ಚಿತ್ರ ಮಂಜರಿ

ಟೋಬಿ ಚಿತ್ರ ಚೆನ್ನಾಗಿಲ್ಲ ಎಂದ ಯುವತಿಗೆ ಥಿಯೇಟರ್ ಎದುರೇ ಅವಾಚ್ಯ ಶಬ್ದಗಳಿಂದ ನಿಂದನೆ: ಪ್ರತಿಕ್ರಿಯಿಸಿದ ರಾಜ್ ಶೆಟ್ಟಿ

ಒಂದು ಸಿನಿಮಾ ಎಲ್ಲರಿಗೂ ಇಷ್ಟವಾಗಲೇಬೇಕೆಂದೇನೂ ಇಲ್ಲ. ಬಾಕ್ಸ್ ಆಫೀಸ್​ನಲ್ಲಿ ಸಾವಿರ ಕೋಟಿ ರೂಪಾಯಿ ಬಿಸ್ನೆಸ್ ಮಾಡಿದ ಚಿತ್ರಗಳು ಕೆಲವರಿಗೆ ಇಷ್ಟ ಆಗದೇ ಇದ್ದ ಉದಾಹರಣೆ ಸಾಕಷ್ಟಿದೆ. ಸಿನಿಮಾ ಇಷ್ಟವಾಗಿಲ್ಲ ಎಂಬುದನ್ನು ಓಪನ್ ಆಗಿ ಹೇಳಿಕೊಂಡಾಗ ಟೀಕೆ ಎದುರಿಸಬೇಕಾಗುವ ಪರಿಸ್ಥಿತಿ ಎದುರಾಗಬಹುದು.

ಆಗಸ್ಟ್ 25ರಂದು ರಾಜ್ ಬಿ. ಶೆಟ್ಟಿ ನಟನೆಯ ‘ಟೋಬಿ’ ಸಿನಿಮಾ ರಿಲೀಸ್ ಆಗಿದೆ. ಈ ಚಿತ್ರವನ್ನು ಜನರು ಇಷ್ಟಪಡುತ್ತಿದ್ದಾರೆ. ಯುವತಿಯೊಬ್ಬರು ಸಿನಿಮಾ ಇಷ್ಟವಾಗಿಲ್ಲ ಎಂಬುದನ್ನು ಹೇಳಿಕೊಂಡಿದ್ದಾರೆ. ಇದಕ್ಕೆ ಕೆಲವರು ಅವಾಚ್ಯ ಶಬ್ದಗಳಿಂದ ಯುವತಿಯನ್ನು ನಿಂದಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ರಾಜ್ ಬಿ. ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ.

https://www.facebook.com/watch/?v=868741608153627

ಟೋಬಿ ಚೆನ್ನಾಗಿಲ್ಲ’ ಎಂದು ಯುವತಿಯೊಬ್ಬರು ಥಿಯೇಟರ್ ಎದುರು ಹೇಳಿದ್ದಾರೆ. ಇದನ್ನು ಕೇಳಿಸಿಕೊಂಡ ಇಬ್ಬರು ಥಿಯೇಟರ್​​ ಆವರಣದಲ್ಲೇ ಯುವತಿಗೆ ಅವಾಜ್ ಹಾಕಿದ್ದಾರೆ. ಅಶ್ಲೀಲ ಶಬ್ದಗಳಿಂದ ಬೈದಿದ್ದಾರೆ. ಈ ವಿಡಿಯೋ ಸಾಕಷ್ಟು ವೈರಲ್ ಆಗಿದೆ. ಸೋಶಿಯಲ್ ಮೀಡಿಯಾ ಪೇಜ್​ಗಳಲ್ಲಿ ಪೋಸ್ಟ್ ಮಾಡಿ ರಾಜ್ ಬಿ ಶೆಟ್ಟಿ ಅವರನ್ನು ಪ್ರಶ್ನೆ ಮಾಡಲಾಯಿತು. ಇದಕ್ಕೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಅವರು ನಮ್ಮ ಸಿನಿಮಾ ಟೀಂನವರಲ್ಲ. ಆದರೂ ನಾನು ಕ್ಷಮೆ ಕೇಳುತ್ತೇನೆ’ ಎಂದಿದ್ದಾರೆ.

‘ಸಿನಿಮಾ ಕೂಡ ವಿಮರ್ಶೆಗೆ ಒಳಪಡುವ ಮಾಧ್ಯಮ. ನಮ್ಮ ಸಿನಿಮಾನ ದುಡ್ಡುಕೊಟ್ಟು ನೋಡುವ ಪ್ರೇಕ್ಷಕರು ತಮಗೆ ಅನಿಸಿದ್ದನ್ನು ಹೇಳುವ ಹಕ್ಕು ಹೊಂದಿದ್ದಾರೆ. ಅದನ್ನು ಒಪ್ಪಲು ಅಥವಾ ಒಪ್ಪದಿರಲು ನಾವು ಸ್ವತಂತ್ರರು. ಆದರೆ, ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ಜನರಿಗೆ ಕಿರುಕುಳ ನೀಡಲು ಪ್ರಯತ್ನಿಸಬಾರದು. ಈ ವಿಡಿಯೋದಲ್ಲಿರುವ ವ್ಯಕ್ತಿಗಳಿಗೂ ನಮ್ಮ ಚಿತ್ರಕ್ಕೂ ಸಂಬಂಧ ಇಲ್ಲ. ಆದರೆ ಯುವತಿ ಎದುರಿಸಿದ ಕಿರುಕುಳಕ್ಕಾಗಿ ನಾನು ಕ್ಷಮೆ ಕೇಳುತ್ತೇನೆ. ನಮ್ಮನ್ನು ಕ್ಷಮಿಸಿ’ ಎಂದು ರಾಜ್ ಬಿ ಶೆಟ್ಟಿ ಬರೆದುಕೊಂಡಿದ್ದಾರೆ.

ಗನ ಪಾತ್ರದಲ್ಲಿ ಅವರು ಗಮನ ಸೆಳೆದಿದ್ದಾರೆ. ಚೈತ್ರಾ ಆಚಾರ್ ಪಾತ್ರ ಕೂಡ ಹೈಲೈಟ್ ಆಗಿದೆ. ಈ ಚಿತ್ರಕ್ಕೆ ಭರ್ಜರಿ ಪ್ರಚಾರ ನೀಡಲಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಸಿನಿಮಾ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಎಲ್ಲರೂ ಹಂಚಿಕೊಳ್ಳುತ್ತಿದ್ದಾರೆ.

andolanait

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

11 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

12 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

13 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

15 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

15 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

16 hours ago