ನಟ ಆಮಿರ್ ಖಾನ್ ಅವರು ಬಾಲಿವುಡ್ನಲ್ಲಿ ಮಿಸ್ಟರ್ ಪರ್ಫೆಕ್ಟ್ ಎಂದೇ ಗುರುತಿಸಿಕೊಂಡಿರುವವರು. ಇತ್ತೀಚೆಗೆ ಬಿಡುಗಡೆಯಾದ ‘ಲಾಲ್ ಸಿಂಗ್ ಛಡ್ಡಾ’ ಚಿತ್ರ ಮಾತ್ರ ಹೀನಾಯ ಸೋಲು ಕಂಡಿತು. ಈ ಚಿತ್ರದ ಸೋಲಿಗೆ ನಟ ಆಮಿರ್ ಖಾನ್ ಅವರು ಸಾಮಾಜಿಕವಾಗಿ ನೀಡಿದ ಕೆಲ ವಿವಾದಾತ್ಮಕ ಹೇಳಿಕೆಗಳು ಕಾರಣ ಎನ್ನಲಾಗಿತ್ತು. ಸಾಮಾಜಿಕ ಜಾಲತಾಣದಲ್ಲಿ ಪದೇ ಪದೇ ಹಿಂದೂ ವಿರೋಧಿ ಎಂದು ಕೂಡ ಆಮಿರ್ ಖಾನ್ ಟೀಕಿಗೆ ಒಳಗಾಗಿದ್ದು ಇದೆ. ಆದರೆ ಸದ್ಯ ಹಿಂದೂ ಸಂಪ್ರದಾಯದಂತೆ ಆಮಿರ್ ಖಾನ್ ಮತ್ತು ಮಾಜಿ ಪತ್ನಿ ಕಿರಣ್ ರಾವ್ ಪೂಜೆ ಮಾಡಿರುವ ಫೋಟೋಗಳು ವೈರಲ್ ಆಗಿವೆ.
ನಟ ಆಮಿರ್ ಖಾನ್ ಇತ್ತೀಚೆಗೆ ತಮ್ಮ ಪ್ರೊಡಕ್ಷನ್ ಸಂಸ್ಥೆಯಲ್ಲಿ ಹಿಂದೂ ಸಂಪ್ರದಾಯದಂತೆ ಪೂಜೆ ಮಾಡಿದ್ದಾರೆ. ಆಮಿರ್ ಖಾನ್ ಪೂಜೆ ಮಾಡುತ್ತಿರುವ ಫೋಟೋಗಳನ್ನು ‘ಲಾಲ್ ಸಿಂಗ್ ಛಡ್ಡಾ’ ನಿರ್ದೇಶಕ ಅದ್ವೈತ್ ಚಂದನ್ ಅವರು ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಗುರುವಾರ (ಡಿ,7) ಹಂಚಿಕೊಂಡಿದ್ದಾರೆ. ಆಮಿರ್ ಖಾನ್ ಅವರು ಹಣೆಗೆ ತಿಲಕ, ತಲೆಗೆ ಬಿಳಿ ಬಣ್ಣದ ಟೋಪಿ ಧರಿಸಿದ್ದು, ಕಲಶಕ್ಕೆ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಮಾಜಿ ಪತ್ನಿ ಕಿರಣ್ ರಾವ್ ಅವರು ಕೂಡ ಭಾಗವಹಿಸಿದ್ದರು.
ಆಮಿರ್ ಖಾನ್ ಅವರು ತಮ್ಮ ಚಿತ್ರ ಮತ್ತು ಹೇಳಿಕೆಗಳಿಂದ ಟೀಕೆಗೆ ಒಳಗಾಗುತ್ತಾರೆ. ಆದರೆ ಹಿಂದೂ ಸಂಪ್ರದಾಯದಂತೆ ಪೂಜೆ ಮಾಡಿರುವುದು ಸದ್ಯ ಎಲ್ಲರ ಅಚ್ಚರಿಗೆ ಕಾರಣವಾಗಿದೆ. ಈ ಕುರಿತಾಗಿ ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರು ಬಗೆಬಗೆಯ ಕಮೆಂಟ್ ಮಾಡಿದ್ದಾರೆ.
ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…