ಚಿತ್ರ ಮಂಜರಿ

ನಟ ಚಿರಂಜೀವಿ ಸರ್ಜಾಗೆ ಮರಣೋತ್ತರ ‘ಕನ್ನಡ ಕಲಾ ಭೂಷಣ’ ಪ್ರಶಸ್ತಿ

ಬೆಂಗಳೂರು : ಕನ್ನಡ ಚಿತ್ರರಂಗದ ನಟ ದಿವಂಗತ ಚಿರಂಜೀವಿ ಸರ್ಜಾ ಅವರಿಗೆ ಮರಣೋತ್ತರ ‘ಕನ್ನಡ ಕಲಾ ಭೂಷಣ’ ಪ್ರಶಸ್ತಿಯನ್ನು ನೀಡಲಾಗಿದೆ.

ಎರಡು ದಿನ‌  ಅದ್ದೂರಿಯಾಗಿ‌ ನಡೆದ ಈ ಕಾರ್ಯಕ್ರಮದಲ್ಲಿ ಗೆಲುವು ಕನ್ನಡ ಗೆಳೆಯರ ಬಳಗ ಸಮಿತಿ ವತಿಯಿಂದ ನಟ ಚಿರಂಜೀವಿ ಸರ್ಜಾ ಅವರಿಗೆ ಮರಣೋತ್ತರ ಕನ್ನಡ ಕಲಾ ಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಹೋದರ ಹಾಗೂ ನಟ ಧ್ರುವ ಸರ್ಜಾ ಪ್ರಶಸ್ತಿಯನ್ನು ಸ್ವೀಕರಿಸಿ ಎಲ್ಲರಿಗೂ ಧನ್ಯವಾದ ತಿಳಿಸಿದ್ರು. ಈ ವೇಳೆ ಗೆಲುವು ಕನ್ನಡ ಗೆಳೆಯರ ಬಳಗ ಸಮಿತಿ ಅಧ್ಯಕ್ಷ ಕೃಷ್ಣೇಗೌಡ್ರು, ಪ್ರದೀಪ್, ಪ್ರಶಾಂತ್ ಮತ್ತು ತಂಡ ಹಾಜರಿದ್ರು. ವರುಣ್ ಸ್ಟುಡಿಯೋಸ್ ಮತ್ತು ರಾಜ್ ಇವೆಂಟ್ಸ್ ಸಹಯೋಗದಲ್ಲಿ ನಡೆದ ಕರುನಾಡ ಸಂಭ್ರಮ‌ ಯಶಸ್ವಿಯಾಗಿ ತೆರೆ ಕಂಡಿದೆ.
ಕಾರ್ಯಕ್ರಮ ಪ್ರತಿ ವರ್ಷದಂತೆ ಈ ಬಾರಿಯೂ ಕಲರ್ ಫುಲ್ ಆಗಿತ್ತು. ಚಂದನವನದ ಖ್ಯಾತ ತಾರೆಯರು ಭಾಗಿಯಾಗಿ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿದ್ರು. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ‘ಗಿಲ್ಲಕ್ಕೋ ಶಿವ ಗಿಲ್ಲಕ್ಕೋ’ ಹಾಡಿಗೆ ಹೆಜ್ಜೆ ಹಾಕಿ ಕಾರ್ಯಕ್ರಮದ ಎನರ್ಜಿ ಹೆಚ್ಚಿಸಿದ್ರೆ, ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ, ಕಾವ್ಯಾ ಶಾ, ವಿಕ್ರಮ್ ರವಿಚಂದ್ರನ್, ನಿಧಿ ಸುಬ್ಬಯ್ಯ, ಸಂಗೀತಾ ಶೃಂಗೇರಿ, ವಿರಾಟ್ ಸೇರಿದಂತೆ ಹಲವು ತಾರೆಯರು ತಮ್ಮ ಡಾನ್ಸ್ ಮೂಲಕ ನೆರೆದಿದ್ದವರನ್ನು ರಂಜಿಸಿದ್ರು. ಎಸ್. ಪಿ. ಬಿ ಚರಣ್, ಸಿಂಗರ್ ಮನು, ನವೀನ್ ಸಜ್ಜು, ಅನುರಾಧ ಭಟ್, ವಿಜಯ್ ಪ್ರಕಾಶ್ ತಮ್ಮ ಗಾಯನದ ಮೂಲಕ ಕಾರ್ಯಕ್ರಮದ ರಂಗು ಹೆಚ್ಚಿಸಿದ್ರು. ಮಾನ್ವಿತ ಹರೀಶ್, ಸೃಜನ್ ಲೊಕೇಶ್, ಶ್ರೀನಗರ ಕಿಟ್ಟಿ, ರವಿಶಂಕರ್ ಗೌಡ, ರವಿಶಂಕರ್ ಸೇರಿದಂತೆ ಹಲವು ತಾರೆಯರು ಕಲರ್ ಫುಲ್ ಕರುನಾಡ ಸಂಭ್ರಮ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದಾರೆ.

andolanait

Recent Posts

ಮೈಸೂರಿನಲ್ಲಿ ಮಾಗಿ ಉತ್ಸವ: ಸಂಗೀತದ ಹೊನಲು ಹರಿಸಿದ ವಿಜಯ್‌ ಪ್ರಕಾಶ್‌

ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್‌ ಪ್ರಕಾಶ್‌ ಅವರು…

10 hours ago

ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…

11 hours ago

ರೈತರಿಗೆ ಮತ್ತೊಂದು ಸಂಕಷ್ಟ: ಈ ಬಾರಿ ಮಾವಿನ ಇಳುವರಿ ಭಾರೀ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…

11 hours ago

ಬಂಡೀಪುರದಲ್ಲಿ ಮತ್ತೊಂದು ಕಾಡಾನೆ ಸಾವು

ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…

11 hours ago

ಪ್ರಮುಖ ಆಕರ್ಷಣೀಯ ಕೇಂದ್ರವಾಗಿ ಹೊರಹೊಮ್ಮಿದ ಅಯೋಧ್ಯೆ ರಾಮಮಂದಿರ

ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್‌ ಒನ್‌ ಪಟ್ಟ ಪಡೆದಿದೆ. ಈ ಮೂಲಕ ಈಗ…

12 hours ago