ಚಿತ್ರ ಮಂಜರಿ

ಶೂಟಿಂಗ್ ವೇಳೆ ಅವಘಡ: ಶಾರೂಕ್ ಖಾನ್ ಗೆ ಗಾಯ, ಶಸ್ತ್ರ ಚಿಕಿತ್ಸೆ- ವರದಿ

ಲಾಸ್ ಏಂಜಲೀಸ್: ಅಮೆರಿಕದ ಲಾಸ್ ಏಂಜಲೀಸ್ ನಲ್ಲಿ ಶೂಟಿಂಗ್ ನಲ್ಲಿ ಪಾಲ್ಗೊಂಡಿದ್ದ ಬಾಲಿವುಡ್ ಕಿಂಗ್ ಖಾನ್ ಶಾರೂಖ್ ಖಾನ್ ಗೆ ಅವಘಡವೊಂದರಲ್ಲಿ  ಮೂಗಿನ ಮೇಲೆ ಗಾಯವಾಗಿದ್ದು, ಸಣ್ಣ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಇಟೈಮ್ಸ್ ವರದಿ ಮಾಡಿದೆ.

ಶಾರೂಕ್ ಖಾನ್ ಮೂಗಿನಲ್ಲಿ ರಕ್ತಸ್ರಾವವಾಗುತ್ತಿದ್ದಂತೆಯೇ ಆಸ್ಪತ್ರೆಗೆ ಸಾಗಿಸಲಾಗಿದೆ. ಆತಂಕಪಡುವ ಅಗತ್ಯವಿಲ್ಲ, ರಕ್ತಸ್ರಾವ ನಿಲ್ಲಿಸಲು ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದು ಮೂಲಗಳು ಹೇಳಿವೆ. ಸೂಪರ್ ಸ್ಟಾರ್ ಈಗ ತಮ್ಮ ಮುಂಬೈ ಮನೆಗೆ ಮರಳಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ.

ಕಳೆದ ತಿಂಗಳು ಹಿಂದಿ ಚಲನಚಿತ್ರೋದ್ಯಮದಲ್ಲಿ 31 ವರ್ಷಗಳನ್ನು ಪೂರೈಸಿದ ಶಾರೂಕ್ ಖಾನ್ ಅವರ ಪಠಾಣ್ ಚಿತ್ರ ಬ್ಲಾಕ್‌ಬಸ್ಟರ್ ಆಗುವ ಮೂಲಕ ಹಲವು ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. ಶೀಘ್ರದಲ್ಲೇ ‘ಜವಾನ್’ ಮತ್ತು ‘ಡಂಕಿ’ಯಲ್ಲಿ ಅವರು  ಕಾಣಿಸಿಕೊಳ್ಳಲಿದ್ದಾರೆ. ಅಟ್ಲಿ ನಿರ್ದೇಶನದ ‘ಜವಾನ್’ ಸೆಪ್ಟೆಂಬರ್ 7 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಚಿತ್ರದಲ್ಲಿ ವಿಜಯ್ ಸೇತುಪತಿ ಮತ್ತು ನಯನತಾರಾ ಕೂಡ ನಟಿಸಿದ್ದಾರೆ.

andolanait

Recent Posts

ಹನೂರು ತಾಲ್ಲೂಕಿನಲ್ಲಿ ಕೇಂದ್ರ ಬರ ಅಧ್ಯಯನ ತಂಡದಿಂದ ಎರಡನೇ ದಿನದ ಸಮಗ್ರ ಪರಿಶೀಲನೆ

ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…

10 hours ago

ಬಿರುಗಾಳಿ ಮಳೆಗೆ ಬಾಳೆ ಬೆಳೆ ನೆಲಕಚ್ಚಿ:ರೈತರಿಗೆ ಲಕ್ಷಾಂತರ ರೂ. ನಷ್ಟ!

ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…

10 hours ago

ಕಾಡುಪ್ರಾಣಿಗಳ ಹಾವಳಿ ತಡೆಗೆ ಸ್ಟೀಲ್ ರೋಪ್ ಬ್ಯಾರಿಕೇಡ್

ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ  ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…

10 hours ago

ದಸರೆಯಲ್ಲಿ ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದ ಮುಖ್ಯಮಂತ್ರಿ

ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…

11 hours ago

ಪೌರಕಾರ್ಮಿಕರಿಗೆ ಉಚಿತ ಸಾಬೂನು ಗ್ಯಾರಂಟಿ ಕೊಡಿ

ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…

11 hours ago

ಅಸ್ತ್ರಗಳು, ಅಂಧಕಾರ, ಆತಂಕ

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ   ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…

11 hours ago