ನವದೆಹಲಿ: 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ಶುಕ್ರವಾರ (ಸೆಪ್ಟಂಬರ್ 30) ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯಿತು. ಈ ಬಾರಿ ಅತ್ಯುತ್ತಮ ನಟ ರಾಷ್ಟ್ರಪ್ರಶಸ್ತಿಯನ್ನು ತಮಿಳು ನಟ ಸೂರ್ಯ ಹಾಗೂ ಬಾಲಿವುಡ್ ನಟ ಅಜಯ್ ದೇವಗನ್ ಹಂಚಿಕೊಂಡಿದ್ದಾರೆ. ಇಬ್ಬರಿಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿದರು. ಸೂರರೈ ಪೊಟ್ರು ಸಿನಿಮಾದ ಉತ್ತಮ ಅಭಿನಯಕ್ಕೆ ನಟ ಸೂರ್ಯ ಅತ್ಯುತ್ತಮ ನಟ ಪ್ರಶಸ್ತಿ ಸ್ವೀಕರಿಸಿದರು. ಇನ್ನು ನಜ ಅಜಯ್ ದೇವಗನ್ ತಾನ್ಹಾಜಿ ಸಿನಿಮಾದ ಉತ್ತಮ ಅಭಿನಯಕ್ಕೆ ಪ್ರಶಸ್ತಿ ಗೆದ್ದು ಬೀಗಿದರು. ಅತ್ತ್ಯುತ್ತಮ ನಟಿ ಪ್ರಶಸ್ತಿ ಸೂರರೈ ಪೊಟ್ರು ಸಿನಿಮಾದ ನಟಿ ಅಪರ್ಣಾ ಬಲಾಮುರಳಿ ಪಾಲಾಗಿದೆ.
ಸೂರ್ಯ ನಟನೆಯ ಸೂರರೈ ಪೊಟ್ರು ಚಿತ್ರ ಅನೇಕ ವಿಭಾಗಗಳಲ್ಲಿ ಪ್ರಶಸ್ತಿ ಗೆದ್ದು ಬೀಗಿದೆ. ಸೂರರೈ ಪೊಟ್ರು ಅತ್ಯುತ್ತಮ ಚಿತ್ರಕಥೆ ಮತ್ತು ಅತ್ಯುತ್ತಮ ಹಿನ್ನೆಲೆ ಸಂಗೀತ ಮತ್ತು ಅತ್ಯುತ್ತಮ ಚಲನಚಿತ್ರ ಪ್ರಶಸ್ತಿ ಲಭಿಸಿದೆ. ನಟ ಸೂರ್ಯ ರಾಷ್ಟ್ರ ಮತ್ತು ನಟಿ, ನಿರ್ಮಾಪಕಿ ಜ್ಯೂತಿಕ ಇಬ್ಬರು ತಮ್ಮ ಮಕ್ಕಳು ಹಾಗು ತಮ್ಮ ಕುಟುಂಬದ ಜೊತೆ ರಾಷ್ಟ್ರಪ್ರಶಸ್ತಿ ಹಿಡಿದು ಸಂಭ್ರಮಿಸಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನಟ ಸೂರ್ಯ ಫೋಟೋ ಶೇರ್ ಮಾಡಿ ಎಲ್ಲಾ ವಿನ್ನರ್ಸ್‌ಗೂ ಅಭಿನಂದನೆ ಸಲ್ಲಿಸಿದರು. ಹಾಗೂ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿರುವ ಸೂರ್ಯ ಈ ಪ್ರಶಸ್ತಿ ನಿಮಗೆ ಎಂದು ಹೇಳಿದರು.