ಚಿತ್ರ ಮಂಜರಿ

ರೈಲು ದುರಂತವನ್ನು ತಪ್ಪಿಸಿದ್ದ ಬಾಲಕ ಸಮಯಪ್ರಜ್ಞೆಗೆ ನಟ ಕಿಶೋರ್‌ ಮೆಚ್ಚುಗೆ

ಬೆಂಗಳೂರು : ಬಟ್ಟೆ ನೋಡಿ ಅವರನ್ನು ಗುರುತಿಸಬಹುದು ಎಂದು ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ್ದ ಹೇಳಿಕೆಗೆ ಬಹುಭಾಷಾ ನಟ ಕಿಶೋರ್‌ ಕುಮಾರ್‌ ಅವರು ಪರೋಕ್ಷವಾಗಿ ಟೀಕಿಸಿದ್ದಾರೆ.

ರೈಲ್ವೇ ಹಳಿ ಹಾನಿಗೀಡಾಗಿರುವುದನ್ನು ಕಂಡು ತನ್ನ ಬಟ್ಟೆಯನ್ನೇ ಬಿಚ್ಚಿ ರೈಲು ಚಾಲಕನಿಗೆ ಸಿಗ್ನಲ್‌ ಕೊಟ್ಟು ಭಾರೀ ಅವಘಡವನ್ನು ತಪ್ಪಿಸಿದ 12 ರ ಬಾಲಕ ಮುರ್ಸಲಿನ್ ಶೇಖ್ ಹಾಗೂ ಉತ್ತರಪ್ರದೇಶದಲ್ಲಿ ಮುಸ್ಲಿಂ ಬಾಲಕನಿಗೆ ಇತರೆ ಸಹಪಾಠಿಗಳಿಂದ ಹೊಡೆಸಿದ ಶಿಕ್ಷಕಿಯ ವೈರಲ್‌ ವಿಡಿಯೋದ ಸುದ್ದಿಯನ್ನು ಹಂಚಿಕೊಂಡಿರುವ ಕಿಶೋರ್‌, ದ್ವೇಷ ರಾಜಕೀಯಗಳ ಬಗ್ಗೆ ತಮ್ಮ ಆಕ್ಷೇಪ ಎತ್ತಿದ್ದಾರೆ.

“ತನ್ನ ಸ್ಥಾನದ ಗೌರವ ಘನತೆಯ ಅರಿವಿಲ್ಲದೆ, ಬಟ್ಟೆಯಿಂದ ಭವ್ಯಭಾರತದ ಪ್ರಜೆಗಳನ್ನು ವಿಭಜಿಸುವ ನಾಚಿಕೆಗೇಡು ಸಣ್ಣತನ ಬಿಟ್ಟು ರೈಲಿನೊಳಗಿರುವವರು ಯಾವ ಬಟ್ಟೆಯವರು ಎಂದು ಯೋಚಿಸದೆ ಜೀವ ಉಳಿಸಿದ ಈ ಬಾಲಕನಿಂದ ಮಾನವೀಯತೆಯ ಒಂದೆರಡು ಪಾಠ ಕಲಿತೀರೇ?” ಎಂದು ಕಿಶೋರ್‌ ಪ್ರಶ್ನಿಸಿದ್ದಾರೆ.

ಅದೇ ವೇಳೆ, ಉತ್ತರಪ್ರದೇಶದ ಮುಝಫ್ಫರ್‌ ನಗರದ ಘಟನೆಯ ಬಗ್ಗೆಯೂ ಉಲ್ಲೇಖಿಸಿದ ಕಿಶೋರ್‌, “ಈ ಬಾಲಕನಿಗೆ ಶಾಲೆಯ ಮಕ್ಕಳೆಲ್ಲರ ಕೈಯಲ್ಲಿ ಕಪಾಳಕ್ಕೆ ಹೊಡೆಸುವ, ದನ ತಿಂದರೆಂದು ಇವನ ಕೋಮಿನ ಮನುಷ್ಯರನ್ನೇ ಸಜೀವದಹನ ಮಾಡುವ ಧರ್ಮಾಂಧರಾಗುವುದು ಬಿಟ್ಟು ಮನುಷ್ಯರಾದೀರೇ? ಹಳಿತಪ್ಪಿ ಹೊರಟ ನಮ್ಮ ಜೀವನವನ್ನು ಸರಿದಾರಿಗೆ ತಂದೀರೇ?” ಎಂದು ಪ್ರಶ್ನಿಸಿದ್ದಾರೆ.

ಕಿಶೋರ್‌ ಅವರು ಫೇಸ್‌ಬುಕ್‌ನಲ್ಲಿ ಹಾಕಿರುವ ಈ ಪೋಸ್ಟ್ ನೆಟ್ಟಿಗರ ಗಮನ ಸೆಳೆದಿದೆ.

ರೈಲ್ವೇ ಹಳಿಯ ಮೇಲೆ ನಡೆದು ಹೋಗುತ್ತಿದ್ದ ಬಾಲಕ ಮುರ್ಸಲಿನ್ ಶೇಖ್‌, ಹಾನಿಗೊಳಗಾದ ಹಳಿಯನ್ನು ಗಮನಿಸಿದ್ದಾನೆ. ಅದೇ ಸಮಯದಲ್ಲಿ ಎದುರಿನಿಂದ ರೈಲು ಬರುವುದನ್ನು ಕಂಡ ಬಾಲಕ, ತನ್ನ ಸಮಯ ಪ್ರಜ್ಞೆಯಿಂದ ಸಂಭಾವ್ಯ ರೈಲು ದುರಂತವನ್ನು ತಪ್ಪಿಸಿದ್ದಾನೆ.

ಗಲಭೆಕೋರರನ್ನು ಅವರ ಉಡುಪಿನಿಂದಲೇ ಗುರುತಿಸಬಹುದು ಎಂದು ಈ ಹಿಂದೆ ಪ್ರಧಾನಿ ಮೋದಿ ಸಾರ್ವಜನಿಕ ಸಮಾವೇಶವೊಂದರಲ್ಲಿ ಹೇಳಿದ್ದು ಮುಸ್ಲಿಮರ ಬಗ್ಗೆ ಈ ರೀತಿ ಪರೋಕ್ಷ ಅವಹೇಳನ ಮಾಡಿದ್ದಾರೆ ಎಂದು ಭಾರೀ ಚರ್ಚೆಗೆ ಕಾರಣವಾಗಿತ್ತು.

ರೈಲ್ವೇ ಅಧಿಕಾರಿಗಳು ಸಮಯಪ್ರಜ್ಞೆ ಮೆರೆದ ಬಾಲಕನಿಗೆ ಪ್ರಮಾಣಪತ್ರ ಮತ್ತು ನಗದು ಪುರಸ್ಕಾರವನ್ನು ನೀಡಿ ಗೌರವಿಸಿದ್ದಾರೆ.

andolanait

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

9 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

10 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

11 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

12 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

15 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

16 hours ago