ಅಸ್ಥಿರತೆಗೆ ಮತ್ತೊಂದು ಹೆಸರೇ ಕೃಷಿ. ಈ ಕ್ಷೇತ್ರದಲ್ಲಿರುವಷ್ಟು ಚಂಚಲತೆ, ಆತಂಕ, ಮತ್ತ್ಯಾವ ಕ್ಷೇತ್ರದಲ್ಲೂ ಇರಲಾರದು. ಸರ್ಕಾರದ ನೀತಿಗಳು, ದಲ್ಲಾಳಿಗಳು,ಮಾರುಕಟ್ಟೆಯಲ್ಲಿನ ಲೋಪಗಳಿಂದಾಗಿ ರೈತರು ತಮ್ಮ ಬೆಳೆಗಳಿಗೆ ಸೂಕ್ತ ಬೆಲೆ ಪಡೆಯಲು ಸಾಧ್ಯವಾಗುತ್ತಿಲ್ಲ. ಇದಕ್ಕೆ ಒಂದು ಉದಾಹರಣೆ ಎಂದರೆ ಈರುಳ್ಳಿ ಬೆಲೆ ಚಿಲ್ಲರೆ ಮಾರುಕಟ್ಟೆಯಲ್ಲಿ ಕೆ.ಜಿ.ಗೆ ನೂರು ರೂ. ದಾಟಿದಾಗಲೂ ರೈತರಿಗೆ ಬಂಪರ್ ಬೆಲೆ ಸಿಗುವುದಿಲ್ಲ. ಮಧ್ಯವರ್ತಿಗಳೇ ಹೆಚ್ಚು ಲಾಭ ಮಾಡಿಕೊಳ್ಳುತ್ತಾರೆ. ಇಂತಹ ಸಂದರ್ಭದಲ್ಲಿ ರೈತರು ಲಭ್ಯವಿರುವ ತಂತ್ರಜ್ಞಾನ ಬಳಸಿಕೊಂಡು ತಮ್ಮ ಕೃಷಿ ಉತ್ಪನ್ನಗಳನ್ನು ಸೂಕ್ತ ಸಮಯದಲ್ಲಿ ಮಾರಾಟ ಮಾಡಿ ಲಾಭಗಳಿಸಲು ಅವಕಾಶಗಳಿವೆ.
ರೈತರಿಗಾಗಿ ಹಲವಾರು ಆ್ಯಪ್‌ಗಳಿವೆ: ಹವಾಮಾನ, ರಸಗೊಬ್ಬರ,ಬೆಳೆಗಳ ಬಗ್ಗೆ ಪೂರ್ಣವಾದ ಮಾಹಿತಿ ಇದ್ದರೆ ಲಾಭದಾಯಕ. ಈ ಆ್ಯಪ್‌ಗಳು ರೈತ ಸಮುದಾಯಕ್ಕೆ ಒಂದಷ್ಟು ಸಹಾಯವಾಗುತ್ತವೆ. ಕೆಲವೊಂದು ಆ್ಯಪ್‌ಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಿಡುಗಡೆ ಮಾಡಿದ್ದರೆ, ಮತ್ತೊಂದಷ್ಟು ಆ್ಯಪ್‌ಗಳನ್ನು ಕೃಷಿಗೆ ಸಂಬಂಧಿಸಿದ ಸಂಸ್ಥೆಗಳು ನಿರ್ವಹಣೆ ಮಾಡುತ್ತಿವೆ. ರೈತರು ಈ ಮಾಹಿತಿಯನ್ನು ಬಳಸಿಕೊಂಡು ಅತ್ಯುತ್ತಮ ಕೃಷಿ ಮಾಡಬಹುದು. ತಮ್ಮ ಉತ್ಪನ್ನಗಳಿಗೆ ಸೂಕ್ತ ಬೆಲೆಯನ್ನು ಪಡೆದುಕೊಳ್ಳಬಹುದು.
ಕ್ರಾಪ್ ಇನ್ಶೂರೆನ್ಸ್ : ಹೆಸರು ಸೂಚಿಸುವಂತೆ ಇದು ಬೆಳೆ ವಿಮೆಗೆ ಸಂಬಂಧಿಸಿದ ಮಾಹಿತಿ ಒದಗಿಸುವ ಆ್ಯಪ್, ಅಧಿಸೂಚಿತ ಬೆಳೆಗಳ ಇನ್ಶೂರೆನ್ಸ್ ಪ್ರೀಮಿಯಂ ಅನ್ನು ಲೆಕ್ಕ ಹಾಕಲು ಈ ಆ್ಯಪ್ ನೆರವಾಗುತ್ತದೆ. ಕಟ್- ಆಫ್ ಡೇಟ್ಸ್ ಮತ್ತು ಬೆಳೆ ಹಾಗೂ ಸ್ಥಳದ ಬಗ್ಗೆ ,ಕಂಪೆನಿ ಸಂಪರ್ಕದ ಮಾಹಿತಿ ನೀಡುತ್ತದೆ.
ಕಿಸಾನ್ ಸುವಿಧಾ: ಇದಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ೨೦೧೬ ರಲ್ಲಿ ಚಾಲನೆ ನೀಡಿದರು. ಪ್ರಸಕ್ತ ಹವಾಮಾನ ಮತ್ತು ಮುಂದಿನ ಐದು ದಿನಗಳ ಹವಾಮಾನದ ಮಾಹಿತಿಯನ್ನು ಒದಗಿಸುತ್ತದೆ. ಹತ್ತಿರದ ಪಟ್ಟಣಗಳಲ್ಲಿರುವ ಧಾರಣೆ, ರಸಗೊಬ್ಬರ, ಬೀಜ, ಯಂತ್ರೋಪಕರಣಗಳ ಮಾಹಿತಿಯನ್ನು ನೀಡುತ್ತದೆ. ದೇಶದ ನಾನಾ ಭಾಷೆಗಳಲ್ಲಿ ಈ ಆ್ಯಪ್ ಮಾಹಿತಿಯನ್ನು ನೀಡುತ್ತದೆ.
ಮೈಸೂರು: ಹೊಸ ವರ್ಷ 2025ರ ಆಗಮನಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿಯಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಜನತೆ ಸಂಭ್ರಮಾಚರಣೆ ಮಾಡಲು…
ಹಾಸನ/ಸಕಲೇಶಪುರ: ಕೇಂದ್ರ ಸರ್ಕಾರದ ನೆರವಿನೊಂದಿಗೆ ಕಾಫಿ ಬೆಳೆಗಾರರಿಗೆ ಪರಿಹಾರಗಳನ್ನು ಒದಗಿಸಲಾಗುವುದು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಶ್ವಾಸನೆ ನೀಡಿದ್ದಾರೆ. ಹಾಸನ…
ಬೆಂಗಳೂರು: ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿಯು ಬೆಳಗಾವಿ ಚಲೋ ನಡೆಸಲು ಮುಂದಾಗಿದೆ. ಈ ಬಗ್ಗೆ…
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ನಿಯೋಗದೊಂದಿಗೆ ಸಭೆ ನಡೆಸಿ ಕಾಂಗ್ರೆಸ್ ಸರ್ಕಾರ ರೈತರ…
ಹಾಸನ: ಈ ಜಿಲ್ಲೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬ ನೀಡಿದ ಕೊಡುಗೆ ಏನು ಎಂದು ಕೇಳಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ…
ಮೈಸೂರು: ಎಂಎಲ್‌ಸಿ ಸಿ.ಟಿ.ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಫೇಕ್ ಎನ್‌ಕೌಂಟರ್ ಮಾಡಲು ಯತ್ನಿಸಿದ್ದರು ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…