Andolana originals

ಜಿಪಂ ಮೀಸಲಾತಿ; ಎಲ್ಲ ಸಮುದಾಯದವರಿಗೂ ಅವಕಾಶ

ಮಂಜುಕೋಟೆ

ಕೋಟೆ: ಪ್ರಥಮ ಬಾರಿಗೆ ಎಸ್‌ಸಿ ಮತ್ತು ಎಸ್‌ಟಿ ಸಮುದಾಯಕ್ಕೆ ತಲಾ ೨ ಸ್ಥಾನಗಳು ಹಂಚಿಕೆ 

ಎಚ್.ಡಿ.ಕೋಟೆ: ಏಳು ವರ್ಷಗಳ ನಂತರ ನಡೆಯಲಿರುವ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಚುನಾವಣೆಯ ಮೀಸಲಾತಿ ಪಟ್ಟಿಯಲ್ಲಿ ಎಸ್ಸಿ, ಎಸ್ಟಿ ಮತ್ತು ಸಾಮಾನ್ಯ ವರ್ಗಕ್ಕೆ ತಲಾ ಎರಡು ಸ್ಥಾನಗಳು ದೊರೆಯುವ ಮೂಲಕ ಎಲ್ಲ ಸಮುದಾಯದವರೂ ವಿವಿಧ ಪಕ್ಷಗಳಲ್ಲಿ ಟಿಕೆಟ್ ಪಡೆಯಲು ಅವಕಾಶ ಸಿಕ್ಕಿದಂತಾಗಿದೆ.

ತಾಲ್ಲೂಕಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದವರು ಹೆಚ್ಚಾಗಿ ವಾಸಿಸುತ್ತಿದ್ದು, ಇದಕ್ಕೆ ಅನುಗುಣವಾಗಿ ಇದೇ ಪ್ರಥಮ ಬಾರಿಗೆ ಎಸ್‌ಸಿ ಮತ್ತು ಎಸ್‌ಟಿ ಸಮುದಾಯಗಳಿಗೆ ತಲಾ ೨ ಸ್ಥಾನಗಳನ್ನು ನೀಡುವ ಜೊತೆಗೆ ಮಹಿಳೆಯರಿಗೂ ಆದ್ಯತೆ ಸಿಕ್ಕಿದೆ. ಪರಿಶಿಷ್ಟ ಜಾತಿ ಸಮುದಾಯದವರಿಗೆ ಹೈರಿಗೆ ಮತ್ತು ಮುಳ್ಳೂರು ಕ್ಷೇತ್ರಗಳಲ್ಲಿ, ಪರಿಶಿಷ್ಟ ಪಂಗಡದವರಿಗೆ ಅಂತರಸಂತೆ ಮತ್ತು ಹಂಚೀಪುರ ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಮತ್ತು ಪುರುಷರಿಗೆ ಸ್ಪರ್ಧಿಸಲು ಅವಕಾಶ ದೊರಕಿದೆ. ಹಂಪಾಪುರ ಮತ್ತು ಅಣ್ಣೂರು ಕ್ಷೇತ್ರಗಳಲ್ಲಿ ಎಸ್ಸಿ, ಎಸ್ಟಿ ಮೀಸಲಾತಿ ಹೊರತುಪಡಿಸಿ ಎಲ್ಲಾ ಸಮುದಾಯಗಳ ಪುರುಷರು ಮತ್ತು ಮಹಿಳೆಯರು ಸ್ಪರ್ಧಿಸಬಹುದಾಗಿದೆ.

ಈ ಬಾರಿ ಸಾಮಾನ್ಯ ಮಹಿಳೆ ಮತ್ತು ಬಿಸಿಎಂ ಎ, ಬಿ ವರ್ಗದ ಮೀಸಲಾತಿಗಳು ದೊರಕದೆ ಇರುವುದರಿಂದ ಈ ಎರಡು ಕ್ಷೇತ್ರಗಳಲ್ಲಿ ವಿವಿಧ ಸಮುದಾಯಗಳ ಎಲ್ಲ ಪಕ್ಷಗಳ ಆಕಾಂಕ್ಷಿಗಳು ಟಿಕೆಟ್ ಪಡೆಯಲು ಪೈಪೋಟಿ ನಡೆಸಬೇಕಾಗಿದೆ. ಪರಿಶಿಷ್ಟ ಪಂಗಡಕ್ಕೆ ಮೀಸಲಾತಿಯಲ್ಲಿ ಇಲ್ಲಿಯವರೆಗೆ ಒಂದು ಸ್ಥಾನ ದೊರಕುತ್ತಿತ್ತು. ಇದೇ ಮೊದಲ ಬಾರಿಗೆ ಎರಡು ಕ್ಷೇತ್ರಗಳಲ್ಲಿ ದೊರಕಿದೆ.ಕೆಲ ಸಮುದಾಯದವರು ಹಿಂದುಳಿದ ವರ್ಗಗಳಿಗೆ ಮೀಸಲಾತಿ ದೊರಕಿಲ್ಲ ಎಂದು ಆಕ್ಷೇಪಣೆ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ.

ಮುಂದಿನ ದಿನಗಳಲ್ಲಿ ಬೇರೆ ತಾಲ್ಲೂಕಿನಿಂದ ಬರುವ ಆಕ್ಷೇಪಣೆಗಳಿಗೆ ಅನುಗುಣವಾಗಿ ಮೀಸಲಾತಿಗಳು ಬದಲಾದರೆ ಮತ್ತೆ ಯಾವ ಮೀಸಲಾತಿ ಘೋಷಣೆಯಾಗಲಿದೆ ಎಂಬುದು ಜನತೆ ಮತ್ತು ಮುಖಂಡರಲ್ಲಿ ಕುತೂಹಲ ಮೂಡಿಸಿದೆ. ಆದರೆ, ಇದೇ ಮೀಸಲಾತಿ ಅಂತಿಮ ಎಂಬ ಅಭಿಪ್ರಾಯ ಹೆಚ್ಚಾಗಿ ವ್ಯಕ್ತವಾಗುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಯಾವ ರೀತಿ ಬೆಳವಣಿಗೆ ನಡೆಯುತ್ತದೆ ಎಂಬುದನ್ನು ಕಾದುನೋಡಬೇಕಾಗಿದೆ.

ಆಕಾಂಕ್ಷಿಗಳ ಸಂಖ್ಯೆ ಹೆಚ್ಚಳ:  ಜಿಪಂ ಕ್ಷೇತ್ರಗಳ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಕಾಂಗ್ರೆಸ್, ಬಿಜೆಪಿ, ಜಾ.ದಳ ಪಕ್ಷಗಳಲ್ಲಿ ಮೀಸಲಾತಿಗೆ ಅನುಗುಣವಾಗಿ ಸ್ಪರ್ಧಿಸಲು ಆಕಾಂಕ್ಷಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ

 

 

ಆಂದೋಲನ ಡೆಸ್ಕ್

Recent Posts

ಗಿರಿಜನರಿಗೆ ಸಿಗುತ್ತಿಲ್ಲ ಪೌಷ್ಟಿಕ ಆಹಾರ ಕಿಟ್

ಕೃಷ್ಣ ಸಿದ್ದಾಪುರ ಟೆಂಡರ್ ವಿಳಂಬದಿಂದ ೯,೫೦೦ ಕುಟುಂಬಗಳಿಗೆ ಸಂಕಷ್ಟ; ತಕ್ಷಣ ಕ್ರಮ ಕೈಗೊಳ್ಳಲು ಆಗ್ರಹ  ಸಿದ್ದಾಪುರ: ಕೊಡಗು ಜಿಲ್ಲೆಯ ಹಾಡಿ…

1 min ago

ದಸರಾ ಪಾಸ್ ಹಂಚಿಕೆಯೇ ತಲೆನೋವು

ಕೆ.ಬಿ.ರಮೇಶನಾಯಕ ಜಂಬೂಸವಾರಿ, ಪಂಜಿನ ಕವಾಯತು ವೀಕ್ಷಣೆಗೆ ಬರುವವರ ಸಂಖ್ಯೆ ಹೆಚ್ಚಳ ಸ್ಥಳೀಯರಿಗೆ ಶೇ.೭೦, ಹೊರಗಿನವರಿಗೆ ಶೇ.೩೦ರಷ್ಟು ಪ್ರಮಾಣದಲ್ಲೇ ಅದಲು ಬದಲು…

17 mins ago

ಕೋಲ್ಕತ್ತಾ ದುರ್ಗಾಪೂಜೆ ಪೆಂಡಾಲ್‌ನಲ್ಲಿ ಕಾಲ್ತುಳಿತ: ಸಾವಿನ ಸಂಖ್ಯೆ 19ಕ್ಕೆ ಏರಿಕೆ

ಕೋಲ್ಕತ್ತಾ: ದುರ್ಗಾಪೂಜೆ ಸಂಭ್ರಮದ ನಡುವೆ ಭೀಕರ ದುರಂತ ಸಂಭವಿಸಿದೆ. ಉತ್ತರ ಕೋಲ್ಕತ್ತಾದ ಚೋರ್‌ಬಗಾನ್‌ನ ಜನಪ್ರಿಯ ದುರ್ಗಾಪೂಜೆ ಪೆಂಡಾಲ್‌ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ…

18 hours ago

ಪಾಣಾಜೆಯಲ್ಲಿ ಅತ್ಯಧಿಕ ಮಳೆ: 16.7 ಸೆಂಟಿಮೀಟರ್ ದಾಖಲು!

ದಕ್ಷಿಣ ಕನ್ನಡ: ಜಿಲ್ಲೆಯ ಪುತ್ತೂರು ತಾಲೂಕಿನ ಪಾಣಾಜೆಯಲ್ಲಿ ಭಾರೀ ಮಳೆಯಾಗಿದ್ದು, ರಾಜ್ಯದಲ್ಲೇ ಅತ್ಯಧಿಕ 16.7 ಸೆಂಟಿಮೀಟರ್ ಮಳೆ ದಾಖಲಾಗಿದೆ. ಶನಿವಾರ…

18 hours ago

ಅಕ್ರಮ ಕೇರಳ ಲಾಟರಿ ಮಾರಾಟ: ಓರ್ವ ಬಂಧನ

ಗುಂಡ್ಲುಪೇಟೆ: ಅಕ್ರಮವಾಗಿ ಕೇರಳ ಲಾಟರಿ ಟಿಕೆಟ್‌ಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬರನ್ನು ಗುಂಡ್ಲುಪೇಟೆ ಠಾಣೆ ಪೊಲೀಸರು ಬಂಧಿಸಿ, ಲಾಟರಿ ಟೆಕೆಟ್‌ಗಳನ್ನು ವಶಕ್ಕೆ…

21 hours ago