ಚಿತ್ರ ಮಂಜರಿ

ತ್ರಿಶಾ, ಖುಷ್ಬು ಮತ್ತು ಚಿರಂಜೀವಿ ವಿರುದ್ದ ಮಾನಹಾನಿ ಕೇಸ್‌ ದಾಖಲಿಸಿದ ನಟ ಮನ್ಸೂರ್‌ ಅಲಿ ಖಾನ್‌

ಚೆನ್ನೈ : ನಟಿ ತ್ರಿಶಾ, ಖುಷ್ಬು ಮತ್ತು ನಟ ಚಿರಂಜೀವಿ ಅವರು ಸಾಮಾಜಿಕ ಜಾಲತಾಣದಲ್ಲಿ ನನ್ನ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಮಾಡಿದ್ದಾರೆ ಎಂದು ಖ್ಯಾತ ಖಳನಟ ಮನ್ಸೂರ್‌ ಅಲಿ ಖಾನ್‌ ಮಾನಹಾನಿ ಮೊಕದ್ದಮೆ ಹೂಡಿದ್ದಾರೆ ಎಂದು livelaw.com ವರದಿ ಮಾಡಿದೆ.

ನಟಿ ತ್ರಿಶಾ ಕೃಷ್ಣನ್, ಖುಷ್ಬು ಸುಂದರ್‌ ಮತ್ತು ನಟ ಚಿರಂಜೀವಿ ಕೊನಿಡೇಲಾ ಅವರು ತಮ್ಮ ವಿರುದ್ಧ ಎಕ್ಸ್‌  ಪೋಸ್ಟ್‌ನಲ್ಲಿ ಮಾನಹಾನಿಕಾರಕ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿರುವ‌ ನಟ ಮನ್ಸೂರ್‌ ಅಲಿ ಖಾನ್‌ ಅವರು ಮದ್ರಾಸ್‌ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಇದಕ್ಕೂ ಮುನ್ನಾ ದಳಪತಿ ವಿಜಯ್‌ ನಟನೆಯ, ಲೋಕೆಶ್‌ ಕನಕರಾಜ್‌ ನಿರ್ದೇಶನದ ʼಲಿಯೋʼ ಸಿನಿಯಾ ಭರ್ಜರಿ ಯಶಸ್ಸು ಕಂಡ ಹಿನ್ನೆಲೆಯಲ್ಲಿ ಯಶಸ್ಸು ಕುರಿತು ಮಾಧ್ಯಮಗಳೊಂದಿಗೆ ಮಾತನಾಡುವಾಗ ಸಹ ನಟಿ ತ್ರಿಶಾ ಕುರಿತು ಮನ್ಸೂರ್‌ ಕೆಲವೊಂದು ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರು.

ಈ ಹೇಳಿಕೆಗಳು ಮಹಿಳಾ ದ್ವೇಷ ಹಾಗೂ ಅಗೌರವಯುತವಾದದ್ದು ಎಂದು ಸಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವಿರೋಧ ವ್ಯಕ್ತವಾಗಿತ್ತು. ನಟಿ ತ್ರಿಶಾ ಸಾಮಾಜಿಕ ಜಾಲತಾಣದಲ್ಲಿ ಮನ್ಸೂರ್‌ ಅಲಿ ಖಾನ್‌ ಅವರ ಹೇಳಿಕೆಯನ್ನು ಖಂಡಿಸಿದ್ದರು. ವ್ಯಾಪಕವಾಗಿ ವಿರೋಧ ವ್ಯಕ್ತವಾಗುತ್ತಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕ ಕ್ಷಮಾಪಣೆಯನ್ನು ಮನ್ಸೂರ್‌ ಅಲಿ ಖಾನ್‌ ಕೋರಿದ್ದರು.

ಈ ಬಗ್ಗೆ ಚೆನ್ನೈ ಪೊಲೀಸರು ಮನ್ಸೂರ್‌ ಅಲಿ ಖಾನ್‌ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್‌ ೩೪೫ಎ ಹಾಗೂ ೫೦೯ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು. ಈ ಸಂಬಂಧ ಕೋರ್ಟ್‌ ಮೊರೆ ಹೋಗಿದ್ದ ಮನ್ಸೂರ್‌ಗೆ ಪ್ರಕರಣದ ವಿವರಗಳು ಲಭ್ಯವಿಲ್ಲದೇ ಇರುವುದರಿಂದ ಅವರ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿತ್ತು.

ಲಿಯೋ ನಿರ್ದೇಶಕ ಲೋಕೇಶ್‌ ಕನಕರಾಜ್‌ ಅವರು ಮನ್ಸೂರ್‌ ಅಲಿ ಖಾನ್‌ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದರು.

andolanait

Recent Posts

ಮಳವಳ್ಳಿ| ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಮಗ

ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…

4 hours ago

ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ನಿವೃತ್ತ ಯೋಧ ಆತ್ಮಹತ್ಯೆ

ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…

4 hours ago

ರೈತ ದಿನಾಚರಣೆಯನ್ನು ರಾಷ್ಟ್ರೀಯ ಹಬ್ಬವನ್ನಾಗಿ ಆಚರಿಸಬೇಕು: ರೈತ ಮುಖಂಡ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಆಗ್ರಹ

ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…

5 hours ago

ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜ್‌ಗೆ ಬಿಗ್‌ ಶಾಕ್‌

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್‌ ಜಾಮೀನು ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದೆ. ಈ…

6 hours ago

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಎಚ್.ಡಿ.ಕುಮಾರಸ್ವಾಮಿ: ಕಾರಣ ಇಷ್ಟೇ

ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್‌ ಎಕ್ಸ್…

6 hours ago

ಹಾಸನ| ಮಗುವಿಗೆ ಜನ್ಮ ನೀಡಿದ ಬಾಲಕಿ: ಆರೋಪಿ ಬಂಧನ

ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್‌ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…

6 hours ago