ಚೆನ್ನೈ: ಸೂಪರ್‌ಸ್ಟಾರ್ ರಜನಿಕಾಂತ್ ಅವರ ಆಕ್ಷನ್ ಥ್ರಿಲ್ಲರ್ ಚಿತ್ರ ‘ಜೈಲರ್’ ಕ್ರೇಜ್ ಯಾವ ಮಟ್ಟಿಗೆ ಇದೆ ಎಂದರೆ ಜಪಾನಿನ ದಂಪತಿ ಚಿತ್ರ ವೀಕ್ಷಣೆಗಾಗಿ ಚೆನ್ನೈಗೆ ಆಗಮಿಸಿದ್ದಾರೆ. ಯಸುದಾ ಎಂದು ಗುರುತಿಸಲಾದ ವ್ಯಕ್ತಿ ರಜನಿಕಾಂತ್ ಅವರ ಅಭಿಮಾನಿ ಎನ್ನಲಾಗಿದ್ದು, ಅವರು ತಮ್ಮ ಅಭಿಮಾನಿಗಳೊಂದಿಗೆ ರಜನಿ ಚಿತ್ರ ವೀಕ್ಷಿಸಲು ತಮ್ಮ ಪತ್ನಿಯೊಂದಿಗೆ ಚೆನ್ನೈಗೆ ಬಂದಿದ್ದಾರೆ.
ದಂಪತಿಯ ಹಲವಾರು ಚಿತ್ರಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಅದರಲ್ಲಿ ಅವರು ರಜನಿಕಾಂತ್ ಚಿತ್ರವಿರುವ ಬಿಳಿ ಟೀ ಶರ್ಟ್‌ಗಳನ್ನು ಧರಿಸಿರುವುದನ್ನು ಕಾಣಬಹುದು. ಈ ಕುರಿತು ಎಎನ್ ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಯಸುದಾ, ‘ಜೈಲರ್’ ಚಿತ್ರದ ಮೊದಲ ದಿನದ ಮೊದಲ ಪ್ರದರ್ಶನ ವೀಕ್ಷಿಸಲು ಜಪಾನ್‌ನಿಂದ ಚೆನ್ನೈಗೆ ಬಂದಿದ್ದೇವೆ. ನಮ್ಮ ತಲೈವಾ ಚಿತ್ರ ನೋಡಿ ಇಷ್ಟಪಟ್ಟಿರುವುದಾಗಿ ತಿಳಿಸಿದರು. ಅವರು ರಜನಿಕಾಂತ್ ಚಿತ್ರದ ಸಂಭಾಷಣೆಯನ್ನು ತಮಿಳು ಭಾಷೆಯಲ್ಲಿಯೇ ಹೇಳುತ್ತಿದ್ದರು.
ಇನ್ನೂ ಜೈಲರ್ ಚಿತ್ರಮಂದಿರಗಳಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದ್ದು, ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ಆಚರಿಸುತ್ತಿರುವುದು ಕಂಡುಬಂದಿತ್ತು. ‘ಕಬಾಲಿ’ ನಟನ ಪೋಸ್ಟರ್‌ಗೆ ಹಲವು ಅಭಿಮಾನಿಗಳು ಹಾಲಿನ ಅಭಿಷೇಕ ಮಾಡಿದ್ದಾರೆ.
ಜಾಕಿ ಶ್ರಾಫ್ 36 ವರ್ಷಗಳ ನಂತರ ರಜನಿಕಾಂತ್ ಅವರೊಂದಿಗೆ ತೆರೆ ಹಂಚಿಕೊಂಡಿದ್ದಾರೆ. ‘ಜೈಲರ್’ ಆಕ್ಷನ್-ಪ್ಯಾಕ್ಡ್ ಎಂಟರ್ಟೈನರ್ ಎಂದು ಹೇಳಲಾಗಿದೆ ಮತ್ತು ಪ್ರಿಯಾಂಕಾ ಮೋಹನ್, ಡಾ. ಶಿವರಾಜ್ ಕುಮಾರ್, ತಮನ್ನಾ ಭಾಟಿಯಾ, ರಮ್ಯಾ ಕೃಷ್ಣನ್ ಮತ್ತಿತರ ತಾರಾಬಳಗವನ್ನು ಹೊಂದಿದೆ. ಮಲಯಾಳಂ ನಟ ಮೋಹನ್ ಲಾಲ್ ಕೂಡಾ ಅತಿಥಿ ಪಾತ್ರದಲ್ಲಿ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…