ಓದುಗರ ಪತ್ರ
ನಾಡ ಹಬ್ಬ ದಸರಾ ಕಾರ್ಯಕ್ರಮಗಳಲ್ಲಿ ಯುವ ದಸರಾ ಕಾರ್ಯಕ್ರಮ ಯುವ ಜನರ ಆಕರ್ಷಣೆಯ ಕೇಂದ್ರ ಬಿಂದುವಾಗಿದೆ. ಪ್ರತಿ ವರ್ಷ ಯುವ ದಸರಾ ಕಾರ್ಯಕ್ರಮವನ್ನು ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಸಲಾಗುತ್ತಿತ್ತು. ಆದರೆ ಕಳೆದ ವರ್ಷ ಇಳಯರಾಜ, ಎ.ಆರ್.ರೆಹಮಾನ್ ಅವರನ್ನು ಕರೆಸಿದಕ್ಕೆ ಹೆಚ್ಚು ಜನ ಸೇರಲಿ ಎಂದು ಉತ್ತನಹಳ್ಳಿ ಸಮೀಪ ಏರ್ಪಡಿಸಲಾಗಿತ್ತು.
ಈ ಬಾರಿ ಮೊದಲಿನಂತೆಯೇ ಮಹಾರಾಜ ಕಾಲೇಜು ಮೈದಾನದಲ್ಲೇ ಯುವ ದಸರಾ ಕಾರ್ಯಕ್ರಮವನ್ನು ಏರ್ಪಡಿಸಿದರೆ ಕಾಲೇಜು ವಿದ್ಯಾರ್ಥಿಗಳು, ಹಾಸ್ಟೆಲ್ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಂಭ್ರಮಿಸುತ್ತಾರೆ. ಈ ಬಾರಿಯೂ ಉತ್ತನಹಳ್ಳಿ ಬಳಿ ಯುವ ದಸರಾ ಏರ್ಪಡಿಸಿದರೆ ಕಾಲೇಜು ವಿದ್ಯಾರ್ಥಿಗಳು, ಹಾಸ್ಟೆಲ್ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ, ಹಿರಿಯ ನಾಗರಿಕರಿಗೆ ತುಂಬಾ ತೊಂದರೆಯಾಗುತ್ತದೆ. ಏಕೆಂದರೆ ಎಲ್ಲರ ಬಳಿಯೂ ವಾಹನ ಸೌಕರ್ಯ ಇರುವುದಿಲ್ಲ. ಆಟೋ ಪ್ರಯಾಣ ದರ ತುಂಬಾ ದುಬಾರಿ.
ಕಾರ್ಯಕ್ರಮವು ನಗರದ ಹೊರ ಭಾಗದಲ್ಲಿ ನಡೆಯುವುದರಿಂದ ಕುಟುಂಬದವರೆಲ್ಲ ಒಟ್ಟಾಗಿ ಭಾಗವಹಿಸಿ ಕಾರ್ಯಕ್ರಮ ನೋಡಲು ತುಂಬಾ ಕಷ್ಟವಾಗುತ್ತದೆ. ಆದ್ದರಿಂದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಈ ಬಗ್ಗೆ ಗಮನ ಹರಿಸಿ ಯುವ ದಸರಾ ಕಾರ್ಯಕ್ರಮವನ್ನು ಮಹಾರಾಜ ಕಾಲೇಜು ಮೈದಾನದಲ್ಲಿಯೇ ಆಯೋಜಿಸಲು ಕ್ರಮ ಕೈಗೊಳ್ಳಬೇಕಾಗಿದೆ.
– ಅಹಲ್ಯ ಸಿ. ನಾ. ಚಂದ್ರ, ಜನತಾ ನಗರ, ಮೈಸೂರು
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…