ಬೆಂಗಳೂರು : ಭಾರತೀಯ ಚಿತ್ರರಂಗದ ಪ್ರಮುಖ ನಟರಲ್ಲಿ ಒಬ್ಬರಾದ ನಟ ಪ್ರಕಾಶ್ ರಾಜ್ ಅವರು ದಕ್ಷಿಣ ಚಿತ್ರರಂಗದಲ್ಲಿ ಮಾತ್ರವಲ್ಲದೆ ಬಾಲಿವುಡ್‌ನಲ್ಲೂ ತಮ್ಮ ನಟನೆಯ ಮೂಲಕ ಪ್ರೇಕ್ಷಕರಿಂದ ಮೆಚ್ಚುಗೆ ಗಳಿಸಿದವರು. ಅವರು ಟ್ವೀಟ್ಗಳ ಮೂಲಕ ಪ್ರಧಾನಿ ಮೋದಿ, ಕೇಂದ್ರ ಸರ್ಕಾರವನ್ನು ಆಗಾಗ ಪ್ರಶ್ನಿಸುತ್ತಿರುತ್ತಾರೆ. ಜಸ್ಟ್ ಆಸ್ಕಿಂಗ್ ಎಂಬ ಹ್ಯಾಷ್ ಟ್ಯಾಗ್ ಮೂಲಕ ಇವರು ಹಲವಾರು ಪ್ರಶ್ನೆಗಳನ್ನು ಕೇಳುತ್ತಿರುತ್ತಾರೆ. ಇದೀಗ ಚಂದ್ರಯಾನದ ಬಗ್ಗೆ ಇವರು ಮಾಡಿದ ಟ್ವೀಟ್ ಗೆ ನೆಟ್ಟಿಗರು ಗರಂ ಆಗಿದ್ದಾರೆ.
ಚಂದ್ರಯಾನ-3 ಲ್ಯಾಂಡಿಂಗ್‌ಗೆ ಮುನ್ನ ಇಸ್ರೋ ಮಾಜಿ ಮುಖ್ಯಸ್ಥ ಕೆ ಶಿವನ್ ಅವರನ್ನು ಅಪಹಾಸ್ಯ ಮಾಡಿದ ಟ್ವೀಟ್ ಇದಾಗಿದ್ದು, ಪ್ರಕಾಶ್ ರಾಜ್ ಅವರಿಂದ ಇದು ನಿರೀಕ್ಷಿಸಿರಲಿಲ್ಲ ಎಂದು ಹಲವಾರು ನೆಟ್ಟಿಗರು ಪ್ರತಿಕ್ರಿಯಿಸಿದ್ದಾರೆ.
ಒಂದೆಡೆ, ಚಂದ್ರನ ಮೇಲ್ಮೈಯಲ್ಲಿ ವಿಕ್ರಮ್ ಲ್ಯಾಂಡರ್ ಅನ್ನು ಸುರಕ್ಷಿತವಾಗಿ ಇಳಿಸಲು ಎಲ್ಲ ವಿಧದ ಸಿದ್ಧತೆಗಳು ನಡೆಯುತ್ತಿವೆ. ದೇಶದಾದ್ಯಂತ ಜನರು ಇದಕ್ಕಾಗಿ ಪ್ರಾರ್ಥನೆ, ಪೂಜೆಗಳನ್ನೂ ಮಾಡುತ್ತಿದ್ದಾರೆ. ಇಂಥಾ ಹೊತ್ತಲ್ಲೇ ಪ್ರಕಾಶ್ ರಾಜ್ ಅವರ ಇಸ್ರೋ ಮಾಜಿ ಮುಖ್ಯಸ್ಥ ಕೆ ಶಿವನ್ ಚಹಾವನ್ನು ಸುರಿಯುತ್ತಿರುವ ವ್ಯಂಗ್ಯಚಿತ್ರವನ್ನು ಒಳಗೊಂಡ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ.
“ಬ್ರೇಕಿಂಗ್ ನ್ಯೂಸ್ ವಿಕ್ರಂ ಲ್ಯಾಂಡರ್ ಮೂಲಕ ಚಂದ್ರನಿಂದ ಬರುವ ಮೊದಲ ಚಿತ್ರ Wowww #justasking ಎಂದು ಶೀರ್ಷಿಕೆ ಕೊಟ್ಟಿದ್ದಾರೆ.
BREAKING NEWS:-
First picture coming from the Moon by #VikramLander Wowww #justasking pic.twitter.com/RNy7zmSp3G— Prakash Raj (@prakashraaj) August 20, 2023
ಪ್ರಕಾಶ್ ರಾಜ್ ಅವರ ವ್ಯಂಗ್ಯಕ್ಕೆ ಖಾರವಾಗಿ ಪ್ರತಿಕ್ರಿಯಿಸಿದ ನೆಟ್ಟಿಗರಲ್ಲೊಬ್ಬರು,, ನಿಮ್ಮ ದೇಶ ಮತ್ತು ನಿಮ್ಮ ಸ್ವಂತ ಜನರ ಪ್ರಗತಿ, ಸಾಧನೆಗಳು ಮತ್ತು ಪ್ರಯತ್ನಗಳನ್ನು ನೀವು ದ್ವೇಷಿಸಲು ಪ್ರಾರಂಭಿಸುವಷ್ಟು ದ್ವೇಷವು ನಿಮ್ಮನ್ನು ಆವರಿಸದಿರಲುಸಲು ಬಿಡಬೇಡಿ. ಇದು ಕೇವಲ ಜೀವನವನ್ನು ವ್ಯರ್ಥ ಮಾಡುತ್ತದೆ ಎಂದಿದ್ದಾರೆ.
Never let hate consume you so much that you begin to hate the progress ,achievements and endeavours of your country & your own people.
This is just such a sad waste of a life… https://t.co/9qMPwOapcY
— Smita Barooah (@smitabarooah) August 20, 2023
ಇಸ್ರೋ ಭಾರತದ ಅತ್ಯುತ್ತಮವನ್ನು ಪ್ರತಿನಿಧಿಸುತ್ತದೆ. ಇದು ಅತ್ಯಲ್ಪ ಸಂಪನ್ಮೂಲಗಳು ಮತ್ತು ನಿರಾಶಾವಾದಿ ವಾತಾವರಣದ ನಡುವೆಯೂ ಶ್ರೇಷ್ಠತೆಯನ್ನು ಸಾಧಿಸಿತು. ಬೆರಳೆಣಿಕೆಯ ರಾಷ್ಟ್ರಗಳು ಮಾತ್ರ ಸಾಧಿಸಿದ್ದನ್ನು ಪ್ರಯತ್ನಿಸುತ್ತಿರುವ ಇಸ್ರೋ ಇದೀಗ ಅತ್ಯುತ್ತಮ ಸ್ಥಾನದಲ್ಲಿದೆ. ಈ ಮನುಷ್ಯ ಭಾರತದ ಕೆಟ್ಟದ್ದನ್ನು ಪ್ರತಿನಿಧಿಸುತ್ತಾನೆ. ತನಗೆ ತುಂಬಾ ಕೊಟ್ಟ ಆ ರಾಷ್ಟ್ರವನ್ನು ದ್ವೇಷಿಸುತ್ತಾನೆ ಎಂದು ಇನ್ನೊಬ್ಬರು ಬರೆದಿದ್ದಾರೆ.
ಪ್ರಕಾಶ್ ರಾಜ್ ಅವರು ಸೆಪ್ಟೆಂಬರ್ 2017 ರಲ್ಲಿ ತಮ್ಮ ಸ್ನೇಹಿತೆ ಗೌರಿ ಲಂಕೇಶ್ ಹತ್ಯೆಯಾದ ನಂತರ #justasking ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ತಮ್ಮ ರಾಜಕೀಯ ಚಳುವಳಿಯನ್ನು ಪ್ರಾರಂಭಿಸಿದರು. ಅವರು 2019ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರಕ್ಕೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದರು.
ಚಂದ್ರಯಾನ-3 ಆಗಸ್ಟ್ 23, 2023 ರಂದು (ಬುಧವಾರ), ಸುಮಾರು 18:04 IST ರಂದು ಚಂದ್ರನ ಮೇಲೆ ಇಳಿಯಲಿದೆ. ಇಸ್ರೋ ಚಂದ್ರನ ಮೇಲೆ ಯಶಸ್ವಿ ಸಾಫ್ಟ್ ಲ್ಯಾಂಡಿಂಗ್ ಮಾಡಲು ಸಿದ್ಧತೆ ನಡೆಸುತ್ತಿದೆ. ಎಲ್ಲವೂ ಯೋಜನೆಯಂತೆ ನಡೆದರೆದು ಯುನೈಟೆಡ್ ಸ್ಟೇಟ್ಸ್, ರಷ್ಯಾ ಮತ್ತು ಚೀನಾ ನಂತರ ಈ ಸಾಧನೆ ಮಾಡಿದ ವಿಶ್ವದ ನಾಲ್ಕನೇ ರಾಷ್ಟ್ರವಾಗಲಿದೆ ಭಾರ. ಚಂದ್ರಯಾನ-3 ಮಿಷನ್‌ನ ಲ್ಯಾಂಡರ್‌ಗೆ ವಿಕ್ರಮ್ ಸಾರಾಭಾಯ್ (1919-1971) ಹೆಸರಿಡಲಾಗಿದೆ, ಅವರು ಭಾರತೀಯ ಬಾಹ್ಯಾಕಾಶ ಕಾರ್ಯಕ್ರಮದ ಪಿತಾಮಹ ಎಂದು ವ್ಯಾಪಕವಾಗಿ ಪರಿಗಣಿಸಲ್ಪಟ್ಟಿದ್ದಾರೆ.
ಪ್ರಕಾಶ್ ರಾಜ್ ಅವರು ಐದು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು, ಎಂಟು ನಂದಿ ಪ್ರಶಸ್ತಿಗಳು, ಎಂಟು ತಮಿಳುನಾಡು ರಾಜ್ಯ ಚಲನಚಿತ್ರ ಪ್ರಶಸ್ತಿಗಳು, ಐದು ಫಿಲ್ಮ್‌ಫೇರ್ ಪ್ರಶಸ್ತಿಗಳು ಸೌತ್, ನಾಲ್ಕು SIIMA ಪ್ರಶಸ್ತಿಗಳು, ಮೂರು CineMAA ಪ್ರಶಸ್ತಿಗಳು ಮತ್ತು ಮೂರು ವಿಜಯ್ ಪ್ರಶಸ್ತಿಗಳು ಸೇರಿದಂತೆ ಹಲವಾರು ಪುರಸ್ಕಾರಗಳನ್ನು ಪಡೆದಿದ್ದಾರೆ.