ಬೆಂಗಳೂರು: ಬಹುಭಾಷಾ ನಟ ಪ್ರಕಾಶ್ ರಾಜ್ ಅವರಿಗೆ ಸಂಘಪರಿವಾರದ ಕಾರ್ಯಕರ್ತನೋರ್ವ ಜೀವ ಬೆದರಿಕೆ ಹಾಕಿರುವ ವೀಡಿಯೊ ಒಂದು ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಹರಿದಾಡುತ್ತಿದೆ.
ಇತ್ತೀಚೆಗೆ ಧರ್ಮಸ್ಥಳದ ಸೌಜನ್ಯ ಪ್ರಕರಣದ ಬಗ್ಗೆ ಶಿವಮೊಗ್ಗದಲ್ಲಿ ನಡೆದ ಪತ್ರಿಕಾ ಸಂವಾದದಲ್ಲಿ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪ್ರಕಾಶ್ ರಾಜ್ , ʼʼಗುಪ್ತಚರ ಇಲಾಖೆಗೆ ಅನುಮಾನಗಳಿದ್ದರೆ ಧರ್ಮಾಧಿಕಾರಿಗಳನ್ನೂ ಮಂಪರು ಪರೀಕ್ಷೆಗೆ ಒಳಪಡಿಸುವುದರಲ್ಲಿ ತಪ್ಪೇನಿದೆʼʼ ಎಂದು ಪ್ರಶ್ನೆ ಮಾಡಿದ್ದರು. ಇದಕ್ಕೆ ವಿರೋಧ ವ್ಯಕ್ತಪಡಿಸಿ, ಸಂಘಪರಿವಾರದ ಕಾರ್ಯಕರ್ತ ಸಂತೋಷ್ ಕಾರ್ತಾಳ್ ಎಂಬಾತ, ಧರ್ಮಾಧಿಕಾರಿಗಳ ಕ್ಷಮೆ ಕೇಳದಿದ್ದರೆ 24 ಗಂಟೆಯೊಳಗಡೆ ನಿನ್ನ ಮನೆ ಮುಂದೆ ನಿನ್ನ ಹೆಣ ಬಿದ್ದಿರುತ್ತದೆʼʼ ಎಂದು ಕೊಲೆ ಬೆದರಿಕೆ ಹಾಕಿದ್ದಾನೆ. ಈ ವೀಡಿಯೊವನ್ನು ಆತ ತನ್ನ ಫೇಸ್ ಬುಕ್ ನಲ್ಲಿ ಹರಿಬಿಟ್ಟಿದ್ದಾನೆ.
ಈ ಬಗ್ಗೆ ಪ್ರಕಾಶ್ ರಾಜ್ ತಮ್ಮ ಟ್ವಟರ್ ನಲ್ಲಿ, ʼʼನೊಡ್ರಪಾ.. ಉತ್ತರ ಕುಮಾರರು .. ಕೊಲೆ ಬೆದರಿಕೆ ಹಾಕ್ತಾ ಇದ್ದಾರೆ .. ಏನ್ ಮಾಡಾಣ ವಸಿ ಯೋಳಿʼʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಗೃಹ ಸಚಿವ ಡಾ.ಜಿ ಪರಮೇಶ್ವರ್ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಟ್ಯಾಗ್ ಮಾಡಿದ್ದಾರೆ.
ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…
ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…
ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…
ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…
ಮೈಸೂರು: ನಟ ದರ್ಶನ್ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…