ರಂಗಭೂಮಿ ಹಿನ್ನೆಲೆಯ ಮಂಜುನಾಥ್ ಮುನಿಯಪ್ಪ ನಿರ್ಮಿಸಿ, ನಿರ್ದೇಶಿಸಿರುವ ಚಿತ್ರ ‘೯ ಸುಳ್ಳು ಕಥೆಗಳು’. ಇದರ ಟ್ರ್ತ್ಯೈಲರ್ ಮತ್ತು ಆಡಿೋಂ ಬಿಡುಗಡೆಯನ್ನು ಪತ್ರಕರ್ತ, ನಿರ್ದೇಶಕರಾದ ಸದಾಶಿವ ಶೆಣೈ ಮತ್ತು ಇಂದ್ರಜಿತ್ ಲಂಕೇಶ್ ಅವರು ಮಾಡಿದರು. ಶಿವರಾಜಕುಮಾರ್ ಈ ಚಿತ್ರದ ಟ್ರ್ತ್ಯೈಲರ್‌ಗೆ ಧ್ವನಿ ನೀಡಿರುವುದು ವಿಶೇಷ. ‘ಇದೊಂದು ನೈಜ ಘಟನೆ ಆಧಾರಿತ ಚಿತ್ರ. ನವರಸಗಳನ್ನು ಆಧರಿಸಿ ಈ ಚಿತ್ರದ ಕಥೆ ಮಾಡಿದೆ. ನಂತರ ನಿರ್ಮಾಪಕರಿಗೆ ಹುಡುಕಾಡಿದೆ. ಯಾರೂ ಸಿಗಲಿಲ್ಲ. ನನ್ನ ಸ್ನೇಹಿತ ಸೂರ್ಯನಾರಾಯಣ್ ಮೊದಲು ದೊಡ್ಡ ಮೊತ್ತದ ಹಣ ನೀಡಿ ಈ ಚಿತ್ರಕ್ಕೆ ಚಾಲನೆ ನೀಡಿದರು. ನಂತರ ಸಾಕಷ್ಟು ಗೆಳೆಯರು ನನ್ನ ಜೊತೆಯಾದರು’ ಎಂದರು ಮಂಜುನಾಥ ಮುನಿಯಪ್ಪ.
‘ಚಿತ್ರದಲ್ಲಿ ಆರು ಹಾಡುಗಳಿವೆ. ಸಂತ ಶಿಶುನಾಳ ಶರೀಫರ ಗೀತೆೊಂಂದನ್ನು ಬಳಸಿಕೊಂಡಿದ್ದೇವೆ. ವಿಕ್ರಮ್ ವಸಿಷ್ಠ, ಸತೀಶ್ ಬೆಲ್ಲೂರು ಹಾಗೂ ಕಿರಣ್ ವಿಪ್ರ ಹಾಡುಗಳನ್ನು ಬರೆದಿದ್ದಾರೆ. ವಿಜಯ್ ಪ್ರಕಾಶ್, ರಾಜೇಶ್ ಕೃಷ್ಣನ್, ವಾರಿಜಾಶ್ರೀ, ಶಶಿಧರ್ ಕೋಟೆ, ಚಿಂತನ್ ವಿಕಾಸ್ ಸೇರಿದಂತೆ ಪ್ರಸಿದ್ಧ ಗಾಯಕರು ಈ ಹಾಡುಗಳನ್ನು ಹಾಡಿದ್ದಾರೆ. ನಟ, ನಿರ್ದೇಶಕ ರಿಷಭ್ ಶೆಟ್ಟಿ ನಮ್ಮ ಚಿತ್ರದ ಹಾಡೊಂದನ್ನು ಹಾಡಿದ್ದಾರೆ’ ಎಂಬುದು ಸಂಗೀತ ಸಂಯೋಜಕರಾದ ಪ್ರವೀಣ್ ಮತ್ತು ಪ್ರದೀಪ್ ಮಾತು. ಪರಮೇಶ್ ಛಾಯಾಗ್ರಹಣ, ಶ್ರೀಕಾಂತ್ ಸಂಕಲನದ ಚಿತ್ರ ‘೯ ಸುಳ್ಳು ಕಥೆಗಳು’ ಚಿತ್ರದ ತಾರಾಬಳಗದಲ್ಲಿ ಪ್ರಮೋದ್ ಶೆಟ್ಟಿ, ವಿನಾಯಕ ಜೋಶಿ, ಕೃಷ್ಣ ಹೆಬ್ಬಾಳೆ, ಸುಕೃತ ವಾಗ್ಲೆ, ಕರಿಸುಬ್ಬು, ನಂದಗೋಪಾಲ್, ಲಕ್ಷಿ ್ಮೀ ಚಂದ್ರಶೇಖರ್, ಶ್ರೀನಿವಾಸಪ್ರಭು, ಸುನೇತ್ರ ಪಂಡಿತ್, ಸುಪ್ರೀತಾ ಶೆಟ್ಟಿ, ಸುಂದರ್ ವೀಣಾ, ವೀಳ್ಯಾ ರಾಘವೇಂದ್ರ ಸೇರಿದಂತೆ ನೂರಕ್ಕೂ ಅಧಿಕ ಕಲಾವಿದರು ಇದ್ದಾರಂತೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…