Mysore
27
scattered clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

900 ಕೋಟಿ ರೂ. ದಾಟಿದ ಕಿಂಗ್ ಖಾನ್ ನಟನೆಯ ‘ಜವಾನ್’

ಮುಂಬೈ: ಬಾಲಿವುಡ್ ಕಿಂಗ್ ಖಾನ್ ಶಾರುಖ್ ಖಾನ್ ಅವರು ಬಾಕ್ಸ್ ಆಫೀಸ್ ಕಿಂಗ್ ಆಗಿ ಮತ್ತೊಮ್ಮೆ ಮೋಡಿ ಮಾಡುತ್ತಿದ್ದು, ಜವಾನ್ ಚಿತ್ರ ಬಿಡುಗಡೆಯಾಗಿ 13 ದಿನಕ್ಕೆ ವಿಶ್ವದಾದ್ಯಂತ 907.54 ಕೋಟಿ ರೂಪಾಯಿ ಗಳಿಸಿದೆ ಎಂದು ಚಿತ್ರದ ನಿರ್ಮಾಪಕರು ಬುಧವಾರ ತಿಳಿಸಿದ್ದಾರೆ.

ಪ್ಯಾನ್-ಇಂಡಿಯಾ ಚಿತ್ರ ಜವಾನ್ ಬಿಡುಗಡೆಯಾದ 13 ದಿನಗಳಲ್ಲಿ ವಿಶ್ವದಾದ್ಯಂತ ರೂ 907.54 ಕೋಟಿ ರೂಪಾಯಿ ಗಳಿಸಿದೆ ಎಂದು ಪ್ರೊಡಕ್ಷನ್ ಹೌಸ್ ರೆಡ್ ಚಿಲ್ಲೀಸ್ ಎಂಟರ್‌ಟೈನ್‌ಮೆಂಟ್ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದೆ.

ತಮಿಳಿನ ಖ್ಯಾತ ನಿರ್ದೇಶಕ ಅಟ್ಲೀ ನಿರ್ದೇಶನದ ಪ್ಯಾನ್-ಇಂಡಿಯಾ ಚಿತ್ರ ಜವಾನ್ ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಸೆಪ್ಟೆಂಬರ್ 7 ರಂದು ವಿಶ್ವದಾದ್ಯಂತ ಬಿಡುಗಡೆಯಾಗಿದೆ.

ಚಿತ್ರದಲ್ಲಿ ನಯನತಾರಾ, ವಿಜಯ್ ಸೇತುಪತಿ ಹಾಗೂ ದೀಪಿಕಾ ಪಡುಕೋಣೆ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ