ಚಿತ್ರ ಮಂಜರಿ

ಅಭಿಷೇಕ್ ಮದುವೆ ಫಿಕ್ಸ್: ಡಿಸೆಂಬರ್ 11 ರಂದು ನಿಶ್ಚಿತಾರ್ಥ

ಮೈಸೂರು: ರೆಬೆಲ್ ಸ್ಟಾರ್ ಅಂಬರೀಶ್ ಹಾಗೂ ಸಂಸದೆ ಸುಮಲತಾ ದಂಪತಿ ಪುತ್ರ, ನಟ ಅಭಿಷೇಕ್  ಅವರ ಮದುವೆ ನಿಶ್ಚಯವಾಗಿದೆ. ಅಭಿಷೇಕ್ ಅವರ ನಿಶ್ಚಿತಾರ್ಥ ಡಿಸೆಂಬರ್ 11 ರಂದು ಬೆಂಗಳೂರಿನಲ್ಲಿ ಅದ್ದೂರಿಯಾಗಿ ನಡೆಯಲಿದೆ.

ಆದರೆ ಅಭಿಷೇಕ್‌ ಮದುವೆ ಆಗಲಿರುವ ಹುಡುಗಿ ಖ್ಯಾತ ಮಾಡೆಲ್ ಆಗಿದ್ದಾರೆ. ಇಷ್ಟು ಬಿಟ್ಟರೆ ಈ ಬಗ್ಗೆ ಅಂಬರೀಷ್‌ ಕುಟುಂಬ ಯಾವುದೇ ವಿವರಗಳನ್ನು ಬಿಟ್ಟು ಕೊಟ್ಟಿಲ್ಲ. ಇದು ಆರೆಂಜ್ ಮ್ಯಾರೇಜ್ ಆಗಿದ್ದು, ನಿಶ್ಚಿತಾರ್ಥದವರೆಗೂ ಯಾವುದೇ ವಿವರಗಳನ್ನು ಬಿಟ್ಟುಕೊಡದಿರಲು ಸುಮಲತಾ ಮತ್ತು ಅಭಿಷೇಕ್‌  ನಿರ್ಧರಿಸಿದ್ದಾರೆ.

ನಿಶ್ಚಿತಾರ್ಥಕ್ಕೆ ಎಲ್ಲಾ ತಯಾರಿ ನಡೆದಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ನಲ್ಲಿ ನಿಶ್ಚಿತಾರ್ಥವನ್ನು ಅದ್ದೂರಿಯಾಗಿ ನಡೆಸಲು ನಿರ್ಧರಿಸಲಾಗಿದೆ.  ‘ಅಮರ್’ ಸಿನಿಮಾ ನಂತರ ಅಭಿಷೇಕ್ ಅವರ ಕೈಯಲ್ಲಿ ಕೆಲವು ಸಿನಿಮಾಗಳಿವೆ. “ಬ್ಯಾಡ್ ಮ್ಯಾನರ್ಸ್” ಸಿನಿಮಾ ಕೆಲವೇ ದಿನಗಳಲ್ಲಿ ತೆರೆ ಮೇಲೆ ಬರಲಿದೆ. ಈ ನಡುವೆ ಅಭಿಷೇಕ್‌ ಮುಂದಿನ ವಿಧಾನ ಸಭಾ ಚುನಾವಣೆಗೂ ಸ್ಪರ್ಧಿಸುವ ಮಾತುಗಳು ಕೇಳಿ ಬರುತ್ತಿವೆ. ಆದರೆ ಸದ್ಯಕ್ಕೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಸುಮಲತಾ ಅವರೇ ಸ್ಪಷ್ಟಪಡಿಸಿದ್ದಾರೆ.

andolanait

Recent Posts

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…

2 hours ago

ಮಡಿಕೇರಿ | ನೀರಿನಲ್ಲಿ ಮುಳುಗಿ ಯುವಕ ಸಾವು

ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…

2 hours ago

ಗಡಿ ಜಿಲ್ಲೆಯಲ್ಲೂ ತಮಿಳು ಸಿಎಂ ವಿಜಯ್‌ ಹವಾ!

ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…

2 hours ago

ಪ್ರಧಾನಿ ಸಂಚಾರ ಮಾರ್ಗದಲ್ಲಿ ಜಿಲಿಟೆನ್ ಕಡ್ಡಿ ಪತ್ತೆ ; ಕೆಲಕಾಲ ಆತಂಕ ; ಓರ್ವ ವಶಕ್ಕೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…

3 hours ago

ತಮಿಳುನಾಡು | ತಿರುಚಿರಾಪಳ್ಳಿ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…

3 hours ago

ಹುಣಸೂರು | ಭಾರೀ ಗಾಳಿ-ಮಳೆಗೆ ಹಾರಿಹೋದ ಚಾವಣಿ

ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…

4 hours ago