ತಮ್ಮ ನಿಶ್ಚಿತಾರ್ಥ, ಮದುವೆ ಸುದ್ದಿಯ ಬಗ್ಗೆ ಅಭಿಷೇಕ್ ಅಂಬರೀಶ್ ಹೇಳಿದ್ದೇನು ?
ಮೈಸೂರು: ಹುಡುಗಿ ಯಾರೂ ಅಂತಾನೆ ನಂಗೆ ಗೊತ್ತಿಲ್ಲ, ಪ್ರತಿ ವರ್ಷ ನನಗೆ ಎಂಗೇಜ್ ಮೆಂಟ್ ಮಾಡಿಸ್ತೀರಾ, ನಿಮ್ಮ ಸುದ್ದಿ ನಂಬಿ ಮುಂದೆ ನನಗೆ ಯಾರು ಹೆಣ್ಣು ಕೊಡೊದಿಲ್ಲ… ಹೀಗೆಂದು ನಗೆ ಚಟಾಕಿ ಹಾರಿಸಿದವರು ನಟ ಅಭಿಷೇಕ್ ಅಂಬರೀಷ್.
ರೆಬಲ್ ಸ್ಟಾರ್ ಮತ್ತು ಸುಮಲತಾ ದಂಪತಿಯ ಏಕೈಕ ಪುತ್ರ ಅಭಿಷೇಕ್ ಮದುವೆಗೆ ಸಜ್ಜಾಗಿದ್ದಾರೆ. ಡಿಸೆಂಬರ್ 11ರಂದು ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ನಲ್ಲಿ ನಿಶ್ಚಿತಾರ್ಥವನ್ನು ಅದ್ದೂರಿಯಾಗಿ ನಡೆಸಲು ನಿರ್ಧರಿಸಲಾಗಿದೆ ಎಂಬ ಸುದ್ದಿ ಕಳೆದ ಕೆಲವು ದಿನಗಳಿಂದ ಸಾಮಾಜಿ ಮಾಧ್ಯಮಗಳಲ್ಲಿ ಹರಿದಾಡಿತ್ತು.
ಡಿಸೆಂಬರ್ 11ರಂದು ಅಭಿಷೇಕ್ ನಿಶ್ಚಿತಾರ್ಥಕ್ಕೆ ಸಕಲ ಸಿದ್ಧತೆಗಳು ಆಗಿದ್ದುಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ನಲ್ಲಿ ಅದ್ದೂರಿಯಾಗಿ ನಿಶ್ಚಿತಾರ್ಥ ನಡೆಯಲಿದೆ. ಮಾಡೆಲ್ ಲೋಕದ ಬೆಡಗಿಯನ್ನು ಅಭಿಷೇಕ್ ವರಿಸಲಿದ್ದಾರೆ ಎಂದು ಸುದ್ದಿಗಳು ಹರಿದಾಡಿದ್ದವು. .
ತಮ್ಮ ಮದುವೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅಭಿಷೇಕ್,ಕಳೆದ 15 ದಿನಗಳಿಂದ ನಾನು ಸಿನಿಮಾ ಶೂಟಿಂಗ್ ನಲ್ಲಿ ಭಾಗವಹಿಸುತ್ತಿದ್ದೀನಿ, ಇದರ ಮದ್ಯೆ ಹೇಗೆ, ನಾನು ಎಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳಲಿ ಎಂದು ಪ್ರಶ್ನಿಸುವ ಮೂಲತ ತಮ್ಮ ಮದುವೆ ಸಂಬಂಧ ಹರಡಿದ ಸುದ್ದಿ ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.
ಅಮರ್ ಸಿನಿಮಾ ನಂತರ ಅಭಿಷೇಕ್ ಅವರ ಕೈಯಲ್ಲಿ ಕೆಲವು ಸಿನಿಮಾಗಳಿವೆ. ” ಬ್ಯಾಡ್ ಮ್ಯಾನರ್ಸ್ʼ ಸಿನಿಮಾ ಕೆಲವೇ ದಿನಗಳಲ್ಲಿ ತೆರೆ ಮೇಲೆ ಬರಲಿದೆ. ಈ ನಡುವೆ ಅಭಿಷೇಕ್ ಮುಂದಿನ ವಿಧಾನ ಸಭಾ ಚುನಾವಣೆಗೂ ಸ್ಪರ್ಧಿಸುವ ಮಾತುಗಳು ಕೇಳಿ ಬರುತ್ತಿವೆ. ಆದರೆ ಸದ್ಯಕ್ಕೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಸುಮಲತಾ ಅವರೇ ಸ್ಪಷ್ಟಪಡಿಸಿದ್ದಾರೆ.
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…