ಒಂದು ಸಿನಿಮಾ ಎಲ್ಲರಿಗೂ ಇಷ್ಟವಾಗಲೇಬೇಕೆಂದೇನೂ ಇಲ್ಲ. ಬಾಕ್ಸ್ ಆಫೀಸ್ನಲ್ಲಿ ಸಾವಿರ ಕೋಟಿ ರೂಪಾಯಿ ಬಿಸ್ನೆಸ್ ಮಾಡಿದ ಚಿತ್ರಗಳು ಕೆಲವರಿಗೆ ಇಷ್ಟ ಆಗದೇ ಇದ್ದ ಉದಾಹರಣೆ ಸಾಕಷ್ಟಿದೆ. ಸಿನಿಮಾ ಇಷ್ಟವಾಗಿಲ್ಲ ಎಂಬುದನ್ನು ಓಪನ್ ಆಗಿ ಹೇಳಿಕೊಂಡಾಗ ಟೀಕೆ ಎದುರಿಸಬೇಕಾಗುವ ಪರಿಸ್ಥಿತಿ ಎದುರಾಗಬಹುದು.
ಆಗಸ್ಟ್ 25ರಂದು ರಾಜ್ ಬಿ. ಶೆಟ್ಟಿ ನಟನೆಯ ‘ಟೋಬಿ’ ಸಿನಿಮಾ ರಿಲೀಸ್ ಆಗಿದೆ. ಈ ಚಿತ್ರವನ್ನು ಜನರು ಇಷ್ಟಪಡುತ್ತಿದ್ದಾರೆ. ಯುವತಿಯೊಬ್ಬರು ಸಿನಿಮಾ ಇಷ್ಟವಾಗಿಲ್ಲ ಎಂಬುದನ್ನು ಹೇಳಿಕೊಂಡಿದ್ದಾರೆ. ಇದಕ್ಕೆ ಕೆಲವರು ಅವಾಚ್ಯ ಶಬ್ದಗಳಿಂದ ಯುವತಿಯನ್ನು ನಿಂದಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ರಾಜ್ ಬಿ. ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ.
https://www.facebook.com/watch/?v=868741608153627
ಟೋಬಿ ಚೆನ್ನಾಗಿಲ್ಲ’ ಎಂದು ಯುವತಿಯೊಬ್ಬರು ಥಿಯೇಟರ್ ಎದುರು ಹೇಳಿದ್ದಾರೆ. ಇದನ್ನು ಕೇಳಿಸಿಕೊಂಡ ಇಬ್ಬರು ಥಿಯೇಟರ್ ಆವರಣದಲ್ಲೇ ಯುವತಿಗೆ ಅವಾಜ್ ಹಾಕಿದ್ದಾರೆ. ಅಶ್ಲೀಲ ಶಬ್ದಗಳಿಂದ ಬೈದಿದ್ದಾರೆ. ಈ ವಿಡಿಯೋ ಸಾಕಷ್ಟು ವೈರಲ್ ಆಗಿದೆ. ಸೋಶಿಯಲ್ ಮೀಡಿಯಾ ಪೇಜ್ಗಳಲ್ಲಿ ಪೋಸ್ಟ್ ಮಾಡಿ ರಾಜ್ ಬಿ ಶೆಟ್ಟಿ ಅವರನ್ನು ಪ್ರಶ್ನೆ ಮಾಡಲಾಯಿತು. ಇದಕ್ಕೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಅವರು ನಮ್ಮ ಸಿನಿಮಾ ಟೀಂನವರಲ್ಲ. ಆದರೂ ನಾನು ಕ್ಷಮೆ ಕೇಳುತ್ತೇನೆ’ ಎಂದಿದ್ದಾರೆ.
‘ಸಿನಿಮಾ ಕೂಡ ವಿಮರ್ಶೆಗೆ ಒಳಪಡುವ ಮಾಧ್ಯಮ. ನಮ್ಮ ಸಿನಿಮಾನ ದುಡ್ಡುಕೊಟ್ಟು ನೋಡುವ ಪ್ರೇಕ್ಷಕರು ತಮಗೆ ಅನಿಸಿದ್ದನ್ನು ಹೇಳುವ ಹಕ್ಕು ಹೊಂದಿದ್ದಾರೆ. ಅದನ್ನು ಒಪ್ಪಲು ಅಥವಾ ಒಪ್ಪದಿರಲು ನಾವು ಸ್ವತಂತ್ರರು. ಆದರೆ, ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ಜನರಿಗೆ ಕಿರುಕುಳ ನೀಡಲು ಪ್ರಯತ್ನಿಸಬಾರದು. ಈ ವಿಡಿಯೋದಲ್ಲಿರುವ ವ್ಯಕ್ತಿಗಳಿಗೂ ನಮ್ಮ ಚಿತ್ರಕ್ಕೂ ಸಂಬಂಧ ಇಲ್ಲ. ಆದರೆ ಯುವತಿ ಎದುರಿಸಿದ ಕಿರುಕುಳಕ್ಕಾಗಿ ನಾನು ಕ್ಷಮೆ ಕೇಳುತ್ತೇನೆ. ನಮ್ಮನ್ನು ಕ್ಷಮಿಸಿ’ ಎಂದು ರಾಜ್ ಬಿ ಶೆಟ್ಟಿ ಬರೆದುಕೊಂಡಿದ್ದಾರೆ.
ಗನ ಪಾತ್ರದಲ್ಲಿ ಅವರು ಗಮನ ಸೆಳೆದಿದ್ದಾರೆ. ಚೈತ್ರಾ ಆಚಾರ್ ಪಾತ್ರ ಕೂಡ ಹೈಲೈಟ್ ಆಗಿದೆ. ಈ ಚಿತ್ರಕ್ಕೆ ಭರ್ಜರಿ ಪ್ರಚಾರ ನೀಡಲಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಸಿನಿಮಾ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಎಲ್ಲರೂ ಹಂಚಿಕೊಳ್ಳುತ್ತಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…