Mysore
27
broken clouds

Social Media

ಬುಧವಾರ, 15 ಜನವರಿ 2025
Light
Dark

ಬೈಕ್ ಟ್ಯಾಕ್ಸಿಯಲ್ಲಿ ತೆರಳುತ್ತಿದ್ದಾಗ ಅಪಘಾತ: ಉದಯೋನ್ಮುಕ ನಟಿ ಸಾವು

ಶೂಟಿಂಗ್ ಮುಗಿಸಿ ಬೈಕ್ ಟ್ಯಾಕ್ಸಿ ಮೂಲಕ ಮನೆಗೆ ವಾಪಸ್ಸಾಗುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ 29 ವರ್ಷದ ಉದಯೋನ್ಮುಕ ನಟಿಯೊಬ್ಬರು ಮೃತಪಟ್ಟಿದ್ದಾರೆ.

ರಸ್ತೆ ಅಪಘಾತದಲ್ಲಿ ಬಂಗಾಳಿ ಕಿರುತೆರೆ ನಟಿ ಸುಚಂದ್ರ ದಾಸ್‌ಗುಪ್ತ ಮೃತಪಟ್ಟಿದ್ದು ನಟಿಯ ಸಾವಿನಿಂದ ಅವರ ಕುಟುಂಬ ಸದಸ್ಯರು ತೀವ್ರ ಆಘಾತಕ್ಕೊಳಗಾಗಿದ್ದಾರೆ. ನಟಿಯ ಸಾವಿನ ಸುದ್ದಿಯಿಂದ ಅವರ ಅಭಿಮಾನಿಗಳು ಕೂಡ ದುಃಖಿತರಾಗಿದ್ದಾರೆ.

ಮನೆಗೆ ವಾಪಸಾಗುತ್ತಿದ್ದಾಗ ಮಾರ್ಗಮಧ್ಯೆ ಸೈಕಲ್ ತುಳಿಯುತ್ತಿದ್ದ ವ್ಯಕ್ತಿಯೊಬ್ಬರು ಅಡ್ಡ ಬಂದಿದ್ದಾರೆ. ಹೀಗಾಗಿ ಬೈಕ್ ಸವಾರ ಏಕಾಏಕಿ ಬ್ರೇಕ್ ಹಾಕಿದ್ದು ಹಿಂದಿನಿಂದ ಬರುತ್ದಿದ್ದ ಲಾರಿ ಬೈಕ್ ಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಸುಚಂದ್ರ ಬೈಕ್‌ನಿಂದ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಹಿಂಬದಿಯಿಂದ ಬಂದ ಟ್ರಕ್‌ಗೆ ಆಕೆಯ ಮೇಲೆ ಹರಿದಿದ್ದು ನಟಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ನಂತರ ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು ವಾಹನಗಳ ಸಂಚಾರಕ್ಕೂ ಕೆಲಕಾಲ ಅಡಚಣೆ ಉಂಟಾಗಿತ್ತು.

ಅಪಘಾತದ ಸುದ್ದಿ ತಿಳಿದ ಕೂಡಲೇ ಬಾರಾನಗರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಪೊಲೀಸರು ಟ್ರಕ್ ಅನ್ನು ವಶಪಡಿಸಿಕೊಂಡಿದ್ದು ಟ್ರಕ್ ಚಾಲಕನನ್ನು ಬಂಧಿಸಿದ್ದಾರೆ. ನಟಿಯ ನಿಧನದಿಂದಾಗಿ ಬೆಂಗಾಲಿ ಚಿತ್ರರಂಗದಲ್ಲಿ ಶೋಕ ಮಡುಗಟ್ಟಿದೆ.

ಸುಚಂದ್ರ ದಾಸಗುಪ್ತ ಯಾರು?
ಸುಚಂದ್ರ ದಾಸ್‌ಗುಪ್ತ ಬಂಗಾಳಿ ಕಿರುತೆರೆಯಲ್ಲಿ ಪ್ರಸಿದ್ಧ ನಟಿಯರಲ್ಲಿ ಒಬ್ಬರು. ಆಕೆ ಅನೇಕ ಪ್ರಸಿದ್ಧ ಬಂಗಾಳಿ ಟಿವಿ ಕಾರ್ಯಕ್ರಮಗಳಲ್ಲಿ ಕೆಲಸ ಮಾಡಿದ್ದಾರೆ. ‘ಗೌರಿ’ ಚಿತ್ರದಲ್ಲಿ ಪೋಷಕ ಪಾತ್ರದಲ್ಲಿ ನಟಿಸಿ ಸಾಕಷ್ಟು ಜನಪ್ರಿಯತೆ ಗಳಿಸಿದ್ದರು. ನಟಿ ಅಪಾರ ಅಭಿಮಾನಿಗಳನ್ನು ಹೊಂದಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ