ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿದ್ದ ಗೋಧಿಯ ಸಗಟು ಬೆಲೆ ನಿಧಾನವಾಗಿ ಇಳಿಯುತ್ತಾ ಬಂದಿದೆ. ಕೇಂದ್ರ ಸರ್ಕಾರವು ಗೋಧಿ ರಫ್ತಿನ ಮೇಲೆ ಹೇರಿದ ನಿರ್ಬಂಧ ಕ್ರಮಗಳಿಂದಾಗಿ ಬೆಲೆ ನಿಯಂತ್ರಣಕ್ಕೆ ಬಂದಿದೆ. ಗೋಧಿ ಚಿಲ್ಲರೆ ಮಾರಾಟ ಬೆಲೆಯೂ ನಿಯಂತ್ರಣಕ್ಕೆ ಬಂದಿದೆ. ಬರುವ ದಿನಗಳಲ್ಲಿ ಮತ್ತಷ್ಟು ದರ ಇಳಿಯುವ ಸಾಧ್ಯತೆ ಇದೆ ಎಂದು ಕೇಂದ್ರ ವಾಣಿಜ್ಯ ಸಚಿವಾಲಯ ತಿಳಿಸಿದೆ.