ಆಂದೋಲನ ಪುರವಣಿ

ತಾತ -ಮೊಮ್ಮಗ ಆಗಿ ಅನಂತನಾಗ್, ದಿಗಂತ್

ಅನಂತನಾಗ್ ಮತ್ತು ದಿಗಂತ್ ‘ಪಂಚರಂಗಿ’ ಚಿತ್ರದಲ್ಲಿ ಜೊತೆyAಗಿ ಕಾಣಿಸಿಕೊಂಡಿದ್ದರು. ಇದೀಗ ಅವರಿಬ್ಬರೂ ಒಂದು ಚಿತ್ರದಲ್ಲಿ ನಟಿಸುತ್ತಿರುವ ಸುದ್ದಿ. ಚಿತ್ರದ ಹೆಸರು ‘ತಿಮ್ಮಯ್ಯ – ತಿಮ್ಮಯ್ಯ’. ಗರುಡ ಮೋಷನ್ ಪಿಕ್ಚರ್ಸ್ ಪ್ರ್ತ್ಯೈ. ಲಿ. ಲಾಂಛನದಲ್ಲಿ ರಾಜೇಶ್ ಶರ್ಮ ನಿರ್ಮಿಸಿರುವ ಈ ಚಿತ್ರವನ್ನು ಸಂಜಯ್‌ ಶರ್ಮ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿದ್ದಾರೆ.

ಹಿಂದಿ ಚಿತ್ರರಂಗದ ಹೆಸರಾಂತ ನಿರ್ದೇಶಕರ ಬಳಿ ಕೆಲಸ ಮಾಡಿ ಅನುಭವ ಪಡೆದಿರುವ ಸಂಜಯ್‌ ಶರ್ಮ ನಿರ್ದೇಶಿಸುತ್ತಿರುವ ಮೊದಲ ಚಿತ್ರವಿದು. ೮೫ರ ವಯಸ್ಸಿನ ತಾತನ ಪಾತ್ರ ಹಿರಿಯ ತಿಮ್ಮಯ್ಯನಾಗಿ ಅನಂತನಾಗ್ ನಟಿಸಿದರೆ, ಅವರ ಮೊಮ್ಮಗ ಕಿರಿಯ ತಿಮ್ಮಯ್ಯನ ಪಾತ್ರದಲ್ಲಿ ದಿಗಂತ್ ಅವರಿದ್ದಾರೆ. ಅವರೊಂದಿಗೆ ಶುಭ್ರ ಅಯ್ಯಪ್ಪ, ರುಕ್ಮಿಣಿ ವಿಜಯಕುವಾರ್, ವಿನೀತ್ ಬೀಪ್ ಕುಮಾರ್, ಪ್ರಕಾಶ್ ತುಮ್ಮಿನಾಡ್, ಕೆ.ಎಸ್.ಶ್ರೀಧರ್, ಮಿಮಿಕ್ರಿ ಗೋಪಿ, ಅಂಬುಜಾಕ್ಷಿ ಮುಂತಾದವರು ಇದ್ದಾರೆ.

ಅನೂಪ್ ಸೀಳಿನ್ ಸಂಗೀತ ಸಂಯೋಜನೆ, ಜಯಂತ್‌ ಕಾಯ್ಕಿಣಿ ಗೀತರಚನೆ, ಬಾಲಕೃಷ್ಣ ತೋಟ ಛಾಯಾಗ್ರಹಣ, ಸುರೇಶ್ ಅರಸ್ ಸಂಕಲನ ಈ ಚಿತ್ರಕ್ಕಿದೆ. ಬೆಂಗಳೂರು, ಕೊಡಗು ಹಾಗೂ ಕುಣಿಗಲ್‌ನಲ್ಲಿ ಚಿತ್ರೀಕರಣ ನಡೆದಿದೆ. ಈ ಚಿತ್ರದ ಟೀಸರ್ ಈಗ ಬಿಡುಗಡೆಯಾಗಿದೆ.

andolana

Recent Posts

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…

27 mins ago

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

1 hour ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

3 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

5 hours ago

ಇಂದು ರಾತ್ರಿ ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8.30ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಕುರಿತ…

5 hours ago

ಹಾಸನ: ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ

ಹಾಸನ: ಬೇಲೂರು ತಾಲ್ಲೂಕಿನ ಕಾನಳ್ಳಿ ಅರಣ್ಯ ಪ್ರದೇಶದಲ್ಲಿದ್ದ ದೈತ್ಯಾಕಾರದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಮೂರನೇ…

6 hours ago