ಚಿತ್ರ ಮಂಜರಿ

ಹಿಂದೂ ಸಂಪ್ರದಾಯದಂತೆ ಪೂಜೆ ಸಲ್ಲಿಸಿದ ಅಮೀರ್‌ ಖಾನ್‌

ನಟ ಆಮಿರ್​ ಖಾನ್ ಅವರು ಬಾಲಿವುಡ್​ನಲ್ಲಿ ಮಿಸ್ಟರ್​ ಪರ್ಫೆಕ್ಟ್​ ಎಂದೇ ಗುರುತಿಸಿಕೊಂಡಿರುವವರು. ಇತ್ತೀಚೆಗೆ ಬಿಡುಗಡೆಯಾದ ‘ಲಾಲ್​ ಸಿಂಗ್​ ಛಡ್ಡಾ’ ಚಿತ್ರ ಮಾತ್ರ ಹೀನಾಯ ಸೋಲು ಕಂಡಿತು. ಈ ಚಿತ್ರದ ಸೋಲಿಗೆ ನಟ ಆಮಿರ್​ ಖಾನ್​ ಅವರು ಸಾಮಾಜಿಕವಾಗಿ ನೀಡಿದ ಕೆಲ ವಿವಾದಾತ್ಮಕ ಹೇಳಿಕೆಗಳು ಕಾರಣ ಎನ್ನಲಾಗಿತ್ತು. ಸಾಮಾಜಿಕ ಜಾಲತಾಣದಲ್ಲಿ ಪದೇ ಪದೇ ಹಿಂದೂ ವಿರೋಧಿ ಎಂದು ಕೂಡ ಆಮಿರ್​ ಖಾನ್​ ಟೀಕಿಗೆ ಒಳಗಾಗಿದ್ದು ಇದೆ. ಆದರೆ ಸದ್ಯ ಹಿಂದೂ ಸಂಪ್ರದಾಯದಂತೆ ಆಮಿರ್​ ಖಾನ್ ಮತ್ತು ಮಾಜಿ ಪತ್ನಿ ಕಿರಣ್ ರಾವ್​ ಪೂಜೆ ಮಾಡಿರುವ ಫೋಟೋಗಳು ವೈರಲ್​ ಆಗಿವೆ.

ನಟ ಆಮಿರ್​ ಖಾನ್ ಇತ್ತೀಚೆಗೆ ತಮ್ಮ ಪ್ರೊಡಕ್ಷನ್​ ಸಂಸ್ಥೆಯಲ್ಲಿ ಹಿಂದೂ ಸಂಪ್ರದಾಯದಂತೆ ಪೂಜೆ ಮಾಡಿದ್ದಾರೆ. ಆಮಿರ್​ ಖಾನ್​ ಪೂಜೆ ಮಾಡುತ್ತಿರುವ ಫೋಟೋಗಳನ್ನು ‘ಲಾಲ್ ಸಿಂಗ್​ ಛಡ್ಡಾ’ ನಿರ್ದೇಶಕ ಅದ್ವೈತ್ ಚಂದನ್ ಅವರು ತಮ್ಮ ಇನ್ಸ್ಟಾಗ್ರಾಮ್​ನಲ್ಲಿ ಗುರುವಾರ (ಡಿ,7) ಹಂಚಿಕೊಂಡಿದ್ದಾರೆ. ಆಮಿರ್​ ಖಾನ್ ಅವರು ಹಣೆಗೆ ತಿಲಕ, ತಲೆಗೆ ಬಿಳಿ ಬಣ್ಣದ ಟೋಪಿ ಧರಿಸಿದ್ದು, ಕಲಶಕ್ಕೆ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಮಾಜಿ ಪತ್ನಿ ಕಿರಣ್​ ರಾವ್​ ಅವರು ಕೂಡ ಭಾಗವಹಿಸಿದ್ದರು.

ಆಮಿರ್​ ಖಾನ್​ ಅವರು ತಮ್ಮ ಚಿತ್ರ ಮತ್ತು ಹೇಳಿಕೆಗಳಿಂದ ಟೀಕೆಗೆ ಒಳಗಾಗುತ್ತಾರೆ. ಆದರೆ ಹಿಂದೂ ಸಂಪ್ರದಾಯದಂತೆ ಪೂಜೆ ಮಾಡಿರುವುದು ಸದ್ಯ ಎಲ್ಲರ ಅಚ್ಚರಿಗೆ ಕಾರಣವಾಗಿದೆ. ಈ ಕುರಿತಾಗಿ ಸೋಶಿಯಲ್​ ಮೀಡಿಯಾದಲ್ಲಿ ನೆಟ್ಟಿಗರು ಬಗೆಬಗೆಯ ಕಮೆಂಟ್​ ಮಾಡಿದ್ದಾರೆ.

andolana

Recent Posts

ಮದ್ಯಪ್ರಿಯರಿಗೆ ಶಾಕ್‌ ಕೊಟ್ಟ ಸರ್ಕಾರ: ಮೇ.1ರಿಂದ ಮದ್ಯದ ಬೆಲೆ ಏರಿಕೆ

ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…

50 mins ago

ಹೆಚ್ಚಿದ ಬಿಸಿಲಿನ ತಾಪಮಾನ: ಹೀಟ್ ವೇವ್, ಹೀಟ್ ಸ್ಟ್ರೋಕ್ ಅಪಾಯ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…

51 mins ago

ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಟ ಚೇತನ್‌ ಅಹಿಂಸಾ

ಬೆಂಗಳೂರು: ನಟ ರಾಜ್‌ ಕುಮಾರ್‌ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್‌ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್‌ಕುಮಾರ್‌…

53 mins ago

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ: ಸಚಿವ ವೆಂಕಟೇಶ್‌

ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್.‌ ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…

1 hour ago

ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…

2 hours ago

ಭಾರತವನ್ನು ನರಕಕೂಪ ಎಂದು ಹೀಯಾಳಿಸಿದ ಡೊನಾಲ್ಡ್ ಟ್ರಂಪ್‌: ವಿದೇಶಾಂಗ ಇಲಾಖೆ ಕಿಡಿ

ನವದೆಹಲಿ: ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಭಾರತವನ್ನು ನರಕಕೂಪ ಎಂದು ಉಲ್ಲೇಖಿಸಿರುವ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ. ಈ…

3 hours ago