ದೊಡ್ಮನೆ ಕುಡಿ ಯುವ ರಾಜ್‌ಕುಮಾರ್ ಅಭಿನಯದ ಮೊದಲ ಚಿತ್ರ “ಯುವ” ಎಲ್ಲಾ ಅಂದುಕೊಂಡಂತೆ ನಡೆದಿದ್ದರೆ ಇದೇ ವರ್ಷಾಂತ್ಯಕ್ಕೆ ಪ್ರೇಕ್ಷಕರ ಮುಂದೆ ಬರಬೇಕಿತ್ತು. ಆದರೆ ಚಿತ್ರೀಕರಣದಲ್ಲಿ ವಿಳಂಬವಾದ ಕಾರಣ ಚಿತ್ರ ಮುಂದಿನ ವರ್ಷದ ಮಾರ್ಚ್‌ಗೆ ಮುಂದೂಡಲ್ಪಟ್ಟಿತ್ತು.
ಹೌದು, ಇದೇ ಡಿಸೆಂಬರ್ 22 ಕ್ಕೆ ಯುವ ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಗೆಯಾಗಬೇಕಿತ್ತು. ಚಿಕ್ಕಪ್ಪ ಪುನೀತ್ ರಾಜ್‌ಕುಮಾರ್ ಹುಟ್ಟಿದ ತಿಂಗಳು ಯುವ ಬೆಳ್ಳಿತೆರೆಗೆ ಅಪ್ಪಳಿಸಲಿದ್ದು ಚಿತ್ರತಂಡ ಇದೀಗ ಚಿತ್ರೀಕರಣವನ್ನು ಸಂಪೂರ್ಣವಾಗಿ ಮುಕ್ತಾಯಗೊಳಿಸಿದ್ದು ಕುಂಬಳಕಾಯಿ ಹೊಡೆದಿದೆ. ಚಿತ್ರದ ಚಿತ್ರೀಕರಣ ಮುಕ್ತಾಯಗೊಂಡಿರುವ ಕುರಿತ ಫೋಟೊವನ್ನು ಚಿತ್ರತಂಡ ಹಂಚಿಕೊಂಡಿದ್ದು, ಈ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಸಂತೋಷ್ ಆನಂದ್ ರಾಮ್ ನಿರ್ದೇಶನದಲ್ಲಿ ಮೂಡಿಬಂದಿರುವ ಯುವ ಸಿನಿಮಾಕ್ಕೆ ನಿರ್ಮಾಪಕ ವಿಜಯ್ ಕಿರಗಂದುರ್ ಬಂಡವಾಳ ಹೂಡಿದ್ದಾರೆ. ಯುವ ಮೂಲಕ ಅಣ್ಣಾವ್ರ ಮೊಮ್ಮಗ ಯುವರಾಜ್ ಕುಮಾರ್ ಮೊಟ್ಟ ಮೊದಲಬಾರಿಗೆ ನಾಯಕ ನಟನಾಗಿ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಇನ್ನೂ ಯುವಗೆ ಜೊತೆಯಾಗಿ ಕಾಂತಾರ ಬೆಡಗಿ, ಮೂಗುತ್ತಿ ಸುಂದರಿ ಸಪ್ತಮಿ ಗೌಡ ಹೆಜ್ಜೆ ಹಾಕಿದ್ದಾರೆ.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…