ಚಿತ್ರ ಮಂಜರಿ

ಅಪಘಾತ ಪ್ರಕರಣ : ಉದಯೋನ್ಮುಖ ತುಳು ಕಾಮಿಡಿಯನ್ ಅರ್ಪಿತ್ ಅರೆಸ್ಟ್‌

ಮೂಲ್ಕಿ: ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಹಳೆಯಂಗಡಿ-ಪಡುಪಣಂಬೂರು ರಾಷ್ಟ್ರೀಯ ಹೆದ್ದಾರಿಯ ಪೆಟ್ರೋಲ್ ಬಂಕ್ ಬಳಿ ಮಂಗಳವಾರ ಮಧ್ಯರಾತ್ರಿ ಇಬ್ಬರನ್ನು ಬಲಿ ಪಡೆದ ಕಾರು ಅಪಘಾತ  ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಕಾರು ಚಾಲಕನನ್ನು ಮಂಗಳೂರು ಉತ್ತರ ಸಂಚಾರ ಠಾಣಾ ಪೊಲೀಸರು ಬಂಧಿಸಿದ್ದಾರೆ.‌‌

ಆರೋಪಿ ಕಾರು ಚಾಲಕನನ್ನು “ಮ್ಯಾಡ್ ಇನ್ ಕುಡ್ಲ” ಹೆಸರಿನ ಯೂ-ಟ್ಯೂಬರ್ ಹಳೆಯಂಗಡಿ ಇಂದಿರಾನಗರ ನಿವಾಸಿ ಅರ್ಪಿತ್(35) ಎಂದು ಗುರುತಿಸಲಾಗಿದೆ.ಆರೋಪಿಯು ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ.

ಅಪಘಾತಕ್ಕೆ ಕಾರಣವಾದ ಆರೋಪಿಯ ಕಾರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಧ್ಯಪ್ರದೇಶದಿಂದ ಕೇರಳ ಕಡೆಗೆ ಹೋಗುತ್ತಿದ್ದ ಲಾರಿಯ ಟೈರ್ ಪಂಕ್ಚರ್ ಆಗಿತ್ತು. ಲಾರಿಯನ್ನು  ಪಡುಪಣಂಬೂರು ಬಳಿ ಹೆದ್ದಾರಿ ಬದಿ ನಿಲ್ಲಿಸಿ ಚಾಲಕ ಹಾಗೂ ಸಿಬ್ಬಂದಿ ಅದನ್ನು ದುರಸ್ತಿ ಮಾಡುತ್ತಿದ್ದ ವೇಳೆ ಅಪಘಾತ ಸಂಭವಿಸಿತ್ತು.  ಕಾರು ಚಾಲಕ ಅರ್ಪಿತ್ ಅವರು ಅತಿವೇಗ ಮತ್ತು ಅಜಾಗರೂಕತೆಯಿಂದ ಕಾರು ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕಾರು ಹೆದ್ದಾರಿಯ  ಎಡಗಡೆಗೆ ರಭಸವಾಗಿ ನುಗ್ಗಿ  ಡಿಕ್ಕಿ ಹೊಡೆದಿತ್ತು. ಚಾಲಕ ಅರ್ಪಿತ್ ಕಾರನ್ನು ನಿಲ್ಲಿಸದೇ  ಪರಾರಿಯಾಗಿದ್ದರು.  ಬಬುಲು (23), ಆಚಲ್ ಸಿಂಗ್ (30) ಸ್ಥಳದಲ್ಲೇ ಸಾವನ್ನಪ್ಪಿದ್ದು ಅವರ ಶವದ ಭಾಗಗಳು ಹೆದ್ದಾರಿ ತುಂಬಾ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದರು. ಘಟನೆಯಲ್ಲಿ  ಕೇರಳ ನಿವಾಸಿ ಅನೀಶ್(42) ಗಂಭೀರ ಗಾಯಗೊಂಡಿದ್ದರು. ಕಾರು ಅಪಘಾತ ಸಂಭವಿಸಿದ ಸ್ಥಳದಿಂದ ಸ್ವಲ್ಪ ದೂರದಲ್ಲಿ ಯಕ್ಷಗಾನ ನಡೆಯುತ್ತಿತ್ತು. ಪ್ರತ್ಯಕ್ಷದರ್ಶಿಗಳು ನೀಡಿದ ಮಾಹಿತಿ ಹಾಗೂ ಸಿ.ಸಿ.ಟಿ.ವಿ. ಕ್ಯಾಮೆರಾದ ಲ್ಲಿ ದಾಖಲಾದ ದೃಶ್ಯಗಳ ಆಧಾರದಲ್ಲಿ ಆರೋಪಿಯನ್ನು ಬಂಧಿಸಿದ್ದೇವೆ. ಆರೋಪಿಯನ್ಬು ಜಾಮೀನಿನ‌ ಮೇಲೆ ಬಿಡುಗಡೆಗೊಳಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು  ಮಾಹಿತಿ ನೀಡಿದರು.

andolanait

Recent Posts

ಕೆನಡಾದಲ್ಲಿ ಕನ್ನಡಿಗನ ಹತ್ಯೆ ಪ್ರಕರಣ: ಆರೋಪಿ ಭಾವಚಿತ್ರ ಬಿಡುಗಡೆ

ನೆಲಮಂಗಲ: ಕೆನಡಾ ದೇಶದಲ್ಲಿ ಕನ್ನಡಿಗನನ್ನು ಗುಂಡಿಟ್ಟು ಹತ್ಯೆ ಮಾಡಿದ ಪ್ರಕರಣದಲ್ಲಿ ಕೊಲೆ ಮಾಡಿರುವ ಆರೋಪಿ ಭಾವಚಿತ್ರವನ್ನು ಕೆನಡಾದ ಟೊರಂಟೊ ಪೊಲೀಸರು…

55 seconds ago

ಕೊಡಗು ಜಿಲ್ಲೆಯಲ್ಲಿ ಏಪ್ರಿಲ್.‌8ರಿಂದ ಪಾಸ್‌ಪೋರ್ಟ್‌ ಮೇಳ: ಸಂಸದ ಯದುವೀರ್‌ ಒಡೆಯರ್‌ ಮಾಹಿತಿ

ಕೊಡಗು: ಸಂಸದ ಯದುವೀರ್‌ ಕೃಷ್ಣದತತ ಚಾಮರಾಜ ಒಡೆಯರ್‌ ಅವರ ಪರಿಶ್ರಮದ ಫಲವಾಗಿ ಕೊಡಗಿನಲ್ಲಿ ಪಾಸ್‌ಪೋರ್ಟ್‌ ಮೇಳ ಆಯೋಜಿಸಲು ಬೆಂಗಳೂರು ವಿಭಾಗೀಯ…

16 mins ago

ಇರಾನ್‌ ಸರ್ವೋಚ್ಛ ನಾಯಕನಾಗಿ ಅಯತೊಲ್ಲಾ ಅಲಿ ಖಮೇನಿ ಪುತ್ರ ಮೊಜ್ತಬಾ ಖಮೇನಿ ಆಯ್ಕೆ.?

ಟೆಹರಾನ್:‌ ಇರಾನ್‌ ಸರ್ವೋಚ್ಛ ನಾಯಕರಾಗಿದ್ದ ಅಯತೊಲ್ಲಾ ಅಲಿ ಖಮೇನಿಯವರು ಮಗ ಉತ್ತರಾಧಿಕಾಗಲು ಪ್ರಮುಖ ಆಯ್ಕೆಯಾಗಿ ಹೊರಹೊಮ್ಮಿದ್ದಾರೆ. ಇರಾನ್‌ನ ಮುಂದಿನ ಸರ್ವೋಚ್ಛ…

35 mins ago

ರಾಕಿಂಗ್‌ ಸ್ಟಾರ್‌ ಯಶ್‌ ನಟನೆಯ ಟಾಕ್ಸಿಕ್‌ ಸಿನಿಮಾ ಬಿಡುಗಡೆ ದಿನಾಂಕ ಮುಂದೂಡಿಕೆ

ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ ಬಿಗ್‌ ಬಜೆಟ್‌ ಸಿನಿಮಾ ಟಾಕ್ಸಿಕ್‌ ಇರಾನ್-‌ ಇಸ್ರೇಲ್‌ ಯುದ್ಧದ ಕಾರಣದಿಂದಾಗಿ ಮುಂದೂಡಲ್ಪಟ್ಟಿದೆ. ಮಾರ್ಚ್.‌19ರಂದು ಬಿಡುಗಡೆಯಾಗಬೇಕಿದ್ದ…

54 mins ago

ಬೆಟ್ಟಳ್ಳಿ ಮಾರಮ್ಮ ಜಾತ್ರಾ ವಿಶೇಷ: ಸಾವಿರಾರು ಭಕ್ತರ ಸಮ್ಮುಖದಲ್ಲಿ ನಡೆದ ಕಂಬ ಪ್ರತಿಷ್ಠಾಪನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ದೇವಸ್ಥಾನದ ಜಾತ್ರಾ ಮಹೋತ್ಸವ…

2 hours ago

ಹನೂರು| ಚಂಗಡಿ ಗ್ರಾಮದ ಸುತ್ತಮುತ್ತ ಪ್ರತಿನಿತ್ಯ ಹುಲಿ ಓಡಾಟ: ಆತಂಕದಲ್ಲಿ ಸ್ಥಳೀಯರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮದ ಚಂಗಡಿ ಗ್ರಾಮದ ಸಮೀಪ ಪ್ರತಿನಿತ್ಯ…

2 hours ago