ತಿರುಪತಿ : ಕಾಲಿವುಡ್ನ ಸ್ಟಾರ್ ನಟ ಧನುಷ್ರವರ ಹೊಸ ಲುಕ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಳೆದ ಕೆಲವು ದಿನಗಳ ಹಿಂದೆ ಮುಂಬೈ ಏರ್ಪೋರ್ಟ್ನಲ್ಲಿ ಕಾಣಿಸಿಕೊಂಡಿದ್ದ ನಟ ಉದ್ದ ಕೂದಲು ಹಾಗೂ ಗಡ್ಡವನ್ನು ಬಿಟ್ಟಿದ್ದರು.
ಇದೀಗ ಹೊಸ ಅವತಾರದಲ್ಲಿ ಕಾಣಿಸಿಕೊಂಡಿರುವ ನಟನನ್ನು ಕಂಡು ಅಭಿಮಾನಿಗಳು ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ. ನಟ ಧನುಷ್ ತಿರುಪತಿ ತಿಮ್ಮಪ್ಪನಿಗೆ ಮುಡಿ ಕೊಟ್ಟಿದ್ದು, ಇದರ ಫೋಟೋ ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕುಟುಂಬ ಸಮೇತರಾಗಿ ತಿಮ್ಮಪ್ಪನ ದರ್ಶನ ಪಡೆದ ನಟ ಧನುಷ್ಗೆ ಅವರ ಮಕ್ಕಳಾದ ಯಾತ್ರ ಹಾಗೂ ಲಿಂಗ ಸಾಥ್ ನೀಡಿದ್ದಾರೆ. ಮೊದಲಿಗೆ ಉದ್ದನೆಯ ಕೂದಲು ಹಾಗೂ ದಾಡಿ ಬಿಟ್ಟಿದ್ದನ್ನು ನೋಡಿ ಅಭಿಮಾನಿಗಳು ಇದು ಅವರ ಹೊಸ ಚಿತ್ರಕ್ಕಾಗಿ ತಯಾರಿ ಎಂದು ಹೇಳಿದ್ದರು. ಇದೀಗ ತಿಮ್ಮಪ್ಪನಿಗೆ ಮುಡಿ ಕೊಟ್ಟಿರುವುದನ್ನು ನೋಡಿ ಹರಕೆ ತೀರಿಸಲು ಕೂದಲು ಬಿಟ್ಟಿದ್ದರು ಎಂದು ಅಭಿಮಾನಿಗಳು ಹೇಳಿದ್ದಾರೆ.
ಇತ್ತೀಚೆಗಷ್ಟೆ ಕ್ಯಾಪ್ಟನ್ ಮಿಲ್ಲರ್ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಲಾಗಿದೆ. ಧನುಷ್ ಲುಕ್ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಕ್ಯಾಪ್ಟನ್ ಮಿಲ್ಲರ್ 1930 ರ ಕಾಲಘಟ್ಟದ ಕಥೆಯಾಗಿದೆ. ಈ ಸಿನಿಮಾದಲ್ಲಿ ಕನ್ನಡದ ಸ್ಟಾರ್ ನಟ ಶಿವರಾಜ್ ಕುಮಾರ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.
ಮಂಡ್ಯ: ಪಾರ್ಸೆಲ್ ಕೊಡುವ ನೆಪದಲ್ಲಿ ಬಂದು ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯದ ಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ. ರಮೇಶ್…
ಬೆಂಗಳೂರು: ನಿವೃತ್ತ ಸಾರಿಗೆ ನೌಕರರಿಗೆ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಗ್ರಾಚ್ಯುಟಿ ಹಣವನ್ನು ಬಿಡುಗಡೆ ಮಾಡಿದೆ. ಗ್ರಾಚ್ಯುಟಿ ಮತ್ತು ಗಳಿಕೆ…
ಬೆಂಗಳೂರು: ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ವೇದಿಕೆಯನ್ನು ಸಿಎಂ ಸಿದ್ದರಾಮಯ್ಯ ದುರುಪಯೋಗಪಡಿಸಿಕೊಂಡಿದ್ದಾರೆ…
ಹೈದರಾಬಾದ್: ಡಿಸೆಂಬರ್.4ರಂದು ಸಂಧ್ಯಾ ಥಿಯೇಟರ್ ಬಳಿ ನಡೆದ ಕಾಲ್ತುಳಿತದಲ್ಲಿ ಮಹಿಳೆಯೋರ್ವರು ಮೃತಪಟ್ಟಿದ್ದು ದುರದೃಷ್ಟಕರ ಎಂದು ನಟ ಅಲ್ಲು ಅರ್ಜುನ್ ಬೇಸರ…
ಬೆಂಗಳೂರು: ಎರಡು ಕಾರು, ಎರಡು ಲಾರಿ ಹಾಗೂ ಶಾಲಾ ಬಸ್ ನಡುವಿನ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ…
ಬೆಂಗಳೂರು: ವಕ್ಫ್ ಮಂಡಳಿಯು ಹಿಂದೂ ಹಾಗೂ ರೈತರ ಆಸ್ತಿ ಕಬಳಿಕೆ ಮಾಡುತ್ತಿರುವ ಬಗ್ಗೆ ಸದನದಲ್ಲಿ ದಾಖಲೆ ಸಮೇತ ಮಾತನಾಡಿದ್ದು, ಈ…