ಗುಜರಾತ್: ಇಲ್ಲಿನ ಗಾಂಧಿ ನಗರದಲ್ಲಿ ಇದೇ ಜನವರಿ 28 ರಂದು 2024ನೇ ಸಾಲಿನ ಫಿಲ್ಮ್ಫೇರ್ ಅವಾರ್ಡ್ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿದೆ. ಇದು 69ನೇ ಸಾಲಿನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆಗಿದ್ದು, ಕರಣ್ ಜೋಹರ್ ಕಾರ್ಯಕ್ರಮ ನಡೆಸಿಕೊಟ್ಟರು.
ಕರೀನಾ ಕಪೂರ್, ಕರಿಷ್ಮಾ ಕಪೂರ್, ವರುಣ್ ಧವನ್, ಕಾರ್ತಿಕ್ ಆರ್ಯನ್ ಸೇರಿ ಅನೇಕ ಸೆಲೆಬ್ರಿಟಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇತ್ತೀಚೆಗೆ ರಲೀಸ್ ಆದ ‘12 ಫೇಲ್ ಸಿನಿಮಾ’ ಫಿಲ್ಮ್‌ಪೇರ್ ಅವಾರ್ಡ್‌ನಲ್ಲಿ ಹಲವು ಪ್ರಶಸ್ತಿಗಳನ್ನು ಬಾಚಿಕೊಂಡಿದೆ.
‘ಜವಾನ್’, ‘ಪಠಾಣ್’ ಹಾಗೂ ಡಂಕಿ ಸಿನಿಮಾಗಳು ಹಲವು ವಿಭಾಗಗಳಲ್ಲಿ ಆಯ್ಕೆ ಆಗಿತ್ತು. ಆದರೆ, ಗೆಲುವು ಸಿಕ್ಕಿದ್ದು ಕಡಿಮೆ. ‘ಅನಿಮಲ್’ ಸಿನಿಮಾ ಬರೋಬ್ಬರಿ 19 ವಿಭಾಗಗಳಲ್ಲಿ ನಾಮಿನೇಟ್ ಆಗಿತ್ತು. ಇವೆಲ್ಲವನ್ನು ಮೀರಿದ ‘12 ಫೇಲ್ ಸಿನಿಮಾ’ ಹಲವಾರು ಪ್ರಶಸ್ತಿಗಳನ್ನು ಬಾಚಿಕೊಂಡಿದ್ದು, ಯಾವ ಸಿನಿಮಾ ಯಾವ ವಿಭಾಗದಲ್ಲಿ ಗೆದ್ದಿದೆ ಎನ್ನುವ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ.
ಅತ್ಯುತ್ತಮ ಸಿನಿಮಾ (ಪಾಪ್ಯುಲರ್):‘12th ಫೇಲ್’
ಅತ್ಯುತ್ತಮ ಸಿನಿಮಾ (ಕ್ರಿಟಿಕ್ಸ್): ಜೋರಮ್
ಅತ್ಯುತ್ತಮ ನಿರ್ದೇಶಕ: ವಿಧು ವಿನೋದ್ ಚೋಪ್ರಾ (12th ಫೇಲ್)
ಅತ್ಯುತ್ತಮ ನಟ: ರಣಬೀರ್ ಕಪೂರ್ (ಅನಿಮಲ್)
ಅತ್ಯುತ್ತಮ ನಟ (ಕ್ರಿಟಿಕ್ಸ್): ವಿಕ್ರಾಂತ್ ಮಾಸ್ಸಿ (12th ಫೇಲ್)
ಅತ್ಯುತ್ತಮ ನಟಿ: ಆಲಿಯಾ ಭಟ್ (ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ)
ಅತ್ಯುತ್ತಮ ನಟಿ (ಕ್ರಿಟಿಕ್ಸ್): ರಾಣಿ ಮುಖರ್ಜಿ (ಮಿಸಸ್ ಚಟರ್ಜಿ Vs ನಾರ್ವೇ)
ಅತ್ಯುತ್ತಮ ಪೋಷಕ ನಟ: ವಿಕ್ಕಿ ಕೌಶಲ್ (ಡಂಕಿ)
ಅತ್ಯುತ್ತಮ ಪೋಷಕ ನಟಿ: ಶಬಾನ್ ಆಜ್ಮಿ (ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ)
ಅತ್ಯುತ್ತಮ ಸಾಹಿತ್ಯ: ಅಮಿತಾಭ್ ಭಟ್ಟಾಚಾರ್ಯ (ತೆರೆ ವಾಸ್ತೆ-ಜರ ಹಟ್ಕೆ ಜರ ಬಚ್ಕೆ)
ಅತ್ಯತ್ತಮ ಕಥೆ: ಅಮಿತ್ ರೈ (ಒಎಂಜಿ 2)
ಕಾಡಾನೆಗಳ ಹಾವಳಿಯಿಂದಾಗಿ ಕಾಡಂಚಿನ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ…
ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್…
ದಾ.ರಾ. ಮಹೇಶ್ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…
ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ…
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…