ಚಿತ್ರ ಮಂಜರಿ

‘೧೯೯೦’S ಟ್ರೇಲರ್ ನಾ.ಸೋಮೇಶ್ವರರಿಂದ ಬಿಡುಗಡೆ

೧೯೯೦ರ ಕಾಲಘಟ್ಟದ ಪ್ರೇಮಕಥೆ ಎನ್ನಲಾಗಿರುವ ೧೯೯೦’o ಚಿತ್ರಕ್ಕೆ ಕೊನೆಗೂ ಬಿಡುಗಡೆ ದಿನಾಂಕ ಗೊತ್ತಾಗಿದೆ. ಫೆಬ್ರವರಿ ೨೮ರಂದು ರಾಜ್ಯಾದ್ಯಂತ ಶಿವರಾತ್ರಿ ಪ್ರಯುಕ್ತ ಇದು ಬಿಡುಗಡೆಯಾಗಲಿದೆ. ಅದಕ್ಕೂ ಮೊದಲು ಇತ್ತೀಚೆಗೆ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ.

ಮನಸ್ಸು ಮಲ್ಲಿಗೆ ಕಂಬೈನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ನಂದಕುಮಾರ್ ನಿರ್ದೇಶಿಸಿರುವ ೧೯೯೦’o ಚಿತ್ರದ ಟ್ರೇಲರನ್ನು ‘ಥಟ್ ಅಂತ ಹೇಳಿ’ ಕಾರ್ಯಕ್ರಮ ಖ್ಯಾತಿಯ ಡಾ.ನಾ.ಸೋಮೇಶ್ವರ ಹಾಗೂ ಪತ್ರಕರ್ತ, ನಿರ್ದೇಶಕ ಇಂದ್ರಜಿತ್ ಲಂಕೇಶ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದರು.

ಅರುಣ್-ರಾಣಿ ವರದ್ ನಾಯಕ-ನಾಯಕಿಯಾಗಿ ನಟಿಸಿರುವ ೧೯೯೦’o ಚಿತ್ರದ ಟ್ರೇಲರ್ ವೀಕ್ಷಿಸಿ ಮಾತನಾಡಿದ ನಾ.ಸೋಮೇಶ್ವರ, ತಮ್ಮದೇ ಅದ ಶುದ್ಧ ಕನ್ನಡದ ಮಾತುಗಳ ಮೂಲಕ ಟ್ರೇಲರ್ ಹಾಗೂ ಹಾಡಿನ ವಿಮರ್ಶೆ ಮಾಡಿ, ಹೊಸಬರ ಪ್ರಯತ್ನ ಯಶಸ್ವಿಯಾಗಲಿ ಎಂದರು. ಇನ್ನು, ಇಂದ್ರಜಿತ್ ಲಂಕೇಶ್ ಮಾತನಾಡಿ, ‘ಟ್ರೇಲರ್ ಚೆನ್ನಾಗಿದೆ. ಚಿತ್ರ ಕೂಡ ಇದೇ ರೀತಿ ಇರುತ್ತದೆ’ ಎಂಬ ಭರವಸೆ ವ್ಯಕ್ತಪಡಿಸಿದರು. ನಿರ್ದೇಶಕ ಸಿ.ಎಂ.ನಂದಕುಮಾರ್ ಮಾತನಾಡಿ, ‘ಚಿತ್ರದ ಹೆಸರೇ ಹೇಳುವಂತೆ ನಮ್ಮ ಚಿತ್ರದ ಕಥೆ ೯೦ರ ಕಾಲಘಟ್ಟದ್ದು. ಪ್ರೇಮಕಥೆಯೇ ಪ್ರಧಾನವಾದರೂ ನೋಡುಗನಿಗೆ ಬೇಕಾದ ಎಲ್ಲ ಅಂಶಗಳು ನಮ್ಮ ಚಿತ್ರದಲ್ಲಿದೆ. ಚಿತ್ರ ತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿ ಬಂದಿದೆ’ ಎಂದು ತಿಳಿಸಿದರು.

ಈ ಸಮಾರಂಭದಲ್ಲಿ ಅರುಣ್, ರಾಣಿ ವರದ್ ಜೊತೆಗೆ ದೇವ್, ಸಂಗೀತ ನಿರ್ದೇಶಕ ಮಹಾರಾಜ, ಛಾಯಾಗ್ರಾಹಕ ಹಾಲೇಶ್, ಸಾಹಸ ನಿರ್ದೇಶಕ ಅಶೋಕ್, ನೃತ್ಯ ನಿರ್ದೇಶಕ ಸಾದಿಕ್ ಸರ್ದಾರ್, ಸಂಕಲನಕಾರ ಕೃಷ್ಣ ಮುಂತಾದ ಚಿತ್ರ ತಂಡದ ಸದಸ್ಯರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಮಧ್ಯ ಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು: ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದು

ಇಸ್ಲಾಮಾಬಾದ್:‌ ಇರಾನ್‌, ಅಮೇರಿಕಾ-ಇಸ್ರೇಲ್‌ ಯುದ್ಧದಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು ಉಲ್ಬಣಗೊಂಡಿದೆ. ಇದರಿಂದ ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದಾಗಿದೆ. ಮಾರ್ಚ್.‌23ರಂದು…

10 mins ago

ಯುಗಾದಿ ಸಂಭ್ರಮ: ಓಂಕಾರೇಶ್ವರ ದೇವಾಲಯದಲ್ಲೂ ಬೇವು ಬೆಲ್ಲ ವಿತರಣೆ

ಮಡಿಕೇರಿ: ನಾಡಿನಾದ್ಯಂತ ಇಂದು ಹೊಸ ವರ್ಷ ಯುಗಾದಿ ಸಂಭ್ರಮ ಮನೆ ಮಾಡಿದ್ದು, ಕೊಡಗಿನ ಮನೆ ಮನೆಯಲ್ಲೂ ಯುಗಾದಿ ಹಬ್ಬದ ಸಡಗರ…

19 mins ago

ಟಿ.ನರಸೀಪುರ| ಯುಗಾದಿ ಸಂಭ್ರಮ: ತ್ರಿವೇಣಿ ಸಂಗಮಕ್ಕೆ ಹರಿದುಬಂದ ಭಕ್ತಸಾಗರ

ಟಿ.ನರಸೀಪುರ: ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಪುಣ್ಯಸ್ನಾನಕ್ಕೆಂದು ತ್ರಿವೇಣಿ ಸಂಗಮಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಮೈಸೂರು ಜಿಲ್ಲೆ…

49 mins ago

ಹುಣಸೂರು: ರೈಲ್ವೆ ಹಳಿ ತಡೆಗೋಡೆಗೆ ಸಿಲುಕಿ ಒದ್ದಾಡಿದ ಕಾಡಾನೆ

ಹುಣಸೂರು: ರೈಲ್ವೆ ಹಳಿ ತಡೆಗೋಡೆಗೆ ಸಿಲುಕಿ ಕಾಡಾನೆಯೊಂದು ಕೆಲಕಾಲ ಒದ್ದಾಟ ನಡೆಸಿದ ಘಟನೆ ತಾಲ್ಲೂಕಿನ ಉಡುವೆಪುರ ಬಳಿ ನಡೆದಿದೆ. ನಾಗರಹೊಳೆ…

1 hour ago

ಮೈಸೂರು ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿದಿದ್ದು, ಭಾರೀ ಪ್ರಮಾಣದ ಹಾನಿಯಾಗಿದೆ. ಮೈಸೂರು ಜಿಲ್ಲೆಯಲ್ಲಿ ನಿನ್ನೆ ಸುರಿದ ಭಾರೀ ಮಳೆಯಿಂದಾಗಿ…

1 hour ago

ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ: ಹಳ್ಳಿಗಳಲ್ಲಿ ಹೊನ್ನೇರು ಕಟ್ಟಿ ಸಂಭ್ರಮಿಸಿದ ಅನ್ನದಾತರು

ಮೈಸೂರು: ರೈತರು ಸಡಗರದಿಂದ ಕೃಷಿ ಚಟುವಟಿಕೆ ಆರಂಭಿಸುವ ಮೊದಲ ಹೆಜ್ಜೆ ಯುಗಾದಿಯಾಗಿದ್ದು, ಜಿಲ್ಲೆಯ ಹಲವೆಡೆ ಅನ್ನದಾತರು ಹೊನ್ನೇರು ಕಟ್ಟಿ ಭೂಮಿ…

2 hours ago