ಬೆಂಗಳೂರು : ಸ್ಯಾಂಡಲ್ವುಡ್ನ ಜನಪ್ರಿಯ ಸಿನಿಮಾ ನಿರ್ಮಾಪಕರಾದ ವಿಜಯ್ ಕಿರಗಂದೂರು, ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‍ಕುಮಾರ್ ಹಾಗು ಹಿರಿಯ ನಟಿ ತಾರಾ ಅನುರಾಧ ಅವರಿಗೆ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ನೀಡಲಾಗುತ್ತಿದೆ.
ಕಳೆದ 47 ವರ್ಷಗಳಿಂದ ಕನ್ನಡ ಸಿನಿಮಾರಂಗ ಮತ್ತು ಮಾಧ್ಯಮದ ನಡುವೆ ಸೇತುವೆಯಂತೆ ಕಾರ್ಯ ನಿರ್ವಹಿಸುತ್ತಿರುವ ಸಂಸ್ಥೆಯೇ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆ. ಕನ್ನಡ ಚಿತ್ರರಂಗದ ಪ್ರಥಮ ಪ್ರಚಾರಕರ್ತ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದಿವಂಗತ ಡಿ.ವಿ.ಸುಧೀಂದ್ರ ಅವರಿಂದ ಸ್ಥಾಪಿಸಲ್ಪಟ್ಟ ಈ ಸಂಸ್ಥೆಗೆ 25 ವರ್ಷ ತುಂಬಿದ ಸಂದರ್ಭದಲ್ಲಿ, ಈ ಸುದೀರ್ಘಯಾನಕ್ಕೆ ಕಾರಣಕರ್ತರಾಗಿದ್ದ ನಿರ್ಮಾಪಕರು ಮತ್ತು ಹಿರಿಯ ಪತ್ರಕರ್ತರಿಗೆ ಪ್ರಶಸ್ತಿ ನೀಡಿ ಗೌರವಿಸುವ ಪದ್ಧತಿ ಆರಂಭಿಸಿದ್ದರು.ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ: ಕೇವಲ ಎರಡು ಪ್ರಶಸ್ತಿಗಳಿಂದ ಇಂಥದ್ದೊಂದು ಪ್ರಶಸ್ತಿ ಪ್ರದಾನ ಸಮಾರಂಭ ಶುರುವಾದ ಇತಿಹಾಸವಿದೆ. ಹೀಗೆ ಆರಂಭವಾದ ಸಮಾರಂಭವೀಗ 11 ಹಾಗು ಮೂರು ವಿಶೇಷ ಪ್ರಶಸ್ತಿಗಳಿಗೆ ವಿಸ್ತಾರವಾಗಿದೆ. ನಿರ್ಮಾಪಕರು ಮತ್ತು ಪತ್ರಕರ್ತರಿಗೆ ಮಾತ್ರವಲ್ಲದೇ ಕನ್ನಡ ಚಿತ್ರರಂಗಕ್ಕೆ ತಮ್ಮದೇ ರೀತಿಯಲ್ಲಿ ಕೊಡುಗೆ ನೀಡುತ್ತಿರುವ ಕಲಾವಿದರು ಮತ್ತು ತಂತ್ರಜ್ಞರಿಗೆ ಪ್ರಶಸ್ತಿ ನೀಡಲಾಗುತ್ತಿದೆ.
ಪ್ರಶಸ್ತಿಗೆ ಆಯ್ಕೆಯಾದ ಗಣ್ಯರು: ಪಿ.ಧನರಾಜ್ – ಹಿರಿಯ ಚಲನಚಿತ್ರ ನಿರ್ಮಾಪಕರು, ಈಶ್ವರ ದೈತೋಟ – ಹಿರಿಯ ಪತ್ರಕರ್ತರು, ನಟ ಕುಮಾರ್ ಗೋವಿಂದ್, ಹಿರಿಯ ಪತ್ರಕರ್ತ ಸದಾಶಿವ ಶೆಣೈ, ಹಿನ್ನೆಲೆ ಗಾಯಕ ರಾಜೇಶ್ ಕೃಷ್ಣನ್, ಹಿರಿಯ ನಿರ್ದೇಶಕ ಓಂ ಸಾಯಿ ಪ್ರಕಾಶ್, ಹಿರಿಯ ನಟಿ ತುಳಸಿ, ಸಂಗೀತ ನಿರ್ದೇಶಕ ನೋಬಿನ್ ಪಾಲ್, ನಿರ್ದೇಶಕ ಮಧುಚಂದ್ರ, ಶ್ರೀನಿವಾಸ ಕಲ್ಯಾಣ ನಿರ್ದೇಶಕ ಎಂ.ಜಿ. ಶ್ರೀನಿವಾಸ್ , 777 ಚಾರ್ಲಿ ಸಿನಿಮಾ ನಿರ್ದೇಶಕ ಕಿರಣ್ ರಾಜ್, ಗೀತ ರಚನೆಕಾರ ಪ್ರಮೋದ್, ಹಿರಿಯ ಪೋಷಕ ನಟ ಶ್ರೀನಿವಾಸಮೂರ್ತಿ.
ಮೈಸೂರು : ಸಾಂಸ್ಕೃತಿಕ ನಗರಿಯ ಅರಮನೆಗೆ ಡಿ.20ರಂದು ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಮೈಸೂರು ಅರಮನೆ ಮಂಡಳಿಯ ಕಾರ್ಯನಿರ್ವಾಹಕ ಅಧಿಕಾರಿಗಳ…
ಬೆಳಗಾವಿ : ಎರಡುವರೆ ವರ್ಷಗಳಿಗೆ ಮಾತ್ರ ಮುಖ್ಯಮಂತ್ರಿ ಹುದ್ದೆ ಎಂದು ತೀರ್ಮಾನವಾಗಿಲ್ಲ. ಕಾಂಗ್ರೆಸ್ ಪಕ್ಷದ ವರಿಷ್ಠರು ತೀರ್ಮಾನ ಮಾಡಿದರೆ ಮುಂದೆಯೂ…
ಹುಣಸೂರು : ತಾಲೂಕಿನ ಹನಗೋಡು ಹೋಬಳಿಯ ಹೆಮ್ಮಿಗೆ ಬಳಿಯ ಜಮೀನಿನಲ್ಲಿ ಹಗಲು ವೇಳೆಯೇ ಹುಲಿ ದಾಳಿ ನಡೆಸಿ ಹಸುವನ್ನು ಕೊಂದು…
ಟಿ.ನರಸೀಪುರ : ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಬಿದ್ದ ಘಟನೆ ಟಿ.ನರಸೀಪುರ ತಾಲ್ಲೂಕಿನ ಶ್ರೀರಂಗರಾಜಪುರ ಗ್ರಾಮದಲ್ಲಿ ನಡೆದಿದೆ. ಕಳೆದ…
ಮೈಸೂರು: ಎಂಎಲ್‌ಸಿ ಸ್ಥಾನಕ್ಕಾಗಿ ರಕ್ತದಲ್ಲಿ ಸಹಿ ಮಾಡಿ ಮನವಿ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತನೊಬ್ಬರು ತಮ್ಮ…
ಧನುರ್ಮಾಸ ಆರಂಭವಾದ ಕೂಡಲೇ ಎಲ್ಲೆಡೆ ದೇವಸ್ಥಾನಗಳಲ್ಲಿ ಬ್ರಾಹ್ಮಿ ಮುಹೂರ್ತದಲ್ಲಿ ಬೆಳಗಿನ ಜಾವ ಪೂಜೆ ಆರಂಭವಾಗುತ್ತದೆ. ಮಹಿಳೆಯರು ಬೆಳಗಿನ ಚಳಿಯಲ್ಲಿಯೇ ದೇವಾಲಯಗಳಿಗೆ…