ಆಂದೋಲನ ಪುರವಣಿ

ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ

ರೋಗನಿರೋಧಕ ಶಕ್ತಿ ಕಡಿಮೆಯಾದರೆ ನಾನಾ ರೀತಿಯ ರೋಗಗಳು ಬರುತ್ತವೆ. ಸಾಮಾನ್ಯವಾಗಿ ಇದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ ನಮ್ಮ ದೇಹವನ್ನು ಆರೋಗ್ಯವಾಗಿ ನೋಡಿಕೊಳ್ಳಲು ಅಥವಾ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವುದು ನಮ್ಮ ಕೈಯಲ್ಲಿದೆ.

ನಾವು ಸೇವನೆ ಮಾಡುವ ಆಹಾರಗಳು ನಮ್ಮನ್ನು ರೋಗಗಳಿಂದ ರಕ್ಷಿಸಬಹುದು. ಹಾಗಾದರೆ ರೋಗ ನಿರೋಧಕ ಶಕ್ತಿ ಕಡಿಮೆಯಾಗಿದೆ ಎಂಬುದು ಹೇಗೆ ತಿಳಿಯುತ್ತದೆ? ದೇಹ ನಮಗೆ ನೀಡುವ ಸೂಚನೆಗಳೇನು ತಿಳಿದುಕೊಳ್ಳಿ. ರೋಗನಿರೋಧಕ ಶಕ್ತಿಯು ನಮ್ಮ ದೇಹವನ್ನು ಸಾಂಕ್ರಾಮಿಕ ರೋಗಗಳಿಂದ ರಕ್ಷಿಸುತ್ತದೆ. ಇವು ಕಡಿಮೆ ಆದಲ್ಲಿ ನಾನಾ ರೀತಿಯ ರೋಗಗಳು ಬರುತ್ತದೆ. ಸಾಮಾನ್ಯ ವಾಗಿ ರೋಗನಿರೋಧಕ ಶಕ್ತಿಯನ್ನು ನಾವು ಸೇವನೆ ಮಾಡುವ ಆಹಾರಗಳಿಂದ ಪಡೆದು ಕೊಳ್ಳಬಹುದು. ಆದರೆ ಈಗಿನ ಆಧುನಿಕ ಜೀವನ ಶೈಲಿಯಿಂದಾಗಿ ಆರೋಗ್ಯಕರ ಆಹಾರಗಳ ಸೇವನೆ ಕಡಿಮೆಯಾಗಿದೆ, ಜಂಕ್ ಫುಡ್ ಸೇವನೆ ಹೆಚ್ಚಾಗಿದೆ. ಈ ರೀತಿಯ ಆಹಾರ ಪದ್ಧತಿಯನ್ನು ಅನುಸರಿಸುವುದು ನಮ್ಮ ಆರೋಗ್ಯವನ್ನು ನಾವೇ ಹಾಳು ಮಾಡಿ ಕೊಂಡಂತೆ. ಹಾಗಾಗಿ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ನಾವು ಆರೋಗ್ಯಕರ ಜೀವನ ಶೈಲಿಯನ್ನು ರೂಢಿಸಿಕೊಳ್ಳಬೇಕು.

■ ಬೆಟ್ಟದ ನೆಲ್ಲಿಕಾಯಿಯನ್ನು ಜೇನು ತುಪ್ಪದಲ್ಲಿ ನೆನೆಸಿ ಒಂದು ಚಮಚ ಪ್ರತಿದಿನ ಬೆಚ್ಚನೆ ನೀರಿನಲ್ಲಿ ಹಾಕಿ ಕುಡಿಯಿರಿ

■ ವಿಟಮಿನ್ ‘ಸಿ’ ಅಂಶ ಹೆಚ್ಚಾಗಿರುವಂತಹ ಹಣ್ಣುಗಳು ಅಂದರೆ ಕಿತ್ತಳೆ, ಮೂಸಂಬಿಯನ್ನು ಹೆಚ್ಚಾಗಿ ಸೇವನೆ ಮಾಡಿ

■ ಅದರ ಜೊತೆಗೆ ಪ್ರತಿನಿತ್ಯ ನಿಂಬೆಹಣ್ಣುಗಳನ್ನು ನಿಮ್ಮ ಆಹಾರದಲ್ಲಿ ಸೇವನೆ ಮಾಡುವುದನ್ನು ಮರೆಯಬೇಡಿ

■ ವಿಟಮಿನ್ ‘ಡಿ’ ಇರುವಂತಹ ಆಹಾರಗಳನ್ನು ತಿನ್ನಿ

■ ಜೊತೆಗೆ ಪ್ರತಿನಿತ್ಯ ಹತ್ತರಿಂದ ಹದಿನೈದು ನಿಮಿಷವಾದರೂ ಸೂರ್ಯನ ಎಳೆ ಬಿಸಿಲಿನಲ್ಲಿ ಸಮಯ ಕಳೆಯಿರಿ

■ ಪ್ರೊ ಬಯೋಟಿಕ್ಸ್ ಅಂಶ ಹೆಚ್ಚಾಗಿರುವ ಮೊಸರು, ಮಜ್ಜಿಗೆಯನ್ನು ಹೆಚ್ಚು ಹೆಚ್ಚು ಸೇವನೆ ಮಾಡಿ

■ ನಿತ್ಯ ಅರಿಶಿನ ಹಾಕಿದ ಹಾಲನ್ನು ಕುಡಿಯಿರಿ

■ ನಿತ್ಯ ಎರಡರಿಂದ ಮೂರು ಲೀಟರ್ ನೀರು ಕುಡಿಯಿರಿ; ದಿನ ೮ ಗಂಟೆ ನಿದ್ದೆ ಮಾಡಿ

■ ಒತ್ತಡವನ್ನು ಆದಷ್ಟು ಕಡಿಮೆ ಮಾಡಿಕೊಳಿ

ಆಂದೋಲನ ಡೆಸ್ಕ್

Recent Posts

ಹನೂರು ತಾಲೂಕಿನಲ್ಲಿ ಮುಂದುವರಿದ ಮಳೆ ಅವಾಂತರ: ಹಳ್ಳದಲ್ಲಿ ಗಣಪತಿ ದೇವಾಲಯ ಜಲಸಮಾಧಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…

25 mins ago

ಹನೂರಿನಲ್ಲಿ ಮಳೆಯ ಅಬ್ಬರ: 50ಕ್ಕೂ ಹೆಚ್ಚು ಮನೆಗಳು ಜಲಾವೃತ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…

35 mins ago

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

7 hours ago

ಓದುಗರ ಪತ್ರ: ಜಾಗೃತಿ, ನಿಯಂತ್ರಣ ಇರಬೇಕು

ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…

7 hours ago

ಓದುಗರ ಪತ್ರ: ಚಾ.ನಗರ ಜಿಲ್ಲೆಗೆ ವಿಶೇಷ ಅನುದಾನ ನೀಡಲು ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಲಿ

ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…

7 hours ago

ಆಯಾ ಕೆಲಸ ಮಾಡಿ ಮಕ್ಕಳನ್ನು ಮಾಸ್ಟರ್ಸ್‌ ಮಾಡಿದ ಸತ್ಯಮ್ಮ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…

7 hours ago