Andolana originals

ಯುವನಿಧಿ: ಕೊಡಗಿನಲ್ಲಿ 1711 ಮಂದಿ ನೋಂದಣಿ

೨೦೨೫ರ ನೋಂದಣಿ ಪ್ರಕ್ರಿಯೆ ಪ್ರಾರಂಭ; ಅಗತ್ಯ ದಾಖಲಾತಿಗಳೊಂದಿಗೆ ಅರ್ಹರು ನೋಂದಾಯಿಸಿಕೊಳ್ಳಲು ಮನವಿ

ನವೀನ್ ಡಿಸೋಜ

ಮಡಿಕೇರಿ: ೨೦೨೫ರ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಜಿಲ್ಲೆಯಲ್ಲಿ ಸುಮಾರು ೧,೭೦೦ ಮಂದಿ ಯೋಜನೆಯ ಪ್ರಯೋಜನ ಪಡೆದುಕೊಂಡಿದ್ದಾರೆ.

೨೦೨೪ರ ಜನವರಿಯಿಂದ ೨೦೨೫ ಜುಲೈವರೆಗೆ ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ ೧,೭೧೧ ಮಂದಿ ನೋಂದಣಿ ಮಾಡಿಕೊಂಡಿದ್ದಾರೆ. ಮಡಿಕೇರಿ ತಾಲ್ಲೂಕಿನಲ್ಲಿ ೪೬೬, ಪೊನ್ನಂಪೇಟೆ ತಾಲ್ಲೂಕಿನಲ್ಲಿ ೧೯೩, ಕುಶಾಲನಗರ ತಾಲ್ಲೂಕಿನಲ್ಲಿ ೨೬೯, ಸೋಮವಾರಪೇಟೆ ತಾಲ್ಲೂಕಿನಲ್ಲಿ ೪೮೩, ವಿರಾಜಪೇಟೆ ತಾಲ್ಲೂಕಿನಲ್ಲಿ ೩೦೦ ಮಂದಿ ಹೆಸರು ನೋಂದಾಯಿಸಿಕೊಂಡಿದ್ದು, ಯುವನಿಧಿ ಸೌಲಭ್ಯ ಪಡೆಯುತ್ತಿದ್ದಾರೆ.

ಪದವಿ ಹಾಗೂ ಸ್ನಾತಕೋತ್ತರ ಪದವಿ ನಿರುದ್ಯೋಗಿಗಳಿಗೆ ಮೂರು ಸಾವಿರ ರೂ. ಹಾಗೂ ಡಿಪ್ಲೊಮೊ ತೇರ್ಗಡೆಯಾದವರಿಗೆ ಪ್ರತಿ ತಿಂಗಳು ೧,೫೦೦ ರೂ. ನಿರುದ್ಯೋಗಿ ಭತ್ಯೆಯನ್ನು ನೀಡಲಾಗುತ್ತಿದೆ. ೨೦೨೫ರ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಈ ಯೋಜನೆಗೆ ಅರ್ಹರು ಹೆಸರು ನೋಂದಣಿ ಮಾಡಿಕೊಳ್ಳಬೇಕಿದೆ.

೨೦೨೩, ೨೦೨೪ ಹಾಗೂ ೨೦೨೫ರಲ್ಲಿ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮೊ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಹರಾಗಿದ್ದು, ಫಲಿತಾಂಶ ಪ್ರಕಟವಾದ ೧೮೦ ದಿನಗಳ ನಂತರವೂ ಸಾರ್ವಜನಿಕ, ಖಾಸಗಿ ಕ್ಷೇತ್ರದಲ್ಲಿ ಉದ್ಯೋಗದಲ್ಲಿ ಇರದವರು, ಸ್ವಯಂ ಉದ್ಯೋಗದಲ್ಲಿ ಇರದವರು ಅರ್ಹರಾಗಿದ್ದಾರೆ. ಉನ್ನತ ವ್ಯಾಸಂಗ ಮುಂದುವರಿಸದೆ ಇರುವವರು ಹಾಗೂ ಕನಿಷ್ಠ ೬ ವರ್ಷ ಕರ್ನಾಟಕ ನಿವಾಸಿಯಾಗಿರುವವರು ಅರ್ಹರಾಗಿದ್ದಾರೆ.

ಯುವನಿಧೀ ಪ್ಲಸ್ ಕೌಶಲ ತರಬೇತಿ ಕಾರ್ಯಕ್ರಮದಡಿ ಯುವನಿಧಿ ಫಲಾನುಭವಿಗಳು ಉಚಿತ ಕೌಶಲ ತರಬೇತಿ ಕೂಡ ಪಡೆಯಬಹುದಾಗಿದೆ. ಈ ಸೌಲಭ್ಯ ಪಡೆಯಲು ಕರ್ನಾಟಕ ಕೌಶಲ ಅಭಿವೃದ್ಧಿ ನಿಗಮದ ವೆಬ್‌ಸೈಟ್ www. kaushalkar.com ಮೂಲಕ ನೋಂದಾಯಿಸಿಕೊಳ್ಳಬಹು ದಾಗಿದೆ. ಜಿಟಿಟಿಸಿ, ಕೆಜಿಟಿಟಿಐ, ಸಿಡಾಕ್, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳ ಮುಖಾಂತರ ಸಿಎಂಕೆಕೆವೈ ಯೋಜನೆಯಡಿ ಉಚಿತ ಕೌಶಲ ತರಬೇತಿ ನೀಡಲಾಗುತ್ತದೆ.

ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ, ಸ್ನಾತಕೋತ್ತರ, ಡಿಪ್ಲೊಮೊ ಪ್ರಮಾಣಪತ್ರ ಸೇರಿದಂತೆ ನೋಂದಣಿಗೆ ಅಗತ್ಯ ದಾಖಲಾತಿ ಒದಗಿಸಬೇಕು. ಪ್ರತಿ ತ್ರೈಮಾಸಿಕ ೧ರಿಂದ ೨೫ರೊಳಗೆ ಸ್ವಯಂ ಘೋಷಣೆ ನೀಡುವುದು,ನೋಂದಾಯಿಸಿಕೊಳ್ಳಲು ಸೇವಾಸಿಂಧು ಪೋರ್ಟಲ್ಬಳಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ೧೮೦೦-೫೯೯-೭೧೫೪ಅನ್ನು ಸಂಪರ್ಕಿಸಬಹುದು. ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮೊ ಪ್ರಮಾಣ ಪತ್ರಗಳನ್ನು ನ್ಯಾಡ್ ಪೋರ್ಟಲ್‌ನಲ್ಲಿ ಇಂಡೀಕರಿಸಿರುವುದನ್ನು ಖಚಿತಪಡಿಸಿಕೊಳ್ಳಬೇಕು.

” ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ೨೦೨೪ರ ಜ.೧ರಂದು ಯುವನಿಧಿ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಪ್ರತಿ ತಿಂಗಳು ನಿರುದ್ಯೋಗಿ ಭತ್ಯೆಯನ್ನು ನೀಡಲಾಗುತ್ತಿದೆ. ಆ ನಿಟ್ಟಿನಲ್ಲಿ ೨೦೨೫ರ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದ್ದು, ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು.”

-ವೆಂಕಟ್ ರಾಜಾ, ಕೊಡಗು ಜಿಲ್ಲಾಧಿಕಾರಿ

” ಯುವನಿಧಿ ಯೋಜನೆಯಡಿ ಪದವಿ ಹಾಗೂ ಸ್ನಾತಕೋತ್ತರ ಪದವಿ ನಿರುದ್ಯೋಗಿಗಳಿಗೆ ಮೂರು ಸಾವಿರ ರೂ. ಹಾಗೂ ಡಿಪ್ಲೊಮಾ ತೇರ್ಗಡೆಯಾದವರಿಗೆ ೧,೫೦೦ ರೂ.ಗಳನ್ನು ನೀಡಲಾಗುತ್ತಿದೆ. ಫಲಾನುಭವಿಗಳು ಅಗತ್ಯ ದಾಖಲೆಗಳೊಂದಿಗೆ ಹೆಸರು ನೋಂದಾಯಿಸುವ ಮೂಲಕ ಯೋಜನೆಯ ಪ್ರಯೋಜನ ಪಡೆದುಕೊಳ್ಳಬೇಕು.”

-ಮಂಜುನಾಥ್, ಜಿಲ್ಲಾ ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಧಿಕಾರಿ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕುವೆಂಪು

ಕುವೆಂಪು ಮಲೆನಾಡಿನಲಿ ಹುಟ್ಟಿದರು ಮೈಸೂರಿಗೆ ಕಾಲಿಟ್ಟರು ಕವಿಯಾಗಿ ಕನ್ನಡದ ಮೊದಲ ಜ್ಞಾನಪೀಠ ಗಳಿಸಿದರು ಮೂಢನಂಬಿಕೆಯನು ಬದಿಗೊತ್ತಿ ವಿಜ್ಞಾನದ ಬೀಜ ಬಿತ್ತಿ…

2 hours ago

ಓದುಗರ ಪತ್ರ: ಮುಕ್ತ ವಿಶ್ವವಿದ್ಯಾಲಯದ ರಸ್ತೆ ದುರಸ್ತಿ ಮಾಡಿ

ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿವಿ (ಕೆಎಸ್‌ಒಯು) ರಸ್ತೆ ಸಂಪೂರ್ಣ ಹಾಳಾಗಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಮಳೆಗಾಲದಲ್ಲಿ ಈ…

2 hours ago

ಓದುಗರ ಪತ್ರ: ರಸ್ತೆ ದುರಸ್ತಿ ಮಾಡಿ

ಹೆಗ್ಗಡದೇವನಕೋಟೆ ತಾಲ್ಲೂಕಿನ ಹಂಪಾಪುರ ಗ್ರಾಮದಿಂದ ಜಿನ್ನಹಳ್ಳಿ -ಮಲಾರದಹುಂಡಿಗೆ ತೆರಳುವ ಮುಖ್ಯ ರಸ್ತೆ ಹಾಳಾಗಿದ್ದು, ವಿಪರೀತ ಹಳ್ಳ-ಕೊಳ್ಳಗಳಿಂದ ಕೂಡಿದೆ. ಹಲವಾರು ಬಾರಿ…

2 hours ago

ಓದುಗರ ಪತ್ರ: ಹೊಸ ವರ್ಷ ಆಚರಣೆ: ಇರಲಿ ಸಂಯಮ, ಗುರಿ

ಹೊಸ ವರ್ಷದ ಆಚರಣೆ ಡಿ.೩೧ರ ರಾತ್ರಿ ಮತ್ತು ಜನವರಿ ೧ ರಂದು ನಡೆಯುತ್ತದೆ. ಯುವ ಜನತೆಗೆ ಹೊಸ ವರ್ಷದ ಆಚರಣೆ…

2 hours ago

ಮಕ್ಕಳ ಪರೀಕ್ಷಾ ಸಿದ್ಧತೆಯಲ್ಲಿ ಪೋಷಕರ ಪಾತ್ರದ ಮಹತ್ವ

ಡಾ.ಪಿ.ಮಂಜುನಾಥ ನಕಾರಾತ್ಮಕ ಭಾವನೆ ಮಕ್ಕಳಲ್ಲಿ ಮೂಡದಂತೆ ಎಚ್ಚರ ಅಗತ್ಯ  ಪರೀಕ್ಷೆಗಳು ಕೆಲವೇ ತಿಂಗಳುಗಳಲ್ಲಿ ಸಾಲು ಸಾಲಾಗಿ ಪ್ರಾರಂಭವಾಗಲಿವೆ. ಪರೀಕ್ಷೆ ಹತ್ತಿರವಾಗುತ್ತಿದ್ದಂತೆ…

2 hours ago

ಸಾಧನೆಯ ಹಾದಿಯಲ್ಲಿ ಬೆಳೆದು ಬೆಳಗಿದವರು

೨೦೨೫ ನೇ ಸಾಲಿನಲ್ಲಿ ಹಲವಾರು ಸಾಧಕರು ಹೊರಹೊಮ್ಮಿದ್ದು, ಸಾಹಿತ್ಯ, ಕಲೆ, ವಿಜ್ಞಾನ, ಸಂಶೋಧನೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ,…

2 hours ago