ಬಹುಭಾಷಾ ನಟ ನಾಸರ್ ಶೂಟಿಂಗ್ ವೇಳೆ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ತೆಲಂಗಾಣದಲ್ಲಿ ತಮಿಳು ಸಿನಿಮಾವೊಂದರ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದ ನಾಸರ್ ಮೆಟ್ಟಿಲುಗಳಿಂದ ಜಾರಿಬಿದ್ದು ಪೆಟ್ಟು ಕೊಂಡಿದ್ದಾರೆ ಎನ್ನಲಾಗಿದೆ.
ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ವೈದ್ಯರು ಶಸ್ತ್ರ ಚಿಕಿತ್ಸೆ ನೆರವೇರಿಸಿದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ನಟ ನಾಸರ್ ಅವರು ಬಹುಭಾಷೆಯಲ್ಲಿ ನಟಿಸಿ ಫೇಮಸ್ ಆಗಿದ್ದಾರೆ. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಹಾಗೂ ಇಂಗ್ಲಿಷ್ ಸಿನಿಮಾಗಳಲ್ಲಿಯೂ ನಟಿಸಿ ಸೈ ಎನಿಸಿಕೊಂಡಿದ್ದಾರೆ.
ದಕ್ಷಿಣ ಭಾರತದಲ್ಲಿ ಅವರಿಗೆ ಭಾರಿ ಬೇಡಿಕೆ ಇದೆ. ಮೂಲತಃ ತಮಿಳುನಾಡಿನ ಚೆನ್ನೈನವರಾದ ನಾಸರ್ ದೇಶಾದ್ಯಂತ ಅಭಿಮಾನಿಗಳನ್ನು ಹೊಂದಿದ್ದಾರೆ.
ನಾಸನ್ ತೆಲಂಗಾಣ ಪೊಲೀಸ್ ಅಕಾಡೆಮಿಯಲ್ಲಿ ಸಿನಿಮಾ ಶೂಟಿಂಗ್ ಮಾಡುತ್ತಿದ್ದರು. ಅವರ ಜೊತೆ ಸುಹಾಸಿನಿ ಮಣಿರತ್ನಂ, ಮೆಹ್ರೀನ್ ಪೀರ್ಜಾದಾ, ಸಯ್ಯಾಜಿ ಶಿಂಧೆ ಮುಂತಾದ ಕಲಾವಿದರು ಭಾಗಿ ಆಗಿದ್ದರು.
ನಾಸರ್ ಅವರು ಮೆಟ್ಟಿಲುಗಳ ಮೇಲಿಂದ ಬಿದ್ದು ಅವರ ಕಣ್ಣಿನ ಭಾಗಕ್ಕೆ ಪೆಟ್ಟಾಗಿದೆ ಕೂಡಲೆ ಅವರನ್ನು ಆಸ್ಪತ್ರೆಗೆ ದಾಖಲಿಸಿ, ಶಸ್ತ್ರ ಚಿಕಿತ್ಸೆ ಮಾಡಿಸಲಾಗಿದೆ.