ಲಾಸ್ ಏಂಜಲೀಸ್: ಅಮೆರಿಕದ ಲಾಸ್ ಏಂಜಲೀಸ್ ನಲ್ಲಿ ಶೂಟಿಂಗ್ ನಲ್ಲಿ ಪಾಲ್ಗೊಂಡಿದ್ದ ಬಾಲಿವುಡ್ ಕಿಂಗ್ ಖಾನ್ ಶಾರೂಖ್ ಖಾನ್ ಗೆ ಅವಘಡವೊಂದರಲ್ಲಿ ಮೂಗಿನ ಮೇಲೆ ಗಾಯವಾಗಿದ್ದು, ಸಣ್ಣ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಇಟೈಮ್ಸ್ ವರದಿ ಮಾಡಿದೆ.
ಶಾರೂಕ್ ಖಾನ್ ಮೂಗಿನಲ್ಲಿ ರಕ್ತಸ್ರಾವವಾಗುತ್ತಿದ್ದಂತೆಯೇ ಆಸ್ಪತ್ರೆಗೆ ಸಾಗಿಸಲಾಗಿದೆ. ಆತಂಕಪಡುವ ಅಗತ್ಯವಿಲ್ಲ, ರಕ್ತಸ್ರಾವ ನಿಲ್ಲಿಸಲು ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದು ಮೂಲಗಳು ಹೇಳಿವೆ. ಸೂಪರ್ ಸ್ಟಾರ್ ಈಗ ತಮ್ಮ ಮುಂಬೈ ಮನೆಗೆ ಮರಳಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ.
ಕಳೆದ ತಿಂಗಳು ಹಿಂದಿ ಚಲನಚಿತ್ರೋದ್ಯಮದಲ್ಲಿ 31 ವರ್ಷಗಳನ್ನು ಪೂರೈಸಿದ ಶಾರೂಕ್ ಖಾನ್ ಅವರ ಪಠಾಣ್ ಚಿತ್ರ ಬ್ಲಾಕ್‌ಬಸ್ಟರ್ ಆಗುವ ಮೂಲಕ ಹಲವು ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. ಶೀಘ್ರದಲ್ಲೇ ‘ಜವಾನ್’ ಮತ್ತು ‘ಡಂಕಿ’ಯಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ. ಅಟ್ಲಿ ನಿರ್ದೇಶನದ ‘ಜವಾನ್’ ಸೆಪ್ಟೆಂಬರ್ 7 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಚಿತ್ರದಲ್ಲಿ ವಿಜಯ್ ಸೇತುಪತಿ ಮತ್ತು ನಯನತಾರಾ ಕೂಡ ನಟಿಸಿದ್ದಾರೆ.





