿ ೨,೧೧೬ ಮಂದಿ ಹೆಸರು ನೋಂದಾಯಿಸಿಕೊಂಡಿದಾರೆ.”

-ಮಂಜುನಾಥ್, ಜಿಲ್ಲಾ ಕೌಶಲ ಅಭಿವೃದ್ಧಿ ಅಧಿಕಾರಿ

 

 

ಆಂದೋಲನ ಡೆಸ್ಕ್

Recent Posts

ಮೈಸೂರು | ನಾಲ್ಕೇ ದಿನಕ್ಕೆ ಮುರಿದು ಬಿದ್ದ ದಸರಾ ದೀಪಾಲಂಕಾರ ಕಟೌಟ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…

7 hours ago

ಕಮಿಷನ್ ಆರೋಪ ಸುಳ್ಳು, ಎಸ್‌ಐಆರ್ ರದ್ದಾಗಬೇಕು: ಸಚಿವ ಪುಟ್ಟರಂಗಶೆಟ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…

8 hours ago

ಯಳಂದೂರು ತಾಲ್ಲೂಕಿನಲ್ಲಿ ವರುಣನ ಕೃಪೆ: ಭತ್ತದ ನಾಟಿಗೆ ಮುಂದಾದ ರೈತರು

ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…

8 hours ago

ಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ: ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ ಬಿಡುಗಡೆ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…

8 hours ago

ಮಂಡ್ಯ | ಕೇಂದ್ರದ ಬರ ಅಧ್ಯಯನ ತಂಡದಿಂದ ಕೆಆರ್‌ಎಸ್‌ ಹಾಗೂ ಬರಪೀಡಿತ ಹಳ್ಳಿಗಳ ಪರಿಶೀಲನೆ

ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…

8 hours ago

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

13 hours ago