ಚಿತ್ರ ಮಂಜರಿ

ತಿಮ್ಮಪ್ಪನಿಗೆ ಮುಡಿಕೊಟ್ಟು ಹರಕೆ ತೀರಿಸಿದ ನಟ ಧನುಷ್

ತಿರುಪತಿ : ಕಾಲಿವುಡ್​ನ ಸ್ಟಾರ್​ ನಟ ಧನುಷ್​ರವರ ಹೊಸ ಲುಕ್​ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಕಳೆದ ಕೆಲವು ದಿನಗಳ ಹಿಂದೆ ಮುಂಬೈ ಏರ್​ಪೋರ್ಟ್​ನಲ್ಲಿ ಕಾಣಿಸಿಕೊಂಡಿದ್ದ ನಟ ಉದ್ದ ಕೂದಲು ಹಾಗೂ ಗಡ್ಡವನ್ನು ಬಿಟ್ಟಿದ್ದರು.

ಇದೀಗ ಹೊಸ ಅವತಾರದಲ್ಲಿ ಕಾಣಿಸಿಕೊಂಡಿರುವ ನಟನನ್ನು ಕಂಡು ಅಭಿಮಾನಿಗಳು ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ. ನಟ ಧನುಷ್​ ತಿರುಪತಿ ತಿಮ್ಮಪ್ಪನಿಗೆ ಮುಡಿ ಕೊಟ್ಟಿದ್ದು, ಇದರ ಫೋಟೋ ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.

ಕುಟುಂಬ ಸಮೇತರಾಗಿ ತಿಮ್ಮಪ್ಪನ ದರ್ಶನ ಪಡೆದ ನಟ ಧನುಷ್​ಗೆ ಅವರ ಮಕ್ಕಳಾದ ಯಾತ್ರ ಹಾಗೂ ಲಿಂಗ ಸಾಥ್​ ನೀಡಿದ್ದಾರೆ. ಮೊದಲಿಗೆ ಉದ್ದನೆಯ ಕೂದಲು ಹಾಗೂ ದಾಡಿ ಬಿಟ್ಟಿದ್ದನ್ನು ನೋಡಿ ಅಭಿಮಾನಿಗಳು ಇದು ಅವರ ಹೊಸ ಚಿತ್ರಕ್ಕಾಗಿ ತಯಾರಿ ಎಂದು ಹೇಳಿದ್ದರು. ಇದೀಗ ತಿಮ್ಮಪ್ಪನಿಗೆ ಮುಡಿ ಕೊಟ್ಟಿರುವುದನ್ನು ನೋಡಿ ಹರಕೆ ತೀರಿಸಲು ಕೂದಲು ಬಿಟ್ಟಿದ್ದರು ಎಂದು ಅಭಿಮಾನಿಗಳು ಹೇಳಿದ್ದಾರೆ.

ಇತ್ತೀಚೆಗಷ್ಟೆ ಕ್ಯಾಪ್ಟನ್ ಮಿಲ್ಲರ್ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಲಾಗಿದೆ. ಧನುಷ್ ಲುಕ್ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಕ್ಯಾಪ್ಟನ್ ಮಿಲ್ಲರ್ 1930 ರ ಕಾಲಘಟ್ಟದ ಕಥೆಯಾಗಿದೆ. ಈ ಸಿನಿಮಾದಲ್ಲಿ ಕನ್ನಡದ ಸ್ಟಾರ್ ನಟ ಶಿವರಾಜ್ ಕುಮಾರ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

lokesh

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

17 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

18 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

19 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

19 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

1 day ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

1 day ago