Mysore
23
few clouds

Social Media

ಮಂಗಳವಾರ, 18 ಮಾರ್ಚ್ 2025
Light
Dark

ಚಿತ್ರೀಕರಣ ಮುಗಿಸಿದ ಯುವ ಚಿತ್ರತಂಡ

ದೊಡ್ಮನೆ ಕುಡಿ ಯುವ ರಾಜ್‌ಕುಮಾರ್‌ ಅಭಿನಯದ ಮೊದಲ ಚಿತ್ರ “ಯುವ” ಎಲ್ಲಾ ಅಂದುಕೊಂಡಂತೆ ನಡೆದಿದ್ದರೆ ಇದೇ ವರ್ಷಾಂತ್ಯಕ್ಕೆ ಪ್ರೇಕ್ಷಕರ ಮುಂದೆ ಬರಬೇಕಿತ್ತು. ಆದರೆ ಚಿತ್ರೀಕರಣದಲ್ಲಿ ವಿಳಂಬವಾದ ಕಾರಣ ಚಿತ್ರ ಮುಂದಿನ ವರ್ಷದ ಮಾರ್ಚ್‌ಗೆ ಮುಂದೂಡಲ್ಪಟ್ಟಿತ್ತು.

ಹೌದು, ಇದೇ ಡಿಸೆಂಬರ್‌ 22 ಕ್ಕೆ ಯುವ ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಗೆಯಾಗಬೇಕಿತ್ತು. ಚಿಕ್ಕಪ್ಪ ಪುನೀತ್‌ ರಾಜ್‌ಕುಮಾರ್‌ ಹುಟ್ಟಿದ ತಿಂಗಳು ಯುವ ಬೆಳ್ಳಿತೆರೆಗೆ ಅಪ್ಪಳಿಸಲಿದ್ದು ಚಿತ್ರತಂಡ ಇದೀಗ ಚಿತ್ರೀಕರಣವನ್ನು ಸಂಪೂರ್ಣವಾಗಿ ಮುಕ್ತಾಯಗೊಳಿಸಿದ್ದು ಕುಂಬಳಕಾಯಿ ಹೊಡೆದಿದೆ. ಚಿತ್ರದ ಚಿತ್ರೀಕರಣ ಮುಕ್ತಾಯಗೊಂಡಿರುವ ಕುರಿತ ಫೋಟೊವನ್ನು ಚಿತ್ರತಂಡ ಹಂಚಿಕೊಂಡಿದ್ದು, ಈ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಹೊಂಬಾಳೆ ಫಿಲ್ಮ್ಸ್‌ ಬ್ಯಾನರ್‌ ಅಡಿಯಲ್ಲಿ ಸಂತೋಷ್‌ ಆನಂದ್ ರಾಮ್‌ ನಿರ್ದೇಶನದಲ್ಲಿ ಮೂಡಿಬಂದಿರುವ ಯುವ ಸಿನಿಮಾಕ್ಕೆ ನಿರ್ಮಾಪಕ ವಿಜಯ್‌ ಕಿರಗಂದುರ್ ಬಂಡವಾಳ ಹೂಡಿದ್ದಾರೆ. ಯುವ ಮೂಲಕ ಅಣ್ಣಾವ್ರ ಮೊಮ್ಮಗ ಯುವರಾಜ್‌ ಕುಮಾರ್‌ ಮೊಟ್ಟ ಮೊದಲಬಾರಿಗೆ ನಾಯಕ ನಟನಾಗಿ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಇನ್ನೂ ಯುವಗೆ ಜೊತೆಯಾಗಿ ಕಾಂತಾರ ಬೆಡಗಿ, ಮೂಗುತ್ತಿ ಸುಂದರಿ ಸಪ್ತಮಿ ಗೌಡ ಹೆಜ್ಜೆ ಹಾಕಿದ್ದಾರೆ.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ