ಚಿತ್ರ ಮಂಜರಿ

ದರ್ಶನ್‌ ಜತೆಗಿನ ಫೋಟೊ ಹಂಚಿಕೊಂಡ ಪವಿತ್ರಾ ಗೌಡಗೆ ಕಾನೂನು ಹೋರಾಟದ ಎಚ್ಚರಿಕೆ ನೀಡಿದ ವಿಜಯಲಕ್ಷ್ಮಿ!

ಪವಿತ್ರಗೌಡ ವಿಚಾರವಾಗಿ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಮತ್ತೊಮ್ಮೆ ಕೆಂಡಾಮಂಡಲವಾಗಿದ್ದಾರೆ. ಪವಿತ್ರ ಗೌಡ ಅವರ ಪತಿ ಹಾಗೂ ಮಗಳ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಆಕೆ ಯಾರು ಎಂಬ ವಿಷಯವನ್ನು ಬಹಿರಂಗಪಡಿಸುವ ಯತ್ನ ಮಾಡಿದ್ದಾರೆ.

ಅಂದಹಾಗೆ ನಿನ್ನೆ ವಿಜಯಲಕ್ಷ್ಮಿ ದರ್ಶನ್‌ ತಮ್ಮ ಪತಿ ಹಾಗೂ ಮಗನ ಫೋಟೊವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಳ್ಳುವ ಮೂಲಕ ʼಕುಟುಂಬವೇ ನನಗೆಲ್ಲʼ ಎಂದು ಬರೆದುಕೊಂಡಿದ್ದರು. ಇದರ ಬೆನ್ನಲ್ಲೇ ಅತ್ತ ಪವಿತ್ರ ಗೌಡ ದರ್ಶನ್‌ ಜತೆ ತಾನು ಹಾಗೂ ತನ್ನ ಮಗಳು ಕ್ಲಿಕ್ಕಿಸಿಕೊಂಡ ಹಲವಾರು ಫೋಟೊಗಳ ವಿಡಿಯೊವನ್ನು ಹಂಚಿಕೊಂಡು ʼನಮ್ಮ ಸಂಬಂಧಕ್ಕೆ ಹತ್ತು ವರ್ಷಗಳ ಸಂಭ್ರಮ; ಇದು ಶಾಶ್ವತವಾಗಿರಲಿದೆ. ಧನ್ಯವಾದಗಳು ದರ್ಶನ್‌ ಹಾಗೂ ಖುಷಿ ಗೌಡ” ಎಂದು ಬರೆದುಕೊಂಡಿದ್ದರು.

ಹೀಗೆ ವಿಜಯಲಕ್ಷ್ಮಿ ಫೋಟೊಗೆ ಟಾಂಗ್ ಕೊಡುವ ಯತ್ನ ಮಾಡಿದ ಪವಿತ್ರ ಗೌಡಗೆ ದರ್ಶನ್‌ ಪತ್ನಿ ತಿರುಗೇಟು ನೀಡಿದ್ದಾರೆ. ಪವಿತ್ರ ಗೌಡ ಅವರ ಅಸಲಿ ಪತಿ ಯಾರು ಎಂಬುದನ್ನು ಫೋಟೊ ಸಮೇತ ಬಹಿರಂಗಪಡಿಸಿದ್ದಾರೆ. “ಈ ಮಹಿಳೆಗೆ ಪ್ರಜ್ಞೆ ಇದ್ದಿದ್ದರೆ ಮತ್ತೊಬ್ಬರ ಗಂಡನ ಫೋಟೊಗಳನ್ನು ಈ ರೀತಿ ಪೋಸ್ಟ್ ಮಾಡುತ್ತಿರಲಿಲ್ಲ. ಈ ಕೆಲಸ ಆಕೆಯ ನೈತಿಕತೆ ಹಾಗೂ ಆದರ್ಶ ಎಂಥಹದ್ದು ಎಂಬುದನ್ನು ತೋರಿಸುತ್ತದೆ. ವ್ಯಕ್ತಿಯೊಬ್ಬ ವಿವಾಹಿತನೆಂದು ತಿಳಿದಿದ್ದರೂ ಕೂಡ ಈಕೆ ತನ್ನ ವೈಯಕ್ತಿಕ ಅಗತ್ಯಗಳಿಗಾಗಿ ಹಾಗೂ ಲಾಭಕ್ಕಾಗಿ ಆತನಿಗೆ ಹತ್ತಿರವಾಗುತ್ತಾಳೆ. ಪವಿತ್ರಾ ಮತ್ತು ಸಂಜಯ್ ಸಿಂಗ್ ಅವರ ಮಗಳು ಖುಷಿ ಗೌಡ ಎಂಬುದನ್ನು ಈ ಚಿತ್ರಗಳು ಸ್ಪಷ್ಟವಾಗಿ ಸಾಬೀತು ಮಾಡುತ್ತವೆ” ಎಂದು ವಿಜಯಲಕ್ಷ್ಮಿ ತಮ್ಮ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಅಲ್ಲದೇ “ಸಾಮಾನ್ಯವಾಗಿ ನಾನು ವೈಯಕ್ತಿಕ ವಿಷಯಗಳ ಬಗ್ಗೆ ಮಾತನಾಡಲು ಸಾಮಾಜಿಕ ಮಾಧ್ಯಮವನ್ನು ಬಳಸುವುದಿಲ್ಲ. ಆದರೆ ನನ್ನ ಕುಟುಂಬದ ಹಿತದೃಷ್ಟಿಯಿಂದ ಈಗ ಧ್ವನಿ ಎತ್ತುವ ಸಮಯ ಬಂದಿದೆ ಎಂದೆನಿಸುತ್ತದೆ. ಸಮಾಜಕ್ಕೆ ತಪ್ಪು ಚಿತ್ರಣ ನೀಡಲು ಯತ್ನಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಕೆಯನ್ನೂ ಸಹ ನೀಡಿದ್ದಾರೆ.

andolana

Recent Posts

ಹೊಸ ವರ್ಷಾಚರಣೆ: ಮೈಸೂರಿನಲ್ಲಿ ಅಬಕಾರಿ ಪೊಲೀಸರ ಅಲರ್ಟ್

ಮೈಸೂರು: ಹೊಸ ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಕ್ರಮ ಮದ್ಯ ಹಾಗೂ ಮಾದಕ ವಸ್ತುಗಳ ಮಾರಾಟ ತಡೆಯಲು…

1 min ago

ನಂಜನಗೂಡು: ಪೊಲೀಸ್ ಠಾಣೆ ಪಕ್ಕದಲ್ಲೇ ಸರಣಿ ಕಳ್ಳತನ: ಪಟ್ಟಣದಲ್ಲಿ ಆತಂಕ

ನಂಜನಗೂಡು: ಪಟ್ಟಣದಲ್ಲಿ ಸರಣಿ ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿದ್ದು, ನಗರವಾಸಿಗಳಲ್ಲಿ ಆತಂಕ ಮೂಡಿಸಿದೆ. ನಗರದ ಆರ್.ಪಿ. ರಸ್ತೆಯಲ್ಲಿರುವ ಸುಮಾರು 14…

23 mins ago

ಚಾಮರಾಜನಗರದಲ್ಲಿ ಮತ್ತೊಂದು ಹುಲಿ ಸೆರೆ

ಚಾಮರಾಜನಗರ: ಚಾಮರಾಜನಗರ ತಾಲ್ಲೂಕಿನ ಕಲ್ಪುರ ಭಾಗದಲ್ಲಿ ಸಂಚಾರ ಮಾಡುತ್ತಿದ್ದ ಮತ್ತೊಂದು ಹುಲಿಯನ್ನು ಅರವಳಿಕೆ ಚುಚ್ಚುಮದ್ದು ನೀಡಿ ಸೆರೆ ಹಿಡಿಯಲಾಗಿದೆ. ಕಳೆದ…

1 hour ago

ಓದುಗರ ಪತ್ರ: ಇಸ್ಕಾನ್ ಕೃಷ್ಣ ದೇವಾಲಯದ ಬಳಿಯಿದ್ದ ಕಸ ತೆರವು

ಮೈಸೂರಿನ ಜಯನಗರದಲ್ಲಿರುವ ಇಸ್ಕಾನ್ ದೇವಾಲಯದ ಪಕ್ಕದಲ್ಲಿದ್ದ ಕಸದ ರಾಶಿಯನ್ನು ಮೈಸೂರು ಮಹಾನಗರಪಾಲಿಕೆಯಿಂದ ಮಂಗಳವಾರ ತೆರವುಗೊಳಿಸಲಾಗಿದೆ. ಆಂದೋಲನ ದಿನಪತ್ರಿಕೆಯ ಓದುಗರ ಪತ್ರ…

4 hours ago

ಓದುಗರ ಪತ್ರ: ಪ್ರಮುಖ ವೃತ್ತಗಳಲ್ಲಿ ಭಿಕ್ಷುಕರ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ವೃತ್ತಗಳಾದ ಸಿದ್ದಪ್ಪ ಸ್ಕ್ವೇರ್, ಸಂಸ್ಕೃತ ಪಾಠಶಾಲೆ, ವಿ.ವಿ.ಪುರಂ, ತಾತಯ್ಯ ವೃತ್ತ ಮೊದಲಾದ ಕಡೆಗಳಲ್ಲಿ ಭಿಕ್ಷುಕರು, ಅಂಗವಿಕಲರು ಪ್ರತಿನಿತ್ಯ…

4 hours ago

ಓದುಗರ ಪತ್ರ: ರಸ್ತೆಗೆ ಡಾಂಬರೀಕರಣ ಮಾಡಿ, ಯುಜಿಡಿ ಪೈಪ್ ಬದಲಿಸಿ

ಮೈಸೂರಿನ ವೀಣೆ ಶಾಮಣ್ಣ ರಸ್ತೆ ಅವ್ಯವಸ್ಥೆಯ ಆಗರವಾಗಿದೆ. ಒಳಚರಂಡಿ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು, ಪ್ರತಿದಿನವೂ ನಿವಾಸಿಗಳು ಹೊಲಸು ನೀರನ್ನು…

4 hours ago