ಬೆಂಗಳೂರು : ಕನ್ನಡ ಚಿತ್ರರಂಗದ ನಟ ದಿವಂಗತ ಚಿರಂಜೀವಿ ಸರ್ಜಾ ಅವರಿಗೆ ಮರಣೋತ್ತರ ‘ಕನ್ನಡ ಕಲಾ ಭೂಷಣ’ ಪ್ರಶಸ್ತಿಯನ್ನು ನೀಡಲಾಗಿದೆ.
ಎರಡು ದಿನ ಅದ್ದೂರಿಯಾಗಿ ನಡೆದ ಈ ಕಾರ್ಯಕ್ರಮದಲ್ಲಿ ಗೆಲುವು ಕನ್ನಡ ಗೆಳೆಯರ ಬಳಗ ಸಮಿತಿ ವತಿಯಿಂದ ನಟ ಚಿರಂಜೀವಿ ಸರ್ಜಾ ಅವರಿಗೆ ಮರಣೋತ್ತರ ಕನ್ನಡ ಕಲಾ ಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಹೋದರ ಹಾಗೂ ನಟ ಧ್ರುವ ಸರ್ಜಾ ಪ್ರಶಸ್ತಿಯನ್ನು ಸ್ವೀಕರಿಸಿ ಎಲ್ಲರಿಗೂ ಧನ್ಯವಾದ ತಿಳಿಸಿದ್ರು. ಈ ವೇಳೆ ಗೆಲುವು ಕನ್ನಡ ಗೆಳೆಯರ ಬಳಗ ಸಮಿತಿ ಅಧ್ಯಕ್ಷ ಕೃಷ್ಣೇಗೌಡ್ರು, ಪ್ರದೀಪ್, ಪ್ರಶಾಂತ್ ಮತ್ತು ತಂಡ ಹಾಜರಿದ್ರು. ವರುಣ್ ಸ್ಟುಡಿಯೋಸ್ ಮತ್ತು ರಾಜ್ ಇವೆಂಟ್ಸ್ ಸಹಯೋಗದಲ್ಲಿ ನಡೆದ ಕರುನಾಡ ಸಂಭ್ರಮ ಯಶಸ್ವಿಯಾಗಿ ತೆರೆ ಕಂಡಿದೆ.
ಕಾರ್ಯಕ್ರಮ ಪ್ರತಿ ವರ್ಷದಂತೆ ಈ ಬಾರಿಯೂ ಕಲರ್ ಫುಲ್ ಆಗಿತ್ತು. ಚಂದನವನದ ಖ್ಯಾತ ತಾರೆಯರು ಭಾಗಿಯಾಗಿ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿದ್ರು. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ‘ಗಿಲ್ಲಕ್ಕೋ ಶಿವ ಗಿಲ್ಲಕ್ಕೋ’ ಹಾಡಿಗೆ ಹೆಜ್ಜೆ ಹಾಕಿ ಕಾರ್ಯಕ್ರಮದ ಎನರ್ಜಿ ಹೆಚ್ಚಿಸಿದ್ರೆ, ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ, ಕಾವ್ಯಾ ಶಾ, ವಿಕ್ರಮ್ ರವಿಚಂದ್ರನ್, ನಿಧಿ ಸುಬ್ಬಯ್ಯ, ಸಂಗೀತಾ ಶೃಂಗೇರಿ, ವಿರಾಟ್ ಸೇರಿದಂತೆ ಹಲವು ತಾರೆಯರು ತಮ್ಮ ಡಾನ್ಸ್ ಮೂಲಕ ನೆರೆದಿದ್ದವರನ್ನು ರಂಜಿಸಿದ್ರು. ಎಸ್. ಪಿ. ಬಿ ಚರಣ್, ಸಿಂಗರ್ ಮನು, ನವೀನ್ ಸಜ್ಜು, ಅನುರಾಧ ಭಟ್, ವಿಜಯ್ ಪ್ರಕಾಶ್ ತಮ್ಮ ಗಾಯನದ ಮೂಲಕ ಕಾರ್ಯಕ್ರಮದ ರಂಗು ಹೆಚ್ಚಿಸಿದ್ರು. ಮಾನ್ವಿತ ಹರೀಶ್, ಸೃಜನ್ ಲೊಕೇಶ್, ಶ್ರೀನಗರ ಕಿಟ್ಟಿ, ರವಿಶಂಕರ್ ಗೌಡ, ರವಿಶಂಕರ್ ಸೇರಿದಂತೆ ಹಲವು ತಾರೆಯರು ಕಲರ್ ಫುಲ್ ಕರುನಾಡ ಸಂಭ್ರಮ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದಾರೆ.