ಪವಿತ್ರಗೌಡ ವಿಚಾರವಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮತ್ತೊಮ್ಮೆ ಕೆಂಡಾಮಂಡಲವಾಗಿದ್ದಾರೆ. ಪವಿತ್ರ ಗೌಡ ಅವರ ಪತಿ ಹಾಗೂ ಮಗಳ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಆಕೆ ಯಾರು ಎಂಬ ವಿಷಯವನ್ನು ಬಹಿರಂಗಪಡಿಸುವ ಯತ್ನ ಮಾಡಿದ್ದಾರೆ.
ಅಂದಹಾಗೆ ನಿನ್ನೆ ವಿಜಯಲಕ್ಷ್ಮಿ ದರ್ಶನ್ ತಮ್ಮ ಪತಿ ಹಾಗೂ ಮಗನ ಫೋಟೊವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಳ್ಳುವ ಮೂಲಕ ʼಕುಟುಂಬವೇ ನನಗೆಲ್ಲʼ ಎಂದು ಬರೆದುಕೊಂಡಿದ್ದರು. ಇದರ ಬೆನ್ನಲ್ಲೇ ಅತ್ತ ಪವಿತ್ರ ಗೌಡ ದರ್ಶನ್ ಜತೆ ತಾನು ಹಾಗೂ ತನ್ನ ಮಗಳು ಕ್ಲಿಕ್ಕಿಸಿಕೊಂಡ ಹಲವಾರು ಫೋಟೊಗಳ ವಿಡಿಯೊವನ್ನು ಹಂಚಿಕೊಂಡು ʼನಮ್ಮ ಸಂಬಂಧಕ್ಕೆ ಹತ್ತು ವರ್ಷಗಳ ಸಂಭ್ರಮ; ಇದು ಶಾಶ್ವತವಾಗಿರಲಿದೆ. ಧನ್ಯವಾದಗಳು ದರ್ಶನ್ ಹಾಗೂ ಖುಷಿ ಗೌಡ” ಎಂದು ಬರೆದುಕೊಂಡಿದ್ದರು.
ಹೀಗೆ ವಿಜಯಲಕ್ಷ್ಮಿ ಫೋಟೊಗೆ ಟಾಂಗ್ ಕೊಡುವ ಯತ್ನ ಮಾಡಿದ ಪವಿತ್ರ ಗೌಡಗೆ ದರ್ಶನ್ ಪತ್ನಿ ತಿರುಗೇಟು ನೀಡಿದ್ದಾರೆ. ಪವಿತ್ರ ಗೌಡ ಅವರ ಅಸಲಿ ಪತಿ ಯಾರು ಎಂಬುದನ್ನು ಫೋಟೊ ಸಮೇತ ಬಹಿರಂಗಪಡಿಸಿದ್ದಾರೆ. “ಈ ಮಹಿಳೆಗೆ ಪ್ರಜ್ಞೆ ಇದ್ದಿದ್ದರೆ ಮತ್ತೊಬ್ಬರ ಗಂಡನ ಫೋಟೊಗಳನ್ನು ಈ ರೀತಿ ಪೋಸ್ಟ್ ಮಾಡುತ್ತಿರಲಿಲ್ಲ. ಈ ಕೆಲಸ ಆಕೆಯ ನೈತಿಕತೆ ಹಾಗೂ ಆದರ್ಶ ಎಂಥಹದ್ದು ಎಂಬುದನ್ನು ತೋರಿಸುತ್ತದೆ. ವ್ಯಕ್ತಿಯೊಬ್ಬ ವಿವಾಹಿತನೆಂದು ತಿಳಿದಿದ್ದರೂ ಕೂಡ ಈಕೆ ತನ್ನ ವೈಯಕ್ತಿಕ ಅಗತ್ಯಗಳಿಗಾಗಿ ಹಾಗೂ ಲಾಭಕ್ಕಾಗಿ ಆತನಿಗೆ ಹತ್ತಿರವಾಗುತ್ತಾಳೆ. ಪವಿತ್ರಾ ಮತ್ತು ಸಂಜಯ್ ಸಿಂಗ್ ಅವರ ಮಗಳು ಖುಷಿ ಗೌಡ ಎಂಬುದನ್ನು ಈ ಚಿತ್ರಗಳು ಸ್ಪಷ್ಟವಾಗಿ ಸಾಬೀತು ಮಾಡುತ್ತವೆ” ಎಂದು ವಿಜಯಲಕ್ಷ್ಮಿ ತಮ್ಮ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.
ಅಲ್ಲದೇ “ಸಾಮಾನ್ಯವಾಗಿ ನಾನು ವೈಯಕ್ತಿಕ ವಿಷಯಗಳ ಬಗ್ಗೆ ಮಾತನಾಡಲು ಸಾಮಾಜಿಕ ಮಾಧ್ಯಮವನ್ನು ಬಳಸುವುದಿಲ್ಲ. ಆದರೆ ನನ್ನ ಕುಟುಂಬದ ಹಿತದೃಷ್ಟಿಯಿಂದ ಈಗ ಧ್ವನಿ ಎತ್ತುವ ಸಮಯ ಬಂದಿದೆ ಎಂದೆನಿಸುತ್ತದೆ. ಸಮಾಜಕ್ಕೆ ತಪ್ಪು ಚಿತ್ರಣ ನೀಡಲು ಯತ್ನಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಕೆಯನ್ನೂ ಸಹ ನೀಡಿದ್ದಾರೆ.
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…