ಲಾಸ್ ಏಂಜಲೀಸ್ : ಭಾರಿ ಜನಪ್ರಿಯ ಟಿವಿ ಶೋ ‘ಫ್ರೆಂಡ್ಸ್’ನ ಖ್ಯಾತ ನಟ ಮ್ಯಾಥ್ಯೂ ಪೆರ್ರಿ ಶನಿವಾರ ತಮ್ಮ ನಿವಾಸದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಅಮೆರಿಕಾ ಮಾಧ್ಯಮಗಳು ವರದಿ ಮಾಡಿವೆ. ಅವರಿಗೆ 54 ವರ್ಷ ವಯಸ್ಸಾಗಿತ್ತು. ಪೆರ್ರಿ ತಮ್ಮ ನಿವಾಸದಲ್ಲಿನ ಬಾತ್ ಟಬ್ ನಲ್ಲಿ ಪ್ರಜ್ಞಾನಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು ಎಂದು ವರದಿಯಾಗಿದೆ.
“ನಾವು ಈ ಕುರಿತ ಕರೆಗೆ ಸಂಜೆ 4.30 ಗಂಟೆಗೆ ಸ್ಪಂದಿಸಿದೆವು. ಇದು 50 ವರ್ಷ ವಯಸ್ಸಿನ ಪುರುಷರೊಬ್ಬರ ಕುರಿತ ಸಾವಿನ ತನಿಖೆಯಾಗಿದೆ” ಎಂದು ಸಂತ್ರಸ್ತ ವ್ಯಕ್ತಿಯ ಹೆಸರನ್ನು ದೃಢಪಡಿಸದೆ ಲಾಸ್ ಏಂಜಲೀಸ್ ಪೊಲೀಸ್ ಇಲಾಖೆಯ ವಕ್ತಾರರು AFP ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
‘ಕೊಳ, ಸ್ಪಾ, ಸ್ನಾನದ ಟಬ್ ಅಥವಾ ಕಾರಂಜಿ’ಯನ್ನು ಉಲ್ಲೇಖಿಸಿ ಹೇಳಲಾಗುವ ತುರ್ತು ಜಲ ಅವಘಡ ಕರೆಗೆ ನಾವು ಸ್ಪಂದಿಸಿದೆವು ಎಂದು ಅಗ್ನಿಶಾಮಕ ಇಲಾಖೆಯ ವಕ್ತಾರರೊಬ್ಬರು ದೃಢಪಡಿಸಿದ್ದರೂ, ಪೆರ್ರಿ ನೀರಿನಲ್ಲಿ ಮುಳುಗಿದ್ದಾರೆ ಎಂಬ ಸುದ್ದಿಯನ್ನು ಅವರೂ ದೃಢಪಡಿಸಿಲ್ಲ.
1994-2004ರವರೆಗೆ 10 ಋತುವಿನಲ್ಲಿ ಪ್ರಸಾರವಾದ ಜನಪ್ರಿಯ ‘ಫ್ರೆಂಡ್ಸ್’ ಟಿವಿ ಶೋನಲ್ಲಿ ಚಾಂಡ್ಲರ್ ಬಿಂಗ್ ಪಾತ್ರ ನಿರ್ವಹಿಸುವ ಮೂಲಕ ಪೆರ್ರಿ ಖ್ಯಾತರಾಗಿದ್ದರು.
ಅವರು ಕೊನೆಯವರೆಗೂ ಅವಿವಾಹಿತರಾಗಿಯೇ ಉಳಿದಿದ್ದರು.
ಪೆರ್ರಿ ಸಂಬಂಧಿಕರು ಈ ಕುರಿತು ತಕ್ಷಣವೇ ಪ್ರತಿಕ್ರಿಯೆಗೆ ದೊರೆತಿಲ್ಲ ಎಂದು AFP ಸುದ್ದಿ ಸಂಸ್ಥೆ ವರದಿ ಮಾಡಿದೆ.
ಮಂಡ್ಯ : ಪೌತಿ ಖಾತಾ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು. ಮುಂದಿನ ಆರು ತಿಂಗಳುಗಳೊಳಗೆ ಪೌತಿ ಖಾತಾ ಆಂದೋಲನದಲ್ಲಿ ಯಾವುದೇ…
ಬೆಂಗಳೂರು : ಉದ್ಯೋಗ ಖಾತರಿಯನ್ನು ಇಲ್ಲವಾಗಿಸುವ ಮತ್ತು ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವ್ಯತಿರಿಕ್ತವಾಗಿರುವ ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು…
ಬೆಂಗಳೂರು : ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿದ್ದ ಕ್ರಿಮಿನಲ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಬಿಗ್ ರಿಲೀಫ್…
ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು…
ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…
ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…