ಮೈಸೂರು: ಮದುವೆ ಸದ್ಯಕ್ಕಿಲ್ಲ ಎನ್ನುತ್ತಿದ್ದ ನಟ ಅಭಿಷೇಕ್ ಅಂಬರೀಷ್ ತಮ್ಮ ಬಾಲ್ಯದ ಗೆಳತಿ, ಮಾಡೆಲ್ ಅವಿವಾ ಬಿದ್ದಪ್ಪ ಅವರ ಜತೆ ಇಂದು (ಡಿ.11) ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಎರಡೂ ಕುಟುಂಬದ ಸದಸ್ಯರು ಹಾಗೂ ಕೆಲವೇ ಮಂದಿ ಆಪ್ತರು ಮಾತ್ರ ಈ ಸಮಾರಂಭಕ್ಕೆ ಸಾಕ್ಷಿ ಆಗಿದ್ದಾರೆ. ಅಂಬರೀಷ್ ಹಾಗೂ ಸುಮಲತಾ ಪುತ್ರನ ನಿಶ್ಚಿತಾರ್ಥದ ಕುರಿತು ಹಲವು ದಿನಗಳಿಂದ ಸುದ್ದಿ ಕೇಳಿಬರುತ್ತಿತ್ತು. ಆದರೆ ಕುಟುಂಬ ವರ್ಗದವರು ಈ ಮಾಹಿತಿಯನ್ನು ನಿರಾಕರಿಸಿದ್ದರು.
ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿದ್ದಪ್ಪ ಅವರು ಉಂಗುರ ಬದಲಾಯಿಸಿಕೊಂಡಿದ್ದಾರೆ. ಸಿನಿಮಾ, ರಾಜಕೀಯ ಕ್ಷೇತ್ರದ ಕೆಲವೇ ಕೆಲವು ಗಣ್ಯರು ಈ ಸಮಾರಂಭಕ್ಕೆ ಹಾಜರಿ ಹಾಕಿದ್ದಾರೆ.
ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ಈ ಜೋಡಿಗೆ ಅಭಿನಂದನೆ ಸಲ್ಲಿಸಿದ್ದಾರೆ. 2019ರಲ್ಲಿ ತೆರೆಕಂಡ ‘ಅಮರ್’ ಸಿನಿಮಾ ಮೂಲಕ ಅಭಿಷೇಕ್ ಅಂಬರೀಷ್ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ಈಗ ಸೂರಿ ನಿರ್ದೇಶನ ಮಾಡುತ್ತಿರುವ ‘ಬ್ಯಾಡ್ ಮ್ಯಾನರ್ಸ್’ ಹಾಗೂ ಕೃಷ್ಣ ನಿರ್ದೇಶನದ ‘ಕಾಳಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.
ಮೈಸೂರು ವಿಶ್ವವಿದ್ಯಾನಿಲಯಕ್ಕೆ ರಾಷ್ಟ್ರಕವಿ ಕುವೆಂಪು ಅವರು ನೀಡಿರುವ ಅಪಾರ ಕೊಡುಗೆಯ ಸ್ಮರಣಾರ್ಥ ಹಾಗೂ ಅವರ ಪರಿಕಲ್ಪನೆಯ ಮಾನಸಗಂಗೋತ್ರಿಯಲ್ಲಿ ಇರುವ ಬಯಲು…
ಕಾವೇರಿ ನದಿ ನೀರಿನ ಹಂಚಿಕೆಯ ವಿಷಯದಲ್ಲಿ ತಮಿಳುನಾಡು ಸರ್ಕಾರವು ಪದೇ ಪದೇ ಕರ್ನಾಟಕದ ಮೇಲೆ ಒತ್ತಡ ಹೇರುವುದು ಹಾಗೂ ಇದರಿಂದಾಗಿ…
ರಾಜ್ಯದ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಅತ್ಯಾಧುನಿಕ ಡಿಜಿಟಲ್ ಲಗೇಜ್ ಲಾಕರ್ ವ್ಯವಸ್ಥೆ ಆರಂಭಿಸಿರುವುದು ಶ್ಲಾಘನೀಯ ಹೆಜ್ಜೆಯಾಗಿದೆ. ಪ್ರತಿದಿನ ರಾಜದಾದ್ಯಂತ ಹೆಚ್ಚಿನ…
ಪ್ರೊ. ಬಿ. ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮಂಡ್ಯ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಪಶಸ್ತಿ ಪ್ರೋತ್ಸಾಹ ಮಂಡ್ಯದ ಕರ್ನಾಟಕ…
ಸಿಂಗಿ ಸತೀಶ್ ತಾಕುಗಳನ್ನು ಪರಿಶೀಲಿಸಿದ ಕೃಷಿ ವಿಜ್ಞಾನಗಳು; ಮುನ್ನೆಚ್ಚರಿಕೆ ವಹಿಸಲು ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರ ಸಲಹೆ ಗೋಣಿಕೊಪ್ಪ: ಕೊಡಗಿನಲ್ಲಿ ಭತ್ತ…
ಹೇಮಂತ್‌ಕುಮಾರ್ ಮಂಡ್ಯ ಜಿಲ್ಲೆಯಲ್ಲಿ ೪೮,೫೯೧ ಹೆ. ಬೆಳೆ ಹಾನಿ ೫೪.೫೩ ಕೋಟಿ ರೂ. ನಷ್ಟದ ಅಂದಾಜು ಮಂಡ್ಯ: ಜಿಲ್ಲೆಯಲ್ಲಿ ಕಳೆದ…