ಶೂಟಿಂಗ್ ಮುಗಿಸಿ ಬೈಕ್ ಟ್ಯಾಕ್ಸಿ ಮೂಲಕ ಮನೆಗೆ ವಾಪಸ್ಸಾಗುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ 29 ವರ್ಷದ ಉದಯೋನ್ಮುಕ ನಟಿಯೊಬ್ಬರು ಮೃತಪಟ್ಟಿದ್ದಾರೆ.
ರಸ್ತೆ ಅಪಘಾತದಲ್ಲಿ ಬಂಗಾಳಿ ಕಿರುತೆರೆ ನಟಿ ಸುಚಂದ್ರ ದಾಸ್‌ಗುಪ್ತ ಮೃತಪಟ್ಟಿದ್ದು ನಟಿಯ ಸಾವಿನಿಂದ ಅವರ ಕುಟುಂಬ ಸದಸ್ಯರು ತೀವ್ರ ಆಘಾತಕ್ಕೊಳಗಾಗಿದ್ದಾರೆ. ನಟಿಯ ಸಾವಿನ ಸುದ್ದಿಯಿಂದ ಅವರ ಅಭಿಮಾನಿಗಳು ಕೂಡ ದುಃಖಿತರಾಗಿದ್ದಾರೆ.
ಮನೆಗೆ ವಾಪಸಾಗುತ್ತಿದ್ದಾಗ ಮಾರ್ಗಮಧ್ಯೆ ಸೈಕಲ್ ತುಳಿಯುತ್ತಿದ್ದ ವ್ಯಕ್ತಿಯೊಬ್ಬರು ಅಡ್ಡ ಬಂದಿದ್ದಾರೆ. ಹೀಗಾಗಿ ಬೈಕ್ ಸವಾರ ಏಕಾಏಕಿ ಬ್ರೇಕ್ ಹಾಕಿದ್ದು ಹಿಂದಿನಿಂದ ಬರುತ್ದಿದ್ದ ಲಾರಿ ಬೈಕ್ ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಸುಚಂದ್ರ ಬೈಕ್‌ನಿಂದ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಹಿಂಬದಿಯಿಂದ ಬಂದ ಟ್ರಕ್‌ಗೆ ಆಕೆಯ ಮೇಲೆ ಹರಿದಿದ್ದು ನಟಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ನಂತರ ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು ವಾಹನಗಳ ಸಂಚಾರಕ್ಕೂ ಕೆಲಕಾಲ ಅಡಚಣೆ ಉಂಟಾಗಿತ್ತು.
ಅಪಘಾತದ ಸುದ್ದಿ ತಿಳಿದ ಕೂಡಲೇ ಬಾರಾನಗರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಪೊಲೀಸರು ಟ್ರಕ್ ಅನ್ನು ವಶಪಡಿಸಿಕೊಂಡಿದ್ದು ಟ್ರಕ್ ಚಾಲಕನನ್ನು ಬಂಧಿಸಿದ್ದಾರೆ. ನಟಿಯ ನಿಧನದಿಂದಾಗಿ ಬೆಂಗಾಲಿ ಚಿತ್ರರಂಗದಲ್ಲಿ ಶೋಕ ಮಡುಗಟ್ಟಿದೆ.
ಸುಚಂದ್ರ ದಾಸಗುಪ್ತ ಯಾರು?
ಸುಚಂದ್ರ ದಾಸ್‌ಗುಪ್ತ ಬಂಗಾಳಿ ಕಿರುತೆರೆಯಲ್ಲಿ ಪ್ರಸಿದ್ಧ ನಟಿಯರಲ್ಲಿ ಒಬ್ಬರು. ಆಕೆ ಅನೇಕ ಪ್ರಸಿದ್ಧ ಬಂಗಾಳಿ ಟಿವಿ ಕಾರ್ಯಕ್ರಮಗಳಲ್ಲಿ ಕೆಲಸ ಮಾಡಿದ್ದಾರೆ. ‘ಗೌರಿ’ ಚಿತ್ರದಲ್ಲಿ ಪೋಷಕ ಪಾತ್ರದಲ್ಲಿ ನಟಿಸಿ ಸಾಕಷ್ಟು ಜನಪ್ರಿಯತೆ ಗಳಿಸಿದ್ದರು. ನಟಿ ಅಪಾರ ಅಭಿಮಾನಿಗಳನ್ನು ಹೊಂದಿದ್ದರು.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…